ಸಂಸದ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮತ್ತು ಕಾರ್ತಿಕ್ ಪತ್ನಿ ಶಿಲ್ಪ ಅವರ ಮೇಲೆ ಭವಾನಿ ರೇವಣ್ಣ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ಶಿಲ್ಪ ಅವರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ ಹಾಸನದಲ್ಲಿ ಮಾಜಿ ಶಾಸಕ ಎಟಿ ರಾಮಸ್ವಾಮಿ ಮತ್ತು ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.
13 ಎಕರೆ ಭೂಮಿಗಾಗಿ ಕಾರ್ತಿಕ್ ಹಾಗೂ ಪತ್ನಿ ಶಿಲ್ಪಾ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಭವಾನಿ ರೇವಣ್ಣ ವಿರುದ್ಧ ಕೇಳಿಬಂದಿದೆ.
“ಕಾರ್ತಿಕ್ ಅವರಿಗೆ ಸೇರಿದ 13 ಎಕರೆ ಭೂಮಿಯನ್ನು ತಮ್ಮ ಆಪ್ತರಿಗೆ ಬರೆದುಕೊಡಿ ಎಂದು ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಮತ್ತು ಆತನ ಪತ್ನಿಯನ್ನು 2023ರ ಮಾರ್ಚ್ ತಿಂಗಳಲ್ಲಿ ಮನೆಯಲ್ಲಿ ಕೂಡಿಹಾಕಿದ್ದರು. ಆ ವೇಳೆ, ಇಬ್ಬರ ಮೇಲೂ ಹಲ್ಲೆ ಮಾಡಿದ್ದಾರೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಶಾಲೆಗಳಲ್ಲಿ ರಾಗಿ ಮಾಲ್ಟ್ ನೀಡಲು ಚಿಂತನೆ: ಸಚಿವ ಮಧು ಬಂಗಾರಪ್ಪ
“ಭವಾನಿ ರೇವಣ್ಣ ಅವರ ಹಲ್ಲೆಯಿಂದ ನನ್ನ ಪತ್ನಿಗೆ ಗರ್ಭಪಾತವಾಗಿದೆ ಎಂದು ಕಾರ್ತಿಕ್ ದೂರು ನೀಡಿದ್ದರು. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.