ಹಾಸನ | ದಲಿತರಿಗೆ ಇನ್ನೂ ನೂರಾರು ವರ್ಷ ಮೀಸಲಾತಿ ನೀಡುವುದರಲ್ಲಿ ತಪ್ಪಿಲ್ಲ: ಮಾಜಿ ಶಾಸಕ ಪ್ರೀತಮ್‌ ಗೌಡ

Date:

ದಲಿತ ಸಮಾಜ ಶತಮಾನಗಳಿಂದ ಶೋಷಣೆಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ನೂರಾರು ವರ್ಷಗಳ ಕಾಲ ಮೀಸಲಾತಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ಮಾಜಿ ಶಾಸಕ ಪ್ರೀತಮ್‌ ಗೌಡ ಹೇಳಿದರು.

- Advertisement -

ನಗರದ ಅಂಬೇಡ್ಕರ್ ಭವನದಲ್ಲಿ ಬಾಬು ಜಗಜೀವನ್ ರಾಂ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ವೇದಿಕೆಯಲ್ಲಿ ಕಾಂಗ್ರೆಸ್ ಸಂಸದ ಶ್ರೇಯಸ್‌ ಪಟೇಲ್ ಅವರೊಂದಿಗೆ ಪಿಸುಪಿಸು ಮಾತುಕತೆ ನಡೆಸಿದ್ದು, ಆತ್ಮೀಯವಾಗಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

“ಯಾವುದೇ ರೀತಿಯ ಅಂಜಿಕೆ ಅಥವಾ ಮಡಿವಂತಿಕೆ ಇಟ್ಟುಕೊಳ್ಳಬಾರದು. ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಶತಮಾನಗಳಿಂದ ಆಗಿರುವ ತಪ್ಪುಗಳನ್ನು ಕೇವಲ 75 ವರ್ಷಗಳಲ್ಲಿ ಸರಿಪಡಿಸಲು ಸಾಧ್ಯವೇ ಎಂಬ ಪ್ರಶ್ನೆ ಎದುರಾಗುತ್ತದೆ. ಖಂಡಿತವಾಗಿಯೂ ಸಾಧ್ಯವಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯದ ಪ್ರಕ್ರಿಯೆ ಈಗಷ್ಟೇ ಆರಂಭವಾಗಿದೆ. ಆ ಆರಂಭಕ್ಕೆ ಶಕ್ತಿ ತುಂಬುವವರು ವೇದಿಕೆಯಲ್ಲಿರುವವರು ಹಾಗೂ ಮುಂದಿನ ದಿನಗಳಲ್ಲಿ ವೇದಿಕೆಗೆ ಬರುವ ಸಾಮರ್ಥ್ಯ ಹೊಂದಿರುವವರು ಎಂದು ಪ್ರೀತಂಗೌಡ ಹೇಳಿದರು.

“ಸಮಾಜದ ಉತ್ತಮ ಉದ್ಯೋಗದಲ್ಲಿರುವವರು ತಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ನೆರವಾಗಬೇಕು. ಎಲ್ಲವನ್ನೂ ಸರ್ಕಾರದ ಹಣದಿಂದಲೇ ನಿರ್ಮಿಸಬೇಕು ಎಂಬ ಕಲ್ಪನೆ ಇರಬಾರದು. 140 ಕೋಟಿ ಜನಸಂಖ್ಯೆ ಹೊಂದಿರುವ ದೇಶದಲ್ಲಿ ಪ್ರತಿಯೊಬ್ಬರೂ ತಮ್ಮ ಜೀವನ ಕಟ್ಟಿಕೊಳ್ಳುವ ಬಗ್ಗೆ ಸ್ವತಃ ಕಲ್ಪನೆ ಹೊಂದಿರಬೇಕು” ಎಂದು ಕರೆ ನೀಡಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಆದರೆ ಯಾರೂ ಮನೆ ಬಾಗಿಲಿಗೆ ಬಂದು ಹಣ ನೀಡುವ ಪರಿಸ್ಥಿತಿ ಇಲ್ಲ. ಆದ್ದರಿಂದ ತಮ್ಮ ಜೀವನವನ್ನು ತಾವೇ ಕಟ್ಟಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಪ್ರಕರಣ ಹೆಚ್ಚಳ: ಮೂರು ತಿಂಗಳಲ್ಲಿ 11 ಪ್ರಕರಣಗಳ ವರದಿ

ನಿಮ್ಮ ಸಮಾಜದ ಮಕ್ಕಳಿಗಾಗಿ ಕಟ್ಟಡ ನಿರ್ಮಿಸುತ್ತಿರುವುದಕ್ಕೆ ವೈಯಕ್ತಿಕವಾಗಿ ಸಹಾಯ ಮಾಡುವುದಾಗಿ ಭರವಸೆ ನೀಡಿದ ಪ್ರೀತಂಗೌಡ, “ನಾನು ಈಗ ಶಾಸಕನಾಗಿಲ್ಲ. ಶಾಸಕನಾಗಿದ್ದರೆ ಸಂಸದರಂತೆ ಭರವಸೆ ನೀಡುವ ಅವಕಾಶ ಸಿಗುತ್ತಿತ್ತು. ಮುಂದಿನ ದಿನಗಳಲ್ಲಿ ಆ ಅವಕಾಶ ಇರಲಿ,” ಎಂದು ಮಾರ್ಮಿಕವಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...

ಔರಾದ ತಾಲೂಕು ʼಬರʼ ಘೋಷಿಸಿ : ಸಿಎಂಗೆ ಶಾಸಕ ಪ್ರಭು ಚವ್ಹಾಣ ಮನವಿ

ಔರಾದ(ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ...

ಕೆವಡಿಯಾದ ರಸ್ತೆಗಳಲ್ಲಿ ಮಹಿಳೆಯರ ಕೈಗೆ ಸ್ಟೀರಿಂಗ್; ಪ್ರವಾಸೋದ್ಯಮದಿಂದ ಬದಲಾಯಿತು ಜೀವನದ ಲೆಕ್ಕಾಚಾರ

ಸ್ಟ್ಯಾಚ್ಯೂ ಆಫ್ ಯೂನಿಟಿ (ಏಕತೆಯ ಮೂರ್ತಿ) ಆವರಣದಲ್ಲಿ ಸಂಚರಿಸುವಾಗ ಗಮನ ಸೆಳೆಯುವ...

ಬಡವರು, ಉಳ್ಳವರು ಎಂದು ಹೇಗೆ ವಿಂಗಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿ ಕೆ ಶಿವಕುಮಾರ್ ಪ್ರಶ್ನೆ

"ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ,...