ಹಾಸನ | ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ; ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

Date:

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ ಕಾಡಾನೆ ಸೆರೆ, ರೇಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ತಾಲೂಕಿನ ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ಮಧ್ಯಾಹ್ನ ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಅರಿವಳಿಕೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಪುಂಡಾನೆಯೊಂದು ದಾಳಿ ಮಾಡಿದೆ. ನಾಲ್ಕು ಸಾಕಾನೆಗಳ ಜೊತೆಗೆ ಅದನ್ನು ಹಿಮ್ಮೆಟ್ಟಿಸಲು ಮಾವುತರು ಪ್ರಯತ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮೂರು ಆನೆಗಳು ಹಿಂದೆ ಸರಿದಿದ್ದು, ಸಾಕಾನೆ ಅರ್ಜುನನ ಮೇಲೆ ಕಾಡಾನೆ ದಾಳಿ ನಡೆಸಿದೆ. ದಾಳಿ ತೀವ್ರವಾಗುತ್ತಿದ್ದಂತೆಯೇ ಅರ್ಜುನನ ಮಾವುತರು ಕೆಳಕ್ಕೆ ಇಳಿದು ಓಡಿ ಬಂದಿದ್ದಾರೆ. ಹೊಟ್ಟೆ ಭಾಗಕ್ಕೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಸಾಕಾನೆ ಅರ್ಜುನ ಮೃತಪಟ್ಟಿದೆ.

ಈ ಸುದ್ದಿ ಓದಿದ್ದೀರಾ? ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಅಂಬಾರಿ ಹೊತ್ತಿದ್ದ ಅರ್ಜುನ: ಮೈಸೂರು ದಸರಾ ಉತ್ಸವದಲ್ಲಿ 2012 ರಿಂದ 2019 ರವರೆಗಿನ ಒಟ್ಟು 8 ಬಾರಿ ಅರ್ಜುನ ಆನೆ ಅಂಬಾರಿ ಹೊತ್ತಿತ್ತು. ಇದೀಗ ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಮೃತಪಟ್ಟಿದ್ದು, ಮಾವುತರು ಕಣ್ಣೀರಿಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...