ಹಾಸನ | ಕಾಂಗ್ರೆಸ್ ಸರ್ಕಾರ: ಜಿಲ್ಲೆಯಲ್ಲಿ ಅಭಿವೃದ್ಧಿ ಶೂನ್ಯ ; ಶಾಸಕ ಹೆಚ್. ಪಿ ಸ್ವರೂಪ್ ಪ್ರಕಾಶ್ 

Date:

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ನಡುವೆಯೇ, “ಮುಖ್ಯಮಂತ್ರಿ ಯಾರು ಎಂಬುದು ಮುಖ್ಯವಲ್ಲ, ಹಾಸನ ಜಿಲ್ಲೆಗೆ ಏನು ಅನುದಾನ ಮತ್ತು ಅಭಿವೃದ್ಧಿ ಸಿಗುತ್ತದೆ ಎಂಬುದೇ ಪ್ರಮುಖ” ಎಂದು ಶಾಸಕ ಎಚ್.ಪಿ. ಸ್ವರೂಪ್‌ ಪ್ರಕಾಶ್ ಹೇಳಿದ್ದಾರೆ.

- Advertisement -

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಹಾಸನ ಜಿಲ್ಲೆಗೆ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಿಗಲಿಲ್ಲ ಎಂದು ಆರೋಪಿಸಿದರು. ಜಿಲ್ಲೆಯ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಜಿಲ್ಲೆಯ ಪಾಲಿಗೆ ಅವರ ಕೊಡುಗೆ ಶೂನ್ಯವಾಗಿದೆ ಎಂದು ಟೀಕಿಸಿದರು. ಮೇಲೆ “ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದಕ್ಕಿಂತ ಹಾಸನ ಜಿಲ್ಲೆಗೆ ಏನು ಸಿಗುತ್ತದೆ ಎನ್ನುವುದು ಮುಖ್ಯ. ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ, ಮೂಲಸೌಕರ್ಯ ಹಾಗೂ ಜನಪರ ಯೋಜನೆಗಳು ಬರಬೇಕು. ಅದನ್ನು ನೀಡುವ ನಾಯಕನೇ ಜನರಿಗೆ ಮುಖ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿದ್ದೀರಾ?ಹಾಸನ | ಮಂತ್ರಿಯಾಗಲು ಮೂರು ನಾಯಕರು ಭರವಸೆ ಕೊಟ್ಟಿದ್ದಾರೆ ; ಶಿವಲಿಂಗೇಗೌಡ 

ಉಪ ಮುಖ್ಯಮಂತ್ರಿ ಡಿ.ಕೆ-ಶಿವಕುಮಾ‌ರ್ ಮುಖ್ಯಮಂತ್ರಿ ಸ್ಥಾನಕ್ಕೇರಬಹುದು ಎಂಬ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಅವರು. “ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದರೆ ಹಾಸನ ಜಿಲ್ಲೆಗೆ ಯಾವ ರೀತಿಯ ನೆರವು ಮತ್ತು ಅಭಿವೃದ್ಧಿ ನೀಡುತ್ತಾರೆ ಎಂಬುದನ್ನು ಕಾದು ನೋಡೋಣ” ಎಂದರು. ಜೆಡಿಎಸ್‌ ಆಡಳಿತ ಅವಧಿಯಲ್ಲಿ ಹಾಸನ ಜಿಲ್ಲೆಗೆ ಅನೇಕ ಪ್ರಮುಖ ಯೋಜನೆಗಳು ಮಂಜೂರಾಗಿದ್ದವು-ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾ-ರಿಗಳಿಗೆ ನಾವು ಅಡಿಪಾಯ ಹಾಕಿದ್ದೇವೆ. ಆದರೆ ಉದ್ಘಾಟನೆ ವೇಳೆ ಮಾತ್ರ ಕಾಂಗ್ರೆಸ್ ನಾಯಕರು ಮುಂದೆ ಬರುತ್ತಾರೆ ಎಂದು ವ್ಯಂಗ್ಯವಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...