ಹಾಸನ | ಜಿಲ್ಲೆಯಲ್ಲಿ ಪಿಎಸ್‌ಐಗಳ ವರ್ಗಾವಣೆ

Date:

ಹಾಸನ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು (ಪಿಎಸ್‌ಐ) ವರ್ಗಾವಣೆ ಮಾಡಿ ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಎಂ.ಬಿ. ಬೋರಲಿಂಗಯ್ಯ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

- Advertisement -

ವರ್ಗಾವಣೆ ಆದೇಶದಂತೆ, ಶಾಂತಿಗ್ರಾಮ ಪೊಲೀಸ್ ಠಾಣೆಯ ಅರುಣ್ ಅವರನ್ನು ಗಂಡಸಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ದುದ್ದ ಠಾಣೆಯ ಎಂ.ಟಿ. ಅಂತಿಮ ಅವರನ್ನು ಶಾಂತಿಗ್ರಾಮ ಠಾಣೆಗೆ, ಸೆನ್ ಠಾಣೆಯ ಜಿ. ಜತೇಂದ್ರಕುಮಾರ್ ಅವರನ್ನು ದುದ್ದ ಠಾಣೆಗೆ ವರ್ಗಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಹಿರೀಸಾವೆ ಠಾಣೆಯ ರೂಪಾದೇವಿ ಬಿರಾದಾರ್ ಅವರನ್ನು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಗೆ, ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯ ಎಲ್. ಸಂತೋಷ್ ಅವರನ್ನು ನುಗ್ಗೇಹಳ್ಳಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಗೊರೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್. ಧನರಾಜು ಅವರನ್ನು ಶ್ರವಣಬೆಳಗೊಳ ಠಾಣೆಗೆ, ಕುಶಾಲನಗರ ಠಾಣೆಯ ಗಣೇಶ ಅವರನ್ನು ಗೊರೂರು ಠಾಣೆಗೆ ಹಾಗೂ ಶ್ರವಣಬೆಳಗೊಳ ಠಾಣೆಯ ಎನ್.ಜಿ. ನವೀನಕುಮಾರ್ ಅವರನ್ನು ಹಿರೀಸಾವೆ ಠಾಣೆಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿದ್ದೀರಾ?ಹಾಸನ | ಜನರ ಸಮಸ್ಯೆ ಪರಿಹಾರ ಬಗ್ಗೆ ಡಿಸಿ ಪ್ರಕ್ರಿಯಿಸುತ್ತಿಲ್ಲ; ಶಾಸಕ ಹೆಚ್.ಡಿ ರೇವಣ್ಣ 

ಪಿಎಸ್‌ಐಗಳಾದ ಟಿ. ಆರತಿ ಹಾಗೂ ಭರತಕುಮಾರ್ ರೆಡ್ಡಿ ಅವರಿಗೆ ಮುಂದಿನ ಆದೇಶದವರೆಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯ ವಿವಿಧ ಠಾಣೆಗಳ ಆಡಳಿತಾತ್ಮಕ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ವರ್ಗಾವಣೆ ಆದೇಶ ಹೊರಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...