ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ರೈತನನ್ನು ತುಳಿದು ಹತ್ಯೆ ಮಾಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ರಾಜಶೇಖರ್ ಶೆಟ್ಟಿ, ರೈತ ತಮ್ಮದೇ ತೋಟಕ್ಕೆ ಕೆಲಸಕ್ಕಾಗಿ ತೆರಳಿದ್ದರು, ಕಾಡಾನೆ ಸೊಂಡಲಿನಿಂದ ಎತ್ತಿ ರೈತನನ್ನು ಬಿಸಾಡಿದೆ. ಅಷ್ಟಕ್ಕೇನಿಲ್ಲಿಸದ ಕಾಡಾನೆ ಕಾಲಿನಲ್ಲಿ ತುಳಿದು ಸಾಯಿಸಿದೆ.
ಇದನ್ನೂ ಓದಿದ್ದೀರಾ?ಹಾಸನ | ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಕೆಪಿಆರ್‌ಎಸ್ ಆಗ್ರಹ
ಈ ಕುರಿತು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಡಾನೆಯಿಂದ ರಕ್ಷಣೆ ನೀಡುವಂತೆ ಹಾಗೂ ರೈತನ ಸಾವಿನ ಕುರಿತಂತೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಸುತ್ತಮುತ್ತಲಿರುವ ಗ್ರಾಮಸ್ಥರು ಭಯದ ವಾತಾವರಣದಿಂದ ಬದುಕಬೇಕಿದೆ. ಈ ಘಟನೆ ಹರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.




