ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿದ್ದಾರೆ.
ಮೃತ ಉಪತಹಶೀಲ್ದಾರ್ ತಿಮ್ಮಯ್ಯ (52), ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಅವರು ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಪ್ರಸ್ತುತ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರಾಗಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿದ್ದೀರಾ?ಹಾಸನ | ರಸ್ತೆ ಅಪಘಾತ: ವ್ಯಕ್ತಿ ಸಾವು
ಸಾವಿಗೂ ಮುನ್ನ ತಿಮ್ಮಯ್ಯ ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿಯಬೇಕಿದೆ.





