ಮುಸ್ಲಿಮರಿಂದ ಸ್ವಯಂ ನಿರ್ಬಂಧ: ಜಾನುವಾರು ಕೊಳ್ಳುವವರಿಲ್ಲದೆ ಸಂಘಿಗಳ ವಿರುದ್ಧ ರೈತರ ಆಕ್ರೋಶ

Date:

ರೈತರು ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದೇವೆ. ಹಾಲು ಉತ್ಪಾದನೆಗಾಗಿ ಸಾಕುವ ಜರ್ಸಿ ಹಸುಗಳು ವಯಸ್ಸಾದ ಬಳಿಕ ಹಾಗೂ ಹೋರಿ ಕರುಗಳಿಗೆ ಜನ್ಮ ನೀಡಿದಾಗ ಅವುಗಳನ್ನು ಸಾಕುವುದು ರೈತರಿಗೆ ಆರ್ಥಿಕ ಹೊರೆಯಾಗುತ್ತದೆ. ಇಂತಹ ಅನುಪಯುಕ್ತ ಜಾನುವಾರುಗಳನ್ನು ಮಾರಾಟ ಮಾಡುವುದರಿಂದ ರೈತರಿಗೆ ಸ್ವಲ್ಪವಾದರೂ ಆದಾಯ ದೊರೆಯುತ್ತದೆ. ಈಗ ಹೋರಿ ಕರುಗಳು, ವಯಸ್ಸಾದ ಎತ್ತುಗಳನ್ನು ಇಟ್ಟುಕೊಂಡು ನಾವೇನು ಮಾಡಬೇಕು. ಇತ್ತ ಮೇವು ಇಲ್ಲ, ಆದಾಯವೂ ಇಲ್ಲ, ಮಳೆಯೂ ಇಲ್ಲ….. ಮನೆತುಂಬಾ ದನ ಕರುಗಳನ್ನು ಕಟ್ಟಿಕೊಂಡು ನಾವು ಏನು ಮಾಡಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಹಾಸನ ಜಾನುವಾರು ಮಾರುಕಟ್ಟೆಲ್ಲಿ ನಡೆದಿದೆ.

- Advertisement -

ಶಾಂತಿ ಮತ್ತು ಸೌಹಾರ್ದದಿಂದ ಬಕ್ರೀದ್ ಹಬ್ಬ ಆಚರಿಸುವ ಉದ್ದೇಶದಿದಾಗಿ ಹಾಸನ ಜಿಲ್ಲೆಯ ಮುಸ್ಲಿಂ ಒಕ್ಕೂಟವು ಈ ಬಾರಿಯ ಬಕ್ರೀದ್ ಪ್ರಯುಕ್ತ ಜಾನುವಾರುಗಳನ್ನು(ದನ, ಹಸು, ಎಮ್ಮೆ) ಖರೀದಿ ಮಾಡಬಾರದೆಂದು ಸ್ವಯಂ ನಿರ್ಬಂಧ ಹೇರಿಕೊಂಡಿದೆ. ಇದರಿಂದಾಗಿ ಮಂಗಳವಾರ ನಡೆದ ಸಾಪ್ತಾಹಿಕ ಸಂತೆಯಲ್ಲಿ ಮುಸ್ಲಿಂ ಮುಖಂಡರು ಸಕ್ರಿಯವಾಗಿ ಪಾಲ್ಗೊಂಡು, ಸಮುದಾಯದ ಬಾಂಧವರಿಗೆ ಯಾವುದೇ ರೀತಿಯ ಜಾನುವಾರುಗಳನ್ನು ಖರೀದಿ ಮಾಡದಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಈ ಕುರಿತು ಪ್ರತಿಕ್ರಿಯಿಸಿರುವ ಮುಸ್ಲಿಂ ಒಕ್ಕೂಟದ ಪ್ರಮುಖರು, “ಹಬ್ಬದ ಆಚರಣೆಗೆ ಯಾವುದೇ ರೀತಿಯ ಧಕ್ಕೆ ಅಥವಾ ವಿವಾದಗಳು ಉಂಟಾಗಬಾರದು ಎಂಬ ದೃಷ್ಟಿಯಿಂದ, ಮುಂಜಾಗ್ರತಾ ಕ್ರಮವಾಗಿ ನಾವು ಈ ನಿರ್ಧಾರವನ್ನು ಕೈಗೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

