ಎಚ್ ಡಿ ರೇವಣ್ಣ ವಿರುದ್ಧದ ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ ರದ್ದುಗೊಳಿಸಿದ ಹೈಕೋರ್ಟ್

Date:

ಮನೆ ಕೆಲಸದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ, ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣಿಸಿದ) ತೆಗೆದುಕೊಂಡು ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಆದರೆ, ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪವನ್ನು ಪರಿಗಣಿಸಲು ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿದೆ.

- Advertisement -

ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಎಚ್. ಡಿ. ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್, ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯ ಘನತೆಗೆ ಚ್ಯುತಿ) ಅಡಿ ಕಾಗ್ನೈಜೆನ್ಸ್ ತೆಗೆದುಕೊಂಡು 42ನೇ ಎಸಿಜೆಎಂ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿದೆ. ಆದರೆ, ಐಪಿಸಿ 354ಎ (ಲೈಂಗಿಕ ದೌರ್ಜನ್ಯ) ಅಡಿ ಸೂಕ್ತ ಆದೇಶ ಹೊರಡಿಸಲು ಪರಿಗಣಿಸುವಂತೆ ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂದಿರುಗಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?

ತೀರ್ಪು ಪ್ರಕಟಿಸಿದ ಬಳಿಕ ನ್ಯಾಯಮೂರ್ತಿಗಳು, ದೂರಿನಲ್ಲಿನ ಆರೋಪಗಳು ಐಪಿಸಿ ಸೆಕ್ಷನ್ 354ಎ ಅಡಿ ಬರುತ್ತವೆ. ಐಪಿಸಿ ಸೆಕ್ಷನ್ 354 ಇಲ್ಲಿ ಅನ್ವಯಿಸುವುದಿಲ್ಲ. ನನ್ನ ಪ್ರಕಾರ ಸಂತ್ರಸ್ತೆಯ ಘನತೆಗೆ ಹಾನಿ ಮಾಡುವ ಉದ್ದೇಶ ತೋರುವುದಿಲ್ಲ. ಇದು ಲೈಂಗಿಕ ದೌರ್ಜನ್ಯವಾಗುತ್ತದೆ. ಇದು ನನ್ನ ಅಭಿಪ್ರಾಯ, ನಿಮಗೆ ಅಗತ್ಯವಿದ್ದರೆ ಅದನ್ನು ಪ್ರಶ್ನಿಸಬಹುದು ಎಂದು ಪ್ರಾಸಿಕ್ಯೂಷನ್ ಕುರಿತು ಹೇಳಿತು.

ಮೂರು ವರ್ಷ ಅಥವಾ ಅದಕ್ಕಿಂತ ಕಡಿಮೆ ಶಿಕ್ಷೆಯಾದರೆ ಪೊಲೀಸರು ಎಫ್ಐಆರ್ ದಾಖಲಿಸಲಾಗದು ಎಂಬ ವಾದವನ್ನೂ ತಳ್ಳಿಹಾಕಲಾಗಿದೆ ಎಂದೂ ಪೀಠ ಹೇಳಿತು. ರಾಜ್ಯ ಹೆಚ್ಚುವರಿ ಸರಕಾರಿ ಅಭಿಯೋಜಕ ಬಿ.ಎನ್. ಜಗದೀಶ್, 2024ರ ಸೆಪ್ಟಂಬರ್ 9ರಂದು ವಿಚಾರಣಾ ನ್ಯಾಯಾಲಯ ಐಪಿಸಿ ಸೆಕ್ಷನ್ 352 ಹಾಗೂ 354ಎ ಆರೋಪಗಳಿಗೆ ಕಾಗ್ನೈಜೆನ್ಸ್ ತೆಗೆದುಕೊಂಡಿದೆ. ಈ ಎರಡೂ ಸೆಕ್ಷನ್ ಗಳ ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಇದೇ ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ...

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...

ಮೈಸೂರು ದಸರಾ: ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕನಿಗೆ ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಘು ಲಾಠಿ...