ಹಾಸನ | ಕೋರ್ಟ್‌ಗೆ ಹಾಜರಾಗದ ತಹಶೀಲ್ದಾರ್; ಬಂಧನಕ್ಕೆ ಆದೇಶ

Date:

ಪ್ರಕರಣವೊಂದರಲ್ಲಿ ವಿವರಣೆ ನೀಡಲು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ, ಕೋರ್ಟ್‌ಗೆ ಹಾಜರಾಗದ ತಹಶೀಲ್ದಾರ್‌ರನ್ನು ಬಂಧಿಸಿ, ಹಾಜರುಪಡಿಸುವಂತೆ ಹಾಸನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

- Advertisement -

ಗುರುವಾರ ಕೋರ್ಟ್‌ಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್‌ ನೀಡಿತ್ತು. ಆದರೂ, ಹಾಸನ ತಹಶೀಲ್ದಾರ್ ಶ್ವೇತಾ ಅವರು ಹಾಜರಾಗಿರಲಿಲ್ಲ. ಹೀಗಾಗಿ, ಅವರನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಬೇಕೆಂದು ಆದೇಶಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೋರ್ಟ್‌ ಆದೇಶದಂತೆ ತಹಶೀಲ್ದಾರ್ ಶ್ವೇತಾ ಅವರನ್ನು ಬಂಧಿಸಲು ಕೋರ್ಟ್‌ ವಕೀಲರ ತಂಡ ತಹಶೀಲ್ದಾರ್‌ ಕಚೇರಿಗೆ ತೆರಳಿತ್ತು. ಆದರೆ, ಅವರು ಸಿಗದ ಕಾರಣ, ಹಿಂದಿರುಗಿದೆ.

ಪ್ರಕರಣದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೋರ್ಟ್ ವಕೀಲ ಎಸ್‌.ಎನ್‌. ಮೂರ್ತಿ, “ಹಾಸನ ಬಳಿಕ ಭುವನಹಳ್ಳಿ ಗ್ರಾಮದ ಹೇಮಾ ರಂಗಸ್ವಾಮಿ ಎಂಬವರು 2008ರಲ್ಲಿ ಭೂವಿವಾದಕ್ಕೆ ಸಂಬಂಧಿಸಿದಂತೆ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌, ಜಮೀನಿನ ಸರ್ವೇ ನಡೆಸಿ, ಹದ್ದುಬಸ್ತು ದರಸ್ತಿ ಮಾಡಿಸಿಕೊಡುವಂತೆ ಭೂಮಾಪನ ಇಲಾಖೆ ಮತ್ತು ತಹಶೀಲ್ದಾರ್‌ಗೆ 2014ರಲ್ಲಿ ಕೋರ್ಟ್‌ ಆದೇಶಿಸಿತ್ತು. ಆದರೆ, ಈವರೆಗೆ ಆದೇಶ ಜಾರಿಗೆ ಬಂದಿಲ್ಲ” ಎಂದು ಹೇಳಿದ್ದಾರೆ.

“ಕೋರ್ಟ್‌ ಆದೇಶವನ್ನು ಜಾರಿಗೊಳಿಸದ ಬಗ್ಗೆ ವರದಿ ಮಾಡುವಂತೆ ಮತ್ತು ವಿಚಾರಣೆಗೆ ಹಾಜರಾಗುವಂತೆ ಎರಡು-ಮೂರು ಬಾರಿ ನೋಟಿಸ್ ಜಾರಿ ಮಾಡಿದರೂ, ತಹಶೀಲ್ದಾರ್ ನ್ಯಾಯಾಲಯಕ್ಕೆ ಹಾಜರಾಗಿಲ್ಲ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...