ಹಾಸನ | ಶೋಷಿತ ಸಮುದಾಯಗಳ ಪ್ರತಿನಿಧಿ ವೀರಪ್ಪನ ಹತ್ಯೆ: ದುಷ್ಕರ್ಮಿಗಳ ಬಂಧನಕ್ಕೆ ಸಿಐಟಿಯು ಆಗ್ರಹ

Date:

ಶೋಷಿತ ಸಮುದಾಯಗಳ ಪ್ರತಿನಿಧಿಯಾಗಿದ್ದ ವೀರಪ್ಪನವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ವೀರಪ್ಪನವರ ಇಡೀ ಕುಟುಂಬ ಒಂದಲ್ಲಾ ಒಂದು ರೀತಿಯಲ್ಲಿ ಚಳವಳಿಗಳ ಭಾಗವಾಗಿದ್ದಾರೆ. ನಾವು ಅವರ ಮನೆಯಲ್ಲಿ ಕಳೆದ ನೆನಪುಗಳು ಇನ್ನೂ ಹಸಿಯಾಗಿದೆ. ಅವರ ದುಖಃತಪ್ತ ಕುಟುಂಬದ ಜೊತೆ ನಾವಿದ್ದೇವೆ ಎಂದು ಸಿಐಟಿಯು ಸಂಘಟನೆ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.

- Advertisement -

ವೀರಪ್ಪನವರ ಸಾವಿನ ಕುರಿತು ಸಿಐಟಿಯು ಸಂಘಟನೆ ಪತ್ರಿಕಾ ಹೇಳಿಕೆ ನೀಡಿದ್ದು, “ಸಿಐಟಿಯು ನೇತೃತ್ವದ KSRTC ನೌಕರರ ಫ಼ೆಡರೇಷನ್‌ ಸಂಘಟನೆಯನ್ನು ಹಾಸನ ಜಿಲ್ಲೆಯಲ್ಲಿ ಆರಂಭಿಸಿ ಅದರ ಮೊದಲ ಜಿಲ್ಲಾಧ್ಯಕ್ಷ ಹಾಗೂ ಸಿಐಟಿಯು ಜಿಲ್ಲಾ ಸದಸ್ಯರೂ ಆಗಿದ್ದ ವೀರಪ್ಪ ಅವರು ಫೆಬ್ರವರಿ 17ರಂದು ದುರ್ಮರಣಕ್ಕೀಡಾದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ವೀರಪ್ಪ ಅವರು ಸಿಐಟಿಯುನ ಒಬ್ಬ ಅತ್ಯುತ್ತಮ ಸಂಗಾತಿಯಾಗಿದ್ದರು. KSRTC ಹಾಸನ ವಿಭಾಗದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಲೇ ಸಾರಿಗೆ ನೌಕರರ ಸಂಘಟನೆ ಹಾಗೂ ಸಿಐಟಿಯು ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಇತ್ತೀಚೆಗೆ ಹಾಸನದಲ್ಲಿ ನಡೆದ ಸಿಐಟಿಯು 16ನೇ ರಾಜ್ಯ ಸಮ್ಮೇಳನದ ಯಶಸ್ಸಿಗಾಗಿ ಹಗಲಿರುಳು ದುಡಿದಿದ್ದರು”ಎಂದು ಸ್ಮರಿಸಿದರು.

“ವೀರಪ್ಪ ಅವರು ಅತ್ಯಂತ ಸಹೃದಯಿ ಸಂಗಾತಿಯಾಗಿದ್ದರು. ಅತ್ಯಂತ ಪ್ರಗತಿಪರ ನಿಲುವಿನ ಅವರು, ಎಲ್ಲ ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಸಿಐಟಿಯು ಮತ್ತು ಸಾರಿಗೆ ನೌಕರರನ್ನು ಸಂಘಟಿಸಲು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದ್ದರು. ಯಾರಿಗೂ ಕೇಡನ್ನು ಬಯಸದ ಎಲ್ಲರ ಅತ್ಯಂತ ಪ್ರೀತಿಪಾತ್ರ ಸಂಗಾತಿಯಾಗಿದ್ದರು” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಪೆಟ್ರೋಲ್ ಸುರಿದು ಸಾರಿಗೆ ನೌಕರನ ಬರ್ಬರ ಹತ್ಯೆ

ಸಂಗಾತಿ ವೀರಪ್ಪ ಅವರ ದುರಂತ ಅಂತ್ಯ ಅತ್ಯಂತ ಆಘಾತಕಾರಿಯಾದುದು. ಅವರನ್ನು ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು” ಎಂದು ಸಿಐಟಿಯು ಜಿಲ್ಲಾ ಸಮಿತಿ ಪರವಾಗಿ ಪೋಲೀಸ್ ಇಲಾಖೆಯನ್ನು ಒತ್ತಾಯಿಸಿದರು.

ಈ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ಬಿ ಪುಷ್ಪ, ಜಿಲ್ಲಾ ಖಜಾಂಚಿ ಅರವಿಂದ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...