ಹಾಸನ | ಪೌರಕಾರ್ಮಿಕರಿಗೆ ಮೂಲ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು: ಸಾಮಾಜಿಕ ಹೋರಾಟಗಾರ ನೂರ್ ಅಹ್ಮದ್

Date:

ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಗುರುವಾರ ರಾತ್ರಿ 8 ಗಂಟೆಯ ಸುಮಾರಿನಲ್ಲಿ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ 24X7 ಸಮಾಜಸೇವಾ ತಂಡದ ಕಾರ್ಯಕರ್ತರು ಬೀದಿಗಳನ್ನು ಸ್ವಚ್ಛಗೊಳಿಸುವುದರ ಮೂಲಕ ‘ಪೌರಕಾರ್ಮಿಕರಿಗೆ ವಿನೂತನ ಗೌರವ ಸಲ್ಲಿಸಿದರು.

- Advertisement -

ಶುಕ್ರವಾರ ಪೌರಕಾರ್ಮಿಕರ ದಿನಾಚರಣೆ ಇದ್ದ ಕಾರಣ ಇಡೀ ದಿನ ಅವರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದ 24X7 ಸಮಾಜಸೇವಾ ತಂಡದ ಸದಸ್ಯರು ಒಗ್ಗೂಡಿ ರಾತ್ರಿ ಗುರುವಾರ 8 ಗಂಟೆಯಿಂದಲೇ ಬೇಲೂರು ಪಟ್ಟಣದ ಪುರಸಭೆ ಮುಂಭಾಗದಿಂದ, ಬಸ್ ಸ್ಟಾಂಡ್ ಮುಂಬಾಗ, ಹರ್ಡೀಕರ್ ವೃತ್ತ, ಸರ್ಕಾರಿ ಆಸ್ಪತ್ರೆಯಿಂದ ಕೆಂಪೇಗೌಡ ಸರ್ಕಲ್ ಮತ್ತು ದೇವಸ್ಥಾನ ರಸ್ತೆ ಮೂಲಕ ಚನ್ನಕೇಶವ ದೇವಸ್ಥಾನದ ಸುತ್ತಮುತ್ತಲಿನ ಕಸವನ್ನು ಟ್ರಾಕ್ಟರ್‌ಗೆ ತುಂಬುವ ಮೂಲಕ, ಜನಜಾಗೃತಿ, ಸ್ವಚ್ಛತೆಯ ಅರಿವನ್ನು ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಸಾಮಾಜಿಕ ಹೋರಾಟಗಾರ ನೂರ್ ಅಹ್ಮದ್ ಮಾತನಾಡಿ, “ಪೌರಕಾರ್ಮಿಕ ದಿನಾಚರಣೆ ಪ್ರಯುಕ್ತ, ಅಂದು ಬೇಲೂರಿನ ಪೌರಕಾರ್ಮಿಕರ ಶ್ರಮವನ್ನು ಕಂಡು ಅವರಿಗೆ ಇಡೀ ದಿನ ವಿಶ್ರಾಂತಿ ಪಡೆಯುವ ಸಲುವಾಗಿ ಅವರ ಶ್ರಮವನ್ನು ಗಮನಿಸಿ ನಮ್ಮ ತಂಡ ಈ ಕಾರ್ಯದಲ್ಲಿ ತೊಡಗಿದೆ. ಈ ಕಾರ್ಯದಲ್ಲಿ ವರ್ತಕರು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬೇಲೂರು ಪಟ್ಟಣದ ಸ್ವಚ್ಛತೆ ಕಡೆಗೆ ಹೆಚ್ಚು ಗಮನ ಹರಿಸಬೇಕು” ಎಂದು ಹೇಳಿದರು.

“ಪೌರಕಾರ್ಮಿಕರೇನು ಬೇರೆಯವರಲ್ಲ. ನಮ್ಮ ಅಣ್ಣ ತಮ್ಮಂದಿರೆ, ಸಹೋದರಿಯರೆ. ಹಾಗಾಗಿ ಅವರ ಶ್ರಮಕ್ಕೆ ಕನಿಷ್ಠ ಬೆಲೆಕಟ್ಟಲಾಗದು. ಆದರೆ ಹಲವಾರು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳು ಕನಿಷ್ಠ ಮೂಲ ಸೌಕರ್ಯಗಳನ್ನೂ ಕಲ್ಪಿಸದೆ ಅವರಿಂದ ದುಡಿಸಿಕೊಳ್ಳುತ್ತಿವೆ. ಸುಮಾರು 30 ವರ್ಷಗಳಿಂದ ಬೇಲೂರು ಪಟ್ಟಣದ ಕೊಳೆ ತೊಳೆಯುತ್ತಿರುವ ಇವರಿಗೆ ಸ್ವಂತ ಮನೆ ಇಲ್ಲ. ಅವರ ಆರೋಗ್ಯ ರಕ್ಷಣಾ ಪರಿಕರಗಳನ್ನು ಒದಗಿಸುತ್ತಿಲ್ಲ. ಇಂದಿಗೂ ಹಲವಾರು ರೋಗ ರುಜಿನಗಳಿಗೆ ತುತ್ತಾಗಿ ಮರಣ ಹೊಂದುತ್ತಿದ್ದು, ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಪೌರಕಾರ್ಮಿಕರ ಜಯಂತಿಯನ್ನು ಒಂದು ದಿನದ ಮಟ್ಟಿಗೆ ಕಾಟಾಚಾರಕ್ಕೆ ಆಚರಿಸುವುದರಿಂದ ಪ್ರಯೋಜನವಿಲ್ಲ. ಅವರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟವರು ಕಾರ್ಯಪ್ರವೃತ್ತರಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದ ವಿದ್ಯುತ್‌ ಉತ್ಪಾದನೆ ಕುಸಿದಿರುವುದು ಏಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಎಸ್ ಡಿ ಮಂಜುನಾಥ್, ಪುರಸಭಾ ಆರೋಗ್ಯಧಿಕಾರಿ ಜ್ಯೋತಿ ಲೋಹಿತ್, ಶಿಕ್ಷಕ ಸಂಪತ್, ಪ್ರದೀಪ್, ಮೆಜೆಸ್ಟಿಕ್ ಅಕ್ಬರ್, ಕೀರ್ತಿ ಬಿ ಎ, ಸುನಿಲ್ ರಾಯಪುರ, ವಿಶ್ವ ಓಬಳೇಶ್, ಶಿವಣ್ಣ ಹಾಗೂ ಪುರಸಭಾ ಸಿಬ್ಬಂದಿ ಇದ್ದರು.

ಗುರುವಾರ ರಾತ್ರಿ 8 ಗಂಟೆಗೆ 24×7 ಸಮಾಜಸೇವಾ ತಂಡದ ಸದಸ್ಯರು ಎರಡು ಟ್ರಾಕ್ಟರ್‌ಗೆ ತಲಾ 4 ಮಂದಿ ಸಮಾಜಸೇವಾ ತಂಡದ ಸದಸ್ಯರು ಪೌರಕಾರ್ಮಿಕರೊಡಗೂಡಿ ಕ್ಷಣಮಾತ್ರದಲ್ಲಿ ಬೇಲೂರಿನ ಬೀದಿಗಳ ಕಸ ತೆಗೆದು ಸ್ವಚ್ಛಗೊಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ...

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...