ಮುಸ್ಲಿಂ ಬಾಂಧವರು

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿರುವುದನ್ನು ಉಲ್ಲೇಖಿಸಿದ ಮುಖಂಡರು, “ನಾವು ಕಾನೂನಿನ ಚೌಕಟ್ಟನ್ನು ಗೌರವಿಸುತ್ತೇವೆ ಮತ್ತು ಅದನ್ನು ಮೀರಿ ಯಾವುದೇ ಕೆಲಸವನ್ನು ಮಾಡುವುದಿಲ್ಲ. ನಾವು ಜಾನುವಾರುಗಳನ್ನು ಖರೀದಿಸಲೇಬೇಕು ಎಂದಾದರೆ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಬೇಕು” ಎಂದರು.

ಬಳಿಕ ಸಂತೆಯಲ್ಲಿ ಮಾರಾಟಕ್ಕೆಂದು ಕರೆತಂದಿದ್ದ ರೈತರ ಜಾನುವಾರುಗಳು ಖರೀದಿಯಾಗದ ಹಿನ್ನೆಲೆಯಲ್ಲಿ ರೈತರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಎಲ್ಲ ಕಡೆಯಿಂದಲೂ ರೈತರಿಗೇ ಪೆಟ್ಟು ಬೀಳುತ್ತಿದೆ. ನಮ್ಮ ದನಕರುಗಳನ್ನು ಯಾರಾದರೂ ಕೊಂಡುಕೊಳ್ಳಿ, ಜಿಲ್ಲಾಧಿಕಾರಿಯಾದರೂ ಖರೀದಿಸಲಿ, ಸರ್ಕಾರವಾದರೂ ಖರೀದಿಸಲಿ, ಸಂಘ ಪರಿವಾರದ ನಕಲಿ ಗೋರಕ್ಷಕರಾದರೂ ಖರೀದಿಸಲಿ…. ನಮಗೆ ಹಣ ಕೊಡಿ ಜಾನುವಾರುಗಳನ್ನು ನಿಮ್ಮನೆ ಮುಂದೆ ಕಟ್ಟಿಕೊಳ್ಳಿ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಸೌಹಾರ್ದಯುತ ಬಕ್ರೀದ್‌ ಆಚರಣೆಗೆ ಸುರೇಶ ಬಿ ಇಟ್ನಾಳ ಮನವಿ

“ಪಶ್ಚಿಮ ಬಂಗಾಳದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದು ದನಕರುಗಳನ್ನು ಖರೀದಿಸದಂತೆ ನಿಷೇಧಿಸಿದೆ. ಅಲ್ಲಿಯ ರೈತರ ಗೋಳು…. ಈಗ ನಮ್ಮನ್ನೂ ಬಿಡಲಿಲ್ಲ… ನಮಗೂ ಮೂಲವಾಯಿತು.

Mr Vicki ಎಂಬ ಸಾಮಾಜಿಕ ಜಾಲತಾಣದಲ್ಲಿ, “ಹಾಸನ ಸಂತೆಯಲ್ಲಿ ರೈತರ ಗೋಳು…. ಎಲ್ಲಿ ಇದ್ಯೋ ಪಿಂಪ್‌ ಪುನೀತ್, ಸಂಘಪರಿವಾರದ ನಕಲಿ ಗೋವು ರಕ್ಷಕ ಕುಡಿದು ಯಾವ ಮೋರಿಯಲ್ಲಿ ಬಿದ್ದಿದ್ದೀಯ? ರೈತರಿಗೆ ದುಡ್ಡು ಕೊಟ್ಟು ಗೋವು ರಕ್ಷಣೆ ಮಾಡ್ರೋ ಸಂಘಿ ಅನಿಷ್ಟ ಪಿಂಡಗಳ” ಎಂದು ಪೋಸ್ಟ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...