SIR ಪ್ರಕ್ರಿಯೆ ಗೊಂದಲವೇ; ಹಾಸನದಲ್ಲಿ ಮತದಾರರ ಪಟ್ಟಿಯಿಂದ ಹೊರ ಹಾಕಲಾಗಿದೆಯೇ?

Date:

ಚುನಾವಣಾ ಆಯೋಗ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆಯನ್ನು ರಾಜ್ಯಾದ್ಯಂತ ಕೈಗೊಂಡಿದೆ. SIR ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ. ಮತದಾರರಲ್ಲಿ ಮಾತ್ರವಲ್ಲ, ಈ ಕೆಲಸ ನಿರ್ವಹಿಸುತ್ತಿರುವ ಬೂತ್ ಮಟ್ಟದ ಅಧಿಕಾರಿಗಳಾದ (BLO) ಮತ್ತು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರಲ್ಲಿಯೂ (BLA) ಗೊಂದಲವೇ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ಪ್ರಕ್ರಿಯೆ ಶೇ.84.61ರಷ್ಟು ಪೂರ್ಣಗೊಂಡಿದೆ. ಈವರೆಗೆ ಒಟ್ಟು 94,680 ಪತ್ತೆಯಾಗದ ಮತದಾರರ ಹೆಸರನ್ನು ಪಟ್ಟಿಯಿಂದ ಡಿಲೀಟ್‌ ಮಾಡಲಾಗಿದೆ.

- Advertisement -

ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರದ 15,42,802 ಮತದಾರರಿದ್ದು, ಈ ಪೈಕಿ 43,264 ಮತದಾರರು ಮೃತಪಟ್ಟಿದ್ದಾರೆ. 39,485 ಮತದಾರರು ಶಾಶ್ವತವಾಗಿ ಬೇರೆಡೆ ಸ್ಥಳಾಂತರಗೊಂಡಿದ್ದಾರೆ. ಎರಡೆರಡು ಸ್ಥಳದಲ್ಲಿ ಮತದಾನದ ಹಕ್ಕು ಹೊಂದಿದ್ದ 8,689 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ವಿಳಾಸದಲ್ಲಿಯೇ ಇಲ್ಲದಿರುವ 2946 ಹಾಗೂ ಇತರೆ 296 ಮತದಾರರ ಹೆಸರನ್ನು ಪರಿಷ್ಕರಣೆ ವೇಳೆ ಡಿಲೀಟ್‌ ಮಾಡಲಾಗಿದೆ. ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗಿದ್ದಲ್ಲಿ ಆಕ್ಷೇಪಣೆ ದಾಖಲಿಸಿ ಅರ್ಜಿ ನಮೂನೆ -6ರಲ್ಲಿಸಲ್ಲಿಸಿ ಪಟ್ಟಿಗೆ ಸೇರಿಸಬಹುದಾಗಿದೆ ಎನ್ನುತ್ತಾರೆ ಜಿಲ್ಲಾಧಿಕಾರಿ ಲತಾಕುಮಾರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಹಾಸನದಲ್ಲಿ ಎಷ್ಟು ಜನರನ್ನು ಮತದಾರರ ಪಟ್ಟಿಯಿಂದ ತೆಗೆದಿದ್ದಾರೆ? ಹಾಸನ ವಿಧಾನಸಭೆ ಕ್ಷೇತ್ರದಲ್ಲಿಅತಿ ಹೆಚ್ಚು 16,712 ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಶ್ರವಣಬೆಳಗೊಳದಲ್ಲಿ14,278, ಅರಸೀಕೆರೆ ಕ್ಷೇತ್ರದಲ್ಲಿ 9,496, ಬೇಲೂರು 12,267, ಹೊಳೆನರಸೀಪುರ 14331, ಅರಕಲಗೂಡು 15,569, ಸಕಲೇಶಪುರ ಕ್ಷೇತ್ರದಲ್ಲಿ12027 ಮತದಾರರು ಸೇರಿ 94,680 ಮತದಾರರ ಹೆಸರು ಕೈಬಿಡಲಾಗಿದೆ. ಈ ಸಂಖ್ಯೆ ಇನ್ನು ಅಧಿಕವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಅಧಿಕಾರಿಗಳು.

