ಹಾಸನ | ತಡೆಗೋಡೆ ಕುಸಿತದಿಂದ ಎರಡು ಮನೆಗಳಿಗೆ ಹಾನಿ; ಅಧಿಕಾರಿಗಳು ಭೇಟಿ 

Date:

ಸಕಲೇಶಪುರ: ಪಟ್ಟಣದ ಅರೇಹಳ್ಳಿ ಬೀದಿಯ ಡಾಲರ್ಸ್ ಕಾಲೋನಿಯಲ್ಲಿ ಜಡಿ ಮಳೆ ಹಾಗೂ ಬಿರುಗಾಳಿಯ ಪರಿಣಾಮ ನೂತನ ಬಡಾವಣೆಗೆ ನಿರ್ಮಿಸಲಾಗುತ್ತಿದ್ದ ಬೃಹತ್ ತಡೆಗೋಡೆ ಕುಸಿದು ಎರಡು ವಾಸದ ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಮನೆಯೊಳಗೆ ಮಲಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -
Screenshot 2026 07 06 17 48 19 80 7352322957d4404136654ef4adb64504

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕ ಸಿಮೆಂಟ್ ಮಂಜು ಹಾಗೂ ತಹಶೀಲ್ದಾರ್ ಸುಪ್ರೀತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಮಧು ಹಾಗೂ ಅಬ್ದುಲ್ ಮುನಾಫ್ ಅವರ ಮನೆಗಳನ್ನು ವೀಕ್ಷಿಸಿ ಕುಟುಂಬಸ್ಥರಿಂದ ಘಟನೆ ಕುರಿತು ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ವೇಳೆ ಮಾತನಾಡಿದ ಶಾಸಕ ಸಿಮೆಂಟ್ ಮಂಜು ತಡೆಗೋಡೆ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟದ ಬಗ್ಗೆ ಅನುಮಾನಗಳಿವೆ. ಕಾಮಗಾರಿ ಆರಂಭಕ್ಕೂ ಮುನ್ನ ಮತ್ತು ನಂತರ ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕ ಪರಿಶೀಲನೆ ನಡೆಸಬೇಕಿತ್ತು. ಪುರಸಭೆ ಪರವಾನಗಿ ನೀಡಿದ ಬಳಿಕವೂ ಕಾಮಗಾರಿಯ ಮೇಲ್ವಿಚಾರಣೆ ಆಗದಿರುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಡೆಗೋಡೆಯ ಪಕ್ಕದಲ್ಲೇ ಮಕ್ಕಳು ಆಟವಾಡುವ ಪ್ರದೇಶವಾಗಿದೆ. ಘಟನೆ ಮಧ್ಯರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಮನೆಯೊಳಗೆ ಮಲಗಿದ್ದವರು ಪಾರಾಗಿರುವುದು ಅದೃಷ್ಟ ಎಂದು ಹೇಳಿದರು. ಇದೇ ವೇಳೆ ಬಡಾವಣೆ ನಿರ್ಮಿಸುತ್ತಿರುವ ರೈಟ್ ಡೆವಲಪರ್ಸ್ ಸಂಸ್ಥೆಯ ಮಾಲೀಕರನ್ನು ಕರೆಸಿ, ಹಾನಿಗೊಳಗಾದ ಮನೆಗಳಿಗೆ ಆಗಿರುವ ನಷ್ಟವನ್ನು ತಕ್ಷಣ ಸರಿಪಡಿಸುವಂತೆ ಸೂಚನೆ ನೀಡಲಾಗುವುದು ಎಂದು  ತಿಳಿಸಿದರು.

ಡಾಲರ್ಸ್ ಕಾಲೋನಿಯಲ್ಲಿ ಬಡಾವಣೆಗೆ ಮಣ್ಣು ಕುಸಿಯದಂತೆ ಸುಮಾರು 25 ಅಡಿ ಎತ್ತರ ಹಾಗೂ 150 ಮೀಟರ್ ಉದ್ದದ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದ ತಡೆಗೋಡೆಯ ಒಂದು ಭಾಗ ಕುಸಿದು ಪಕ್ಕದ ಎರಡು ಮನೆಗಳ ಮೇಲೆ ಬಿದ್ದ ಪರಿಣಾಮ ಮನೆಗಳಿಗೆ ಹಾನಿಯಾಗಿದೆ.

ಇದನ್ನೂ ಓದಿದ್ದೀರಾ?ಹಾಸನ | ವ್ಯಕ್ತಿ ಸಾವಿಗೆ ಯತ್ನ; ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಘಟನೆಗೆ ಸಂಬಂಧಿಸಿದಂತೆ ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರಿಶೀಲನೆ ಮುಂದುವರಿದಿದ್ದು, ಹಾನಿಯ ಪ್ರಮಾಣ ಹಾಗೂ ಕಾಮಗಾರಿಯ ಗುಣಮಟ್ಟದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....