ಹಾಸನ | ಮದ್ಯ ಸೇವಿಸುವ ಪಂದ್ಯ; ಓರ್ವನ ಸಾವಿನಲ್ಲಿ ಅಂತ್ಯ

Date:

ಇಬ್ಬರು ವ್ಯಕ್ತಿಗಳ ನಡುವೆ ನಡೆದ ಮದ್ಯ ಸೇವಿಸುವ ಪಂದ್ಯ​​ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ತಿಮ್ಮೇಗೌಡ (60) ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜು ಹಾಗೂ ತಿಮ್ಮೇಗೌಡ ಎಂಬುವವರ ನಡುವೆ ಪಂದ್ಯ ನಡೆದಿದ್ದು, ಮೂವತ್ತು ನಿಮಿಷದಲ್ಲಿ 90 ಎಂಲ್‌ನ ಹತ್ತು ಪ್ಯಾಕೆಟ್ ಮದ್ಯ ಕುಡಿಯುವಂತೆ ಪಂದ್ಯದಲ್ಲಿ ಸೂಚಿಸಲಾಗಿತ್ತು.

ಕೃಷ್ಣೇಗೌಡ ಎಂಬವರು ಇಬ್ಬರಿಗೂ ಮದ್ಯದ ಪ್ಯಾಕೆಟ್‌ಗಳನ್ನು ನೀಡಿದ್ದರು. ಚಾಲೆಂಜ್‌ಗಾಗಿ ಮದ್ಯ ಕುಡಿದು ರಕ್ತ ವಾಂತಿ ಮಾಡಿಕೊಂಡು ಬಸ್ ನಿಲ್ದಾಣದಲ್ಲೇ ತಿಮ್ಮೇಗೌಡ ಬಿದ್ದಿದ್ದಾರೆ. ತಿಮ್ಮೇಗೌಡ ವಾಂತಿ ಮಾಡುತ್ತಿದ್ದಂತೆಯೇ ದೇವರಾಜು ಮತ್ತು ಕೃಷ್ಣೇಗೌಡ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗ್ರಾಮಸ್ಥರು ತಿಮ್ಮೇಗೌಡನನ್ನು ಎತ್ತಿಕೊಂಡು ಬಂದು ಮನೆಯಲ್ಲಿ ಮಲಗಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ‌ ನಿತ್ರಾಣವಾಗಿದ್ದ ತಿಮ್ಮೇಗೌಡ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ. ತಿಮ್ಮೇಗೌಡನ ಪುತ್ರಿ ಹಬ್ಬಕ್ಕಾಗಿ ಸಂಬಂಧಿಕರ ಮನೆಗೆ ತೆರಳಿದ್ದರು. ಮನೆಗೆ ಬಂದು ತನ್ನ ತಂದೆ ರಕ್ತಕಾರಿ ಮಲಗಿದ್ದನ್ನ ಕಂಡು ಎಬ್ಬಿಸಲು ಯತ್ನಿಸಿದಾಗ ಮೃತಪಟ್ಟಿರುವುದು ತಿಳಿದಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ; ತಂಬಾಕು ಉತ್ಪನ್ನ ಖರೀದಿ ವಯೋಮಿತಿ 21 ವರ್ಷಕ್ಕೆ ಏರಿಕೆ: ದಿನೇಶ್ ಗುಂಡೂರಾವ್

ಘಟನೆ ಸಂಬಂಧ ತಿಮ್ಮೇಗೌಡನ ಪುತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹೊಳೆನರಸೀಪುರ ನಗರ ಠಾಣೆ ಪೊಲೀಸರು ದೇವರಾಜು ಹಾಗೂ ಕೃಷ್ಣೇಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಹಾಡಹಗಲೇ ರೌಡಿಶೀಟರ್‌ನ ಬರ್ಬರ ಹತ್ಯೆ; ಆರೋಪಿಗಳು ನಾಪತ್ತೆ

ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ...

ಹಾಸನ ಚಲೋ | ಮನವಿ ಸ್ವೀಕರಿಸದ ಜಿಲ್ಲಾಧಿಕಾರಿ; ನೂರಾರು ಹೋರಾಟಗಾರರು ಡಿಸಿ ಕಚೇರಿಗೆ ಮುತ್ತಿಗೆ

ಹಾಸನ ಚಲೋ ಬೃಹತ್ ಹೋರಾಟದ ವೇದಿಕೆಗೆ ಬಂದು ಹಾಸನ ಜಿಲ್ಲಾಧಿಕಾರಿ ಮನವಿ...

ಹಾಸನ ಚಲೋ | ಪ್ರಜ್ವಲ್ ಗೆದ್ದರೆ ಮತ್ತೊಮ್ಮೆ ಹೋರಾಟ: ಬಡಗಲಪುರ ನಾಗೇಂದ್ರ

ನಮ್ಮ ರಾಜ್ಯದಲ್ಲಿ ಯಾರೊಬ್ಬರ ಅಧಿಕಾರದ ಮದವೂ ನಡೆಯುವುದಿಲ್ಲ ಎಂಬ ಸಂದೇಶವನ್ನು ಇಡೀ...

ಹಾಸನ ಚಲೋ | ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ: ಹೋರಾಟಗಾರ್ತಿ ಕೆ ನೀಲಾ

ಬಿಜೆಪಿಗರು ರಾಮಾಯಣ-ಮಹಾಭಾರತ ನಮ್ಮವು ಅಂತ ಹೇಳಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಮಹಾಭಾರತದ ದ್ರೌಪದಿ...