ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ‘ವೃಕ್ಷಮಾತೆ’ ಸಾಲುಮರದ ತಿಮ್ಮಕ್ಕನವರ ನೆನಪನ್ನು ಚಿರಸ್ಥಾಯಿಯಾಗಿಸಲು ಹಾಸನ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಹಳೇಬೀಡಿನಲ್ಲಿ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಯೋಜಿಸಲಾಗಿದೆ.
ಯುನೆಸ್ಕೊ ವಿಶ್ವ ಪಾರಂಪರಿಕ ತಾಣವಾಗಿರುವ ಹಳೇಬೀಡಿನ ಸುಮಾರು 10 ಎಕರೆ ವಿಸ್ತೀರ್ಣದ ಜಾಗದಲ್ಲಿ ಈ ಸ್ಮಾರಕ ತಲೆಯೆತ್ತಲಿದೆ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಈಗಾಗಲೇ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದೆ. ಅರಣ್ಯ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಈ ಕುರಿತು ಮಾಹಿತಿ ನೀಡಿದ್ದು, ತಿಮ್ಮಕ್ಕನವರ ಪರಿಸರ ಸಂರಕ್ಷಣೆಯ ಕಾರ್ಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಈ ಸ್ಮಾರಕದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಮೇ 11ರಂದು ವಿದ್ಯುತ್ ವ್ಯತ್ಯಾಯ
ಈ ಸ್ಮಾರಕವು ಕೇವಲ ಕಟ್ಟಡವಾಗಿರದೆ, ಪರಿಸರ ಶಿಕ್ಷಣ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಪ್ರಮುಖ ಕೇಂದ್ರವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ.




