ಹೊಳೇನರಸೀಪುರ | ಚೆನ್ನಮ್ಮ ಅಂತ್ಯಕ್ರಿಯೆ: ಜನದಟ್ಟಣೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ

Date:

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಜುಲೈ 20ರಂದು ಜಿಲ್ಲಾಧಿಕಾರಿ ಲತಾ ಕುಮಾರಿ ರಜೆ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಈ ಕುರಿತು ಈದಿನ.ಕಾಮ್‌ನೊಂದಿಗೆ ಮಾತನಾಡಿದ ಹೊಳೆನರಸೀಪುರ ಬಿಇಓ ಸೊಮಶೇಖರ್, “ಭಾನುವಾರ ಸಂಜೆಯಿಂದಲೇ ವಾಹನ ದಟ್ಟಣೆ ಶುರುವಾಗಿದೆ. ತಾಲೂಕಿಗೆ ನೆರೆಹೊರೆ ಜಿಲ್ಲೆಗಳಿಂದ ಚೆನ್ನಮ್ಮ ಅಂತಿಮ ದರ್ಶನಕ್ಕೆ ಜನರು ಆಗಮಿಸುತ್ತಿದ್ದಾರೆ. ಪರಿಣಾಮ ವಾಹನ ಸಂಚಾರ ಹೆಚ್ಚಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಾಲೂಕಿನಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಬದಲಾಗಿ ಶನಿವಾರ ಅಥವಾ ಭಾನುವಾರ ಹೆಚ್ಚುವರಿ ತರಗತಿಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ” ಎಂದಿದ್ದಾರೆ.

ಚೆನ್ನಮ್ಮ ಅವರ ಅಂತ್ಯಕ್ರಿಯೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದು, ಜಿಲ್ಲಾಧಿಕಾರಿಗಳೊಂದಿಗೂ ಚರ್ಚಿಸಿ ಎಲ್ಲಾ ವ್ಯವಸ್ಥೆಗಳನ್ನು ನಿಯೋಜಿಸಲಾಗಿದೆ. ಚೆನ್ನಮ್ಮ ಅವರು ನಮ್ಮ ಜಿಲ್ಲೆಯವರೇ , ಅಕ್ಕಪಕ್ಕದ ಗ್ರಾಮಗಳೊಂದಿಗೆ ಕುಟುಂಬದಂತಹ ಸಂಬಂಧ ಹೊಂದಿದ್ದರು. ಅವರ ಸರಳ ವ್ಯಕ್ತಿತ್ವವನ್ನು ಜನರು ಗೌರವಕ್ಕೆ ಪಾತ್ರವಾಗಿತ್ತು. ಎಲ್ಲರೂ ಶಾಂತಿಯುತವಾಗಿ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಬೇಕು” ಎಂದು ಮನವಿ ಮಾಡಿದರು.

“ಇಂದು ಮಧ್ಯಾಹ್ನ 2:30ರ ವೇಳೆಗೆ ಬೆಂಗಳೂರಿನಿಂದ ಹರದನಹಳ್ಳಿಗೆ ತಲುಪುವ ನಿರೀಕ್ಷೆಯಿದೆ. ಕೇಂದ್ರ ಸಚಿವರು, ರಾಜ್ಯ ಸಚಿವರು, ವಿರೋಧ ಪಕ್ಷದ ನಾಯಕರು, ಶಾಸಕರು ಹಾಗೂ ಸಂಸದರು ಸೇರಿದಂತೆ ಗಣ್ಯರು ಆಗಮಿಸುವ ಮಾಹಿತಿ ಇದೆ. ಗಣ್ಯರು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ದರ್ಶನ ವ್ಯವಸ್ಥೆ, ಸಂಚಾರ ಹಾಗೂ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...