ಹಾಸನ | 4 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ; ಶಾಸಕ ಸಿ.ಎನ್.ಬಾಲಕೃಷ್ಣ

Date:

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬು ಬೆಳೆಗಾರರ ಜೀವನಾಡಿಯಾಗಿರುವ ಶ್ರೀನಿವಾಸಪುರದ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಮರಿಸುವಿಕೆಗೆ ಚಾಲನೆ ನೀಡಲಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.

- Advertisement -

ತಾಲ್ಲೂಕಿನ ಶ್ರೀನಿವಾಸಪುರದಲ್ಲಿನ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವಿಕೆಗೆ ಚಾಲನೆ ನೀಡಿ ಮಾತನಾಡಿದ ಅವರು, 5ಲಕ್ಷ ಟನ್‌ ಕಬ್ಬನ್ನು ಅರೆಯುವಿಕೆಗೆ ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆ ಮುಂದಾಗಿದ್ದು, ನಮ್ಮ ವ್ಯಾಪ್ತಿಯಲ್ಲಿ 4ಲಕ್ಷ ಟನ್ ಕಬ್ಬು ಬೆಳೆಯಲಾಗಿದೆ. ಹೆಚ್ಚುವರಿಯಾಗಿ ಅವಶ್ಯವಿರುವ ಇನ್ನೊಂದು ಟನ್‌ ಕಬ್ಬನ್ನು ಪಕ್ಕದ ಜಿಲ್ಲೆಗಳಿಂದ ತರಿಸಿಕೊಳ್ಳವಲ್ಲಿ ಕಾರ್ಖಾನೆ ಮುಂದಾಗಿದೆ. ಕಬ್ಬು ಉತ್ಕೃಷ್ಟವಾಗಿ ಬೆಳೆದಿದ್ದು, ಈ ಬಾರಿ ಇಳುವರಿಯೂ ಉತ್ತಮವಾಗಿರಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇನ್ನೂ ತಾಲ್ಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಾಲ್ಲೂಕು ಮತ್ತು ತಾಲ್ಲೂಕಿಗೆ ಹೊಂದಿ ಕೊಂಡತ್ತಿರುವ ಅಕ್ಕಪಕ್ಕದ ತಾಲ್ಲೂಕಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆಯುವಲ್ಲಿ ಮುಂದಾಗಬೇಕು. ಕಬ್ಬು ಬೆಳೆಯಲು ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಚಾಮುಂಡೇಶ್ವರಿ ಶುಗರ್ ನಿಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬಿತ್ತನೆ ಬೀಜವನ್ನು ಬಡ್ಡಿರಹಿತ ಸಾಲದ ರೂಪದಲ್ಲಿ ಕೊಡುವುದು, ಹನಿ ನೀರಾವರಿ ಪದ್ಧತಿ

ಸಹಾಯಧನ, ಟಿಎಪಿಸಿಎಂಎಸ್ ನವರ ಮೂಲಕ ಒಂದು ತಿಂಗಳ ಅವಧಿಗೆ ರಸಗೊಬ್ಬರವನ್ನು ಸಾಲದ ರೂಪದಲ್ಲಿ ನೀಡುವುದು, ಮತ್ತು ಕಬ್ಬನ್ನು ಕಾರ್ಖಾನೆಗೆ ಪೂರೈಕೆಯಾದ 30 ದಿನದೊಳಗೆ ಹಣ ಸಂದಾಯ ಮಾಡುವ ಹಲವು ಅನುಕೂಲಗಳನ್ನು ಜಾರಿ ಮಾಡಲಾಗಿದೆ. ಅತ್ಯಂತ ಕಡಿಮೆ ದರದಲ್ಲಿ ಕಬ್ಬು ಕಟಾವು ಮಾಡಿಸಲು ಉತ್ತರ ಕರ್ನಾಟಕದ ಭಾಗದಿಂದ ಕಾರ್ಮೀಕರನ್ನು ಕರೆತರಲಾಗಿದೆ, ಯಾವುದೇ ಸಮಸ್ಯೆಗೆ ಆಸ್ಪದ ಕೊಡದ ರೀತಿಯಲ್ಲಿ ಕಾರ್ಖಾನೆ ಮತ್ತು ರೈತರು ಮುಂದಾಗಬೇಕೆಂದರು.

ಬೆಂಗಳೂರಿಗೆ ತುರ್ತು ತೆರಳುವ ಕಾರಣ ಶಾಸಕರು ಮುಂಜಾನೆ ಕಾರ್ಖಾನೆಯ ಕ್ರಷಿಂಗ್ ಯಂತ್ರಕ್ಕೆ ಕಬ್ಬು ನೀಡುವ ಮೂಲಕ ಚಾಲನೆ ನೀಡಿದರು, ನಂತರ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧ್ಯಕ್ಷ ತೋಟಿ ಜಯರಾಂ ಮತ್ತು ಇತರೆ ನಿರ್ದೇಶಕರು ಸೇರಿ ಕಬ್ಬು ನುರಿಸುವ ಕಾರ್ಯಕ್ಕೆ ಪೂಜೆ ಸಲ್ಲಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ 

ಈ ವೇಳೆ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ಪ್ರಭಾರಿ ಅಧ್ಯಕ್ಷ ತೋಟಿ ಜಯರಾಂ, ನಿರ್ದೇಶಕರಾದ ನಾರಾಯಣ ಗೌಡ, ಎಸ್.ಕೆ.ಶಿವಣ್ಣ, ತೇಜಸ್ವಿ ಕಿರಣ್, ಯೋಗಾನಂಜುಂಡ, ರಾಜ್ಯ ರೈತಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ, ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಘಟಕದ ಪ್ರಧಾನ ವ್ಯವಸ್ಥಾಪಕ ಪೂರ್ಣಸ್ವಾಮಿ, ಸಿಡಿಓ ದೇವೆಗೌಡ, ಎಂಪ್ಲಾಯ್ ಅಸೋಸಿಯೇ ಷನ್ ಗೌರವಾಧ್ಯಕ್ಷ ಅಡಗೂರು ನಾರಾಯಣ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...