ಹಾಸನ | ಮಂತ್ರಿಯಾಗಲು ಮೂರು ನಾಯಕರು ಭರವಸೆ ಕೊಟ್ಟಿದ್ದಾರೆ ; ಶಿವಲಿಂಗೇಗೌಡ 

Date:

ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಬೇಕು ಎಂದು ಹಲವು ಶಾಸಕರು, ಮಾಜಿ ಸಚಿವರು ದೆಹಲಿಗೆ ದೌಡಾಯಿಸಿದ್ದಾರೆ.

- Advertisement -

ಅಂತೆಯೇ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆಗಿರುವ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರೂ ಸಹ, ದೆಹಲಿ ಪ್ರವಾಸ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಏನಾದರೂ ಸರಿ ನಾನೂ ಈ ಮಂತ್ರಿಯಾಗಬೇಕು ಎಂದು ಪಣ ತೊಟ್ಟಿರುವ ಶಿವಲಿಂಗೇಗೌಡ, ಸಂಬಂಧ ತಮ್ಮ ಆಪ್ತ ನಾಯಕರ ಮೂಲಕ ಹೈಕಮಾಂಡ್ ಮತ್ತು ಹಿರಿಯ ನಾಯಕರ ಮೂಲಕ ಒತ್ತಡ ಹೇರುವ ಕೆಲಸವನ್ನು ಶಿವಲಿಂಗೇಗೌಡ ಮಾಡುತ್ತಿದ್ದಾರೆ. ಈ ವೇಳೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೊಟ್ಟ ಮಾತಿಗೆ ತಪ್ಪದ, ನುಡಿದಂತೆ ನಡೆದಿರುವ ಸಿದ್ದರಾಮಯ್ಯ ಅವರು ಒಬ್ಬ ಐತಿಹಾಸಿಕ ನಾಯಕ ಎಂದು ಗುಣಗಾನ ಮಾಡಿದರು.

ಹಾಗೆಯೇ ಹೈಕಮಾಂಡ್ ಅವರನ್ನು ನಡೆಸಿಕೊಂಡಿದೆ ಎಂದ ಅವರು, ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಆಗುವ ಆಸೆ ಇಟ್ಟುಕೊಂಡಿದ್ದೇನೆ ಎಂದು ತಮ್ಮ ಅಂತರಂಗ ಬಹಿರಂಗ ಪಡಿಸಿದರು. 3 ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದರೆ ಆತ್ಮವಂಚನೆ ಆಗಲಿದೆ. ನಾನು ಒಟ್ಟು ನಾಲ್ಕು ಬಾರಿ ಶಾಸಕನಾಗಿದ್ದೇನೆ. ಜೆಡಿಎಸ್‌ನಿಂದ ಕಾಂಗ್ರೆಸ್ ಗೆ ಬಂದ ನಂತರವೂ ಗೆಲುವು ಸಾಧಿಸಿದ್ದೇನೆ. 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಆಸೆಯಿಂದಲೇ ಈ ಪಕ್ಷಕ್ಕೆ ಬಂದಿದ್ದೇನೆ.

ಇದನ್ನೂ ಓದಿದ್ದೀರಾ?ಹಾಸನ | ಜೂಜಾಟ:12 ಜನರನ್ನು ಬಂಧಿಸಿದ ಪೊಲೀಸರು

ನಾನು ಕಾಂಗ್ರೆಸ್‌ಗೆ ಬರುವಾಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಮೂವರು ನಾಯಕರು ನಿನ್ನನ್ನು ಮಂತ್ರಿ ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದಾರೆ. ಮೊದಲ ಅವಧಿಯಲ್ಲಿ ಆ ಅವಕಾಶ ಸಿಗಲಿಲ್ಲ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು. ಇದೇ ವೇಳೆ ನಿಮಗೆ ಯಾವ ಖಾತೆ ಬೇಕು ಎಂಬ ಪ್ರಶ್ನೆಗೆ ಮೊದಲು ಮಂತ್ರಿ ಮಾಡಲಿ, ನಂತರ ಖಾತೆ ಯಾವುದೆಂದು ನೋಡೋಣ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...