ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಸೋಮವಾರ ಸಂಜೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೋಹಿತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮದುವೆಯಾಗಲು ನಿರಾಕರಿಸಿದ ಪ್ರೇಯಸಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿ ಮೋಹಿತ್ ತಲೆಮರೆಸಿಕೊಂಡಿದ್ದನು. ಕೆ ಆರ್ ನಗರ ತಾಲೂಕಿನ ಭೇರ್ಯ ಎಂಬಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಇನ್‌ಸ್ಪೆಕ್ಟರ್ ಗಂಗಾಧರ್, ಕಾನ್ಸ್‌ಟೇಬಲ್‌ಗಳಾದ ರಾಕೇಶ್, ಸೋಮಶೇಖರ್ ತಂಡ ಆತನ್ನು ಬಂಧಿಸಿ ಕರೆತಂದು ವಿಚಾರಣೆ ಆರಂಭಿಸಿದ್ದಾರೆ.
ಇದನ್ನೂ ಓದಿದ್ದೀರಾ? ಹಾಸನ | ಮದುವೆಗೆ ನಿರಾಕರಿಸಿದ ಯುವತಿ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ ಯುವಕ
ಗಂಭೀರವಾಗಿ ಗಾಯಗೊಂಡ ಯುವತಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.
