ಹಾಸನ | ಭೀಕರ ಅಪಘಾತ; ಓರ್ವ ಸಾವು, ಆರು ಮಂದಿಗೆ ಗಂಭೀರ ಗಾಯ

Date:

ಹಾಸನದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ನುಗ್ಗೆಹಳ್ಳಿ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಒವರ್ ಬಳಿ ಕ್ಯಾಂಟರ್ ವಾಹನ ಹಾಗೂ ಇನ್ನೋವಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು ಮೂಲದ ನಂದಕುಮಾರ್ (37) ಮೃತ ದುರ್ದೈವಿ. ಮಂಗಳವಾರ ಮುಂಜಾನೆ ಅಪಘಾತ ನಡೆದಿದ್ದು, ಇನ್ನೋವಾ ಕಾರು ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಹಾಸನದ ಕಡೆಗೆ ಬರುತ್ತಿದ್ದ ಕ್ಯಾಂಟರ್ ನಡುವೆ ಡಿಕ್ಕಿಯಾಗಿದೆ. ಇನ್ನೋವಾದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಪಘಾತದ ಬಾಕಿ ಪರಿಹಾರ ವಿಳಂಬ; 2 ಕೆಎಸ್‌ಆರ್‌ಟಿಸಿ ಬಸ್ ಜಪ್ತಿ

ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಇಬ್ಬರಿಗೆ, ಹಾಸನ ಜಿಲ್ಲಾಸ್ಪತ್ರೆಯಲ್ಲಿ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಇನ್ನೋವಾದಲ್ಲಿದ್ದ ಏಳು ಮಂದಿ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಚನ್ನರಾಯಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪೂರ್ಣಚಂದ್ರ ತೇಜಸ್ವಿ ರಂಗ ಮಂದಿರದಲ್ಲಿ ಮೇ 15ರಂದು ʼಮಲೆಯಾದ್ರಿ ನಾಟಕʼ ಪ್ರದರ್ಶನ

ಹಾಸನದ ಸಕಲೇಶಪುರ ತಾಲೂಕಿನ ರಕ್ಷದಿ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಪ್ರಾಕೃತಿಕ...

ಪ್ರಜ್ವಲ್ ಲೈಂಗಿಕ ಹಗರಣ | ಪೆನ್‌ಡ್ರೈವ್‌ ಕೇಸ್‌ನಲ್ಲಿ ಕಾರ್ತಿಕ್‌ ಸೇರಿ ನಾಲ್ವರಿಗೆ ನಿರೀಕ್ಷಣಾ ಜಾಮೀನು ನಿರಾಕರಣೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ...

ಹಾಸನ | ರೌಡಿಶೀಟರ್ ಮಾಸ್ತಿಗೌಡ ಹತ್ಯೆ ಪ್ರಕರಣ; 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕಳೆದ ವರ್ಷ, ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಹತ್ಯೆಗೈದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು...

ಪ್ರಜ್ವಲ್ ಲೈಂಗಿಕ ಹಗರಣ | ದೇವರಾಜೇಗೌಡ ಆರೋಪ ಸುಳ್ಳು – ಬಹಿರಂಗ ಚರ್ಚೆಗೆ ಬರಲಿ; ಶ್ರೇಯಸ್ ಪಟೇಲ್ ಸವಾಲು

ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ...