ಹಾಸನಾಂಬ ಜಾತ್ರೆ | ಸುಗಮ ದರ್ಶನಕ್ಕೆ ಭೇಷ್ ವ್ಯವಸ್ಥೆ, ಶೀಘ್ರವೇ ಬನ್ನಿ:‌ ಸಚಿವ ಕೃಷ್ಣಬೈರೇಗೌಡ

Date:

ಹಾಸನಾಂಬ ಜಾತ್ರೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 9ರ ವೇಳೆಗೆ 1.2 ಲಕ್ಷಕ್ಕೂ ಅಧಿಕ ಮಂದಿ ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಶ್ಲಾಘಿಸಿದ್ದಾರೆ.

- Advertisement -

₹1000 ಟಿಕೆಟ್ ದರ್ಶನವು ದಿನವಿಡೀ 10 ನಿಮಿಷಕ್ಕಿಂತ ಕಡಿಮೆ ಸಮಯದಲ್ಲಿ, ₹300 ಟಿಕೆಟ್ ದರ್ಶನವು 10 ರಿಂದ 30 ನಿಮಿಷಗಳಲ್ಲಿ ಪೂರ್ಣಗೊಳ್ಳುತ್ತಿದೆ. ಧರ್ಮ ದರ್ಶನವು 30 ನಿಮಿಷಗಳಿಂದ ಗರಿಷ್ಠ 2 ಗಂಟೆ 30 ನಿಮಿಷಗಳಲ್ಲಿ ಆಗುತ್ತಿದ್ದು, ಎಲ್ಲ ವ್ಯವಸ್ಥೆಗಳು ಸುಸೂತ್ರವಾಗಿ ಸಾಗಿವೆ. ಗಣ್ಯರ ದರ್ಶನವೂ ಗೌರವಯುತವಾಗಿ ಸಾಗುತ್ತಿದೆ. ಸಚಿವರು ಎಲ್ಲ ವ್ಯವಸ್ಥೆಗಳನ್ನು ವೈಯಕ್ತಿಕವಾಗಿ ಪರಿಶೀಲಿಸಿದ್ದು, ಶೌಚಾಲಯಗಳು ಅತ್ಯಂತ ಸ್ವಚ್ಛವಾಗಿವೆ, ಕಸವನ್ನು ನಿರಂತರವಾಗಿ ತೆಗೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
ಹಾಸನಾಂಬ ಜಾತ್ರೆ 1

“ಶನಿವಾರ ರಾತ್ರಿ ಧರ