ಹಾಸನ | ದಲಿತ ಕುಟುಂಬ ಬೆಳೆದಿದ್ದ ಕಾಫಿ, ಬಾಳೆ ಗಿಡ ನಾಶ – ಜಾತಿ ನಿಂದನೆ; ಸಂತ್ರಸ್ಥರ ಆರೋಪ

Date:

ದಲಿತ ಕುಟುಂಬ ಬೆಳೆದಿದ್ದ ಕಾಫಿ ಮತ್ತು ಬಾಳೆ ಗಿಡವನ್ನು ನಾಶ ಮಾಡಿ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸವರ್ಣೀಯರ ವಿರುದ್ಧ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

- Advertisement -

ವನಗೂರು ಎಸ್ಟೇಟ್ ಸರ್ವೇ ನಂ.2ರಲ್ಲಿ ವೆಂಕಟೇಶ್ ಬಿನ್ ನಿಂಗಯ್ಯ ಎಂಬವರಿಗೆ ಸರ್ಕಾರದಿಂದ 4 ಎಕರೆ ಜಮೀನು ಮಂಜೂರಾಗಿತ್ತು. ವೆಂಕಟೇಶ್ ಅವರ ಮಗ ಅಭಿಜಿತ್ ಮನೆ ಎದುರು ಇದ್ದ ಖಾಲಿ ಜಾಗವನ್ನು ಉಳುಮೆ ಮಾಡಿ ಕಾಫಿ ಗಿಡ ಮತ್ತು ಬಾಳೆ ಗಿಡಗಳನ್ನು ಹಾಕಿದ್ದರು. ಆದರೆ, ಮಕ್ಕಳು ಆಟ ಆಡಲು ಈ ಜಾಗವನ್ನು ಮೀಸಲಿಡಲು ತೀರ್ಮಾನ ಮಾಡಲಾಗಿತ್ತೆಂದು ಗ್ರಾಮಸ್ಥರ ವಾದವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಭಿಜಿತ್ ಇತ್ತೀಚೆಗೆ ತಹಶೀಲ್ದಾರ್, ಆರ್.ಐ ಮತ್ತು ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಿ 4 ಎಕರೆ ಜಾಗವನ್ನು ಗುರುತಿಸಿಕೊಡುವಂತೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರ್ ಐ, ಗ್ರಾಮ ಲೆಕ್ಕಾಧಿಕಾರಿ ಮತ್ತು ಶಾಸಕ ಸಿಮೆಂಟ್ ಮಂಜು ಸ್ಥಳ ಪರಿಶೀಲನೆ ಮಾಡಿದ್ದರು. ಆದರೆ ಕೆಲವು ಗ್ರಾಮಸ್ಥರು ಅಧಿಕಾರಿಗಳನ್ನು ಲೆಕ್ಕಿಸದೆ ಅಭಿಜಿತ್ ಹಾಕಿರುವ ಕಾಫಿ ಗಿಡ ಮತ್ತು ಬಾಳೆ ಗಿಡಗಳನ್ನು ಕಡಿದು ಬೆಳೆ ನಾಶ ಮಾಡಿದ್ದು, ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸುದ್ದಿ ಓದಿದ್ದೀರಾ? ‘ಬುಡಕಟ್ಟು ಸಂಶೋಧನಾ ಸಂಸ್ಥೆ’ಯ ನಿರ್ದೇಶಕನ ಬಿಡುಗಡೆ ಒತ್ತಾಯ

ಪ್ರಕರಣಕ್ಕೆ ಸಂಬಂಧಿಸಿದಂತೆ ಯಸಳೂರು ಪೊಲೀಸ್ ಠಾಣೆಯಲ್ಲಿ 7 ಮಂದಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...