ಅಜ್ಜಿ ಚೆನ್ನಮ್ಮ ಅಂತ್ಯಕ್ರಿಯೆಗೆ ಪೆರೋಲ್ ಬೇಡದ ಪ್ರಜ್ವಲ್‌ ರೇವಣ್ಣ: ವರ್ಚುವಲ್ ಮೂಲಕ ಭಾಗಿ

Date:

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಅಜ್ಜಿ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆಗೆ ಪೆರೋಲ್ ಪಡೆಯಲು ನಿರಾಕರಿಸಿದ್ದು, ಬಳಿಕ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್(ವರ್ಚುವಲ್) ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜೈಲು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

- Advertisement -

“ಅಪರಾಧಿ ಪ್ರಜ್ವಲ್ ರೇವಣ್ಣ ಅವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತಾತ್ಕಾಲಿಕ ಬಿಡುಗಡೆ ಅಥವಾ ಪೆರೋಲ್ ಕೋರಿ ಯಾವುದೇ ಅರ್ಜಿಯನ್ನು ಸಲ್ಲಿಸಿಲ್ಲ. ಬದಲಾಗಿ, ಅವರು ಅಂತ್ಯಕ್ರಿಯೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಲು ಜೈಲು ಅಧಿಕಾರಿಗಳಿಂದ ಅನುಮತಿ ಕೋರಿದರು. ಈ ಹಿನ್ನೆಲೆಯಲ್ಲಿ ಮಾನವೀಯ ಆಧಾರದ ಮೇಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮೋದಿಸಲಾಗಿದೆ” ಎಂದು ಬೆಂಗಳೂರು ಜೈಲು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

“ಅಂತ್ಯಕ್ರಿಯೆಯ ಸ್ಥಳಕ್ಕೆ ಪ್ರಯಾಣಿಸಲಾಗದ ಕಾರಣ, ಪ್ರಜ್ವಲ್ ರೇವಣ್ಣ ಅವರ ಬಂಧಿಖಾನೆಯಲ್ಲಿ ಒದಗಿಸಲಾದ ದೂರದರ್ಶನ ಸೆಟ್ ಮೂಲಕ ಅಥವಾ ಜೈಲು ಆಡಳಿತವು ಏರ್ಪಡಿಸಿದ ವೀಡಿಯೊ ಕಾನ್ಫರೆನ್ಸಿಂಗ್ ಸೌಲಭ್ಯದ ಮೂಲಕ ಅಂತಿಮ ವಿಧಿಗಳನ್ನು ವೀಕ್ಷಿಸುತ್ತಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವೇಗೌಡರ ಪತ್ನಿ ಚೆನ್ನಮ್ಮ ಅವರನ್ನು ಉಸಿರಾಟದ ತೊಂದರೆ, ಎದೆ ನೋವು ಮತ್ತು ಇತರ ವಯೋ ಸಹಜ ಖಾಯಿಲೆಗಳಿಗೆ ಸಂಬಂಧಿಸಿದ ತೊಂದರೆಗಳಿಂದಾಗಿ ಬುಧವಾರ ರಾತ್ರಿ (ಜುಲೈ 16) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ(ಜುಲೈ 18) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

“ಪ್ರಜ್ವಲ್ ರೇವಣ್ಣ ಪೆರೋಲ್ ಪಡೆಯದಿರಲು ಅವರ ತಂದೆ, ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ನೀಡಿದ ಸಲಹೆಯನ್ನು ಅನುಸರಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಪ್ರಜ್ವಲ್ ತನ್ನ ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದರೆ ಸಾರ್ವಜನಿಕರ ಗಮನಕ್ಕೆ ಕಾರಣವಾಗಬಹುದು. ಜತೆಗೆ ಇದನ್ನು ನಿರ್ವಹಿಸಲು ಕುಟುಂಬ ಮತ್ತು ಅಧಿಕಾರಿಗಳಿಗೆ ಕಷ್ಟವಾಗಬಹುದು” ಎಂದು ಕುಟುಂಬ ಭಾವಿಸಿರುವುದಾಗಿ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿದ್ದೀರಾ? ಹೊಳೇನರಸೀಪುರ | ಚೆನ್ನಮ್ಮ ಅಂತ್ಯಕ್ರಿಯೆ: ಜನದಟ್ಟಣೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ

ಸಾಮಾನ್ಯ ಸಂದರ್ಭಗಳಲ್ಲಿ, ಶಿಕ್ಷೆಗೊಳಗಾದ ಅಪರಾಧಿ ಕನಿಷ್ಠ ನಿಗದಿತ ಅವಧಿಯ ಜೈಲು ಶಿಕ್ಷೆಯನ್ನು ಅನುಭವಿಸಿದ ನಂತರವೇ ಪೆರೋಲ್‌ಗೆ ಅರ್ಹನಾಗುತ್ತಾನೆ. ಇದಲ್ಲದೆ, ಅತ್ಯಾಚಾರದಂತಹ ಗಂಭೀರ ಅಪರಾಧಗಳಲ್ಲಿ ಪೆರೋಲ್ ಅಥವಾ ತುರ್ತು ಬಿಡುಗಡೆ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಪೆರೋಲ್ ನೀಡಲಾಗುತ್ತದೆ. ಜತೆಗೆ ಸಮರ್ಥ ಅಧಿಕಾರಿಗಳಿಂದ ಅನುಮೋದನೆಗೆ ಒಳಪಟ್ಟಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಬ್ಬದಂದು 500ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳ ಪ್ರದರ್ಶಿಸಿದ ಉತ್ತರ ಪ್ರದೇಶದ ಶಾಸಕ

ಉತ್ತರ ಪ್ರದೇಶದ ಕುಂದಾ ಕ್ಷೇತ್ರದ 'ಜನಸತ್ತಾ ದಳ (ಲೋಕತಾಂತ್ರಿಕ)' ಪಕ್ಷದ ಪ್ರಭಾವಿ...

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ‘ಬಂಧನವು ಅವರನ್ನು ಮತ್ತಷ್ಟು ಬಲಶಾಲಿಗಳನ್ನಾಗಿಸುತ್ತದೆ’ ಎಂದ ನಾಯಕ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...