Advertisements

SIR ಪ್ರಕ್ರಿಯೆಯಲ್ಲಿ ಸವಾಲುಗಳು! ಮತದಾರರ ಪಟ್ಟಿಯ ಎನ್ಯುಮರೇಷನ್‌ ಅರ್ಜಿಯನ್ನು ಮನೆ ಬಾಗಿಲಿಗೆ ಸಲ್ಲಿಸಿ ವಾರ ಕಳೆಯುತ್ತಾ ಬಂದರೂ ಕೆಲವರು ಭರ್ತಿ ಮಾಡಿಲ್ಲ. ಹೀಗಾಗಿ ಬಿಎಲ್‌ಒಗಳೇ ಸಮಗ್ರ ಮಾಹಿತಿ ಪಡೆದು ಭರ್ತಿ ಮಾಡುವ ಅನಿವಾರ್ಯತೆ ಎದುರಾಗಿದೆ. ಅಷ್ಟೇ ಅಲ್ಲದೆ ಒಂದಿಷ್ಟು ಜನ ಈ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂಬ ಸಂಗತಿ ಪ್ರಕ್ರಿಯೆ ವೇಳೆ ಕಂಡುಬಂದಿದೆ ಎನ್ನುತ್ತಿದ್ದಾರೆ ಸಿಬ್ಬಂದಿ.

ಎಷ್ಟೋ ಮತದಾರರು ವಿಳಾಸದಲ್ಲಿ ಇಲ್ಲ: ಮತದಾರರು ವಿಳಾಸದಲ್ಲಿ ಇಲ್ಲದಿರುವವರನ್ನು ಪತ್ತೆ ಮಾಡುವುದು ಬಿಎಲ್‌ಒಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಕ್ಕ ಪಕ್ಕದವರನ್ನು ಕೇಳಿದರೆ ಅವರು ಇಲ್ಲಿಂದ ಹೋಗಿ ಹಲವಾರು ವರ್ಷಗಳೇ ಆಗಿದೆ. ಎಲ್ಲಿ ಹೋಗಿದ್ದಾರೋ ಗೊತ್ತಿಲ್ಲ, ಇಲ್ಲವೇ ಬದುಕಿದ್ದಾರೆಯೇ ಎಂಬುದು ನಿಖರವಿಲ್ಲ ಎಂಬ ಉತ್ತರವೂ ಬರುತ್ತಿದೆ. ಹೀಗಾಗಿ ಹಲವು ಬಾರಿ ಮನೆ ಬಾಗಿಲಿಗೆ ಹೋಗಿ ಹಿಂತಿರುಗುವ ಜತೆಗೆ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟುಹೋಗಬಾರದು ಎಂಬ ಉದ್ದೇಶದಿಂದ ಎಲ್ಲಿಯಾದರೂ ಇದ್ದಾರೆಯೇ ಎಂದು ಪತ್ತೆಮಾಡುವ ಕೆಲಸವನ್ನು ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ ಸಿಬ್ಬಂದಿ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ದೇವಸ್ಥಾನದ ಆಭರಣ, ಹುಂಡಿ ಹಣ ಕಳ್ಳತನ; ಪ್ರಕರಣ ದಾಖಲು 

ಪ್ರಮುಖ ಪಕ್ಷ ಬಿಜೆಪಿ, ಜೆಡಿಎಸ್‌ನ ಪಾಲಿಕೆ ಸದಸ್ಯರು, ಸ್ಥಳೀಯ ಸಂಸ್ಥೆ ಹಾಗೂ ಪಕ್ಷದ ಮುಖಂಡರು ತಮ್ಮ ವಾರ್ಡಿನ, ಊರಿನ, ಗ್ರಾಮದ ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ.

WhatsApp Image 2024 10 24 at 12.02.30
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಆನ್‌ಲೈನ್ : ದೇವಿ ದರ್ಶನಕ್ಕೆ ಟಿಕೆಟ್ ಹಾಗೂ ಪ್ರಸಾದ ಲಭ್ಯವಿದೆ 

₹300 ಮತ್ತು ₹1,000 ವಿಶೇಷ ದರ್ಶನ ಟಿಕೆಟ್ಭ ಕ್ತರಿಗೆ ತ್ವರಿತ ಹಾಗೂ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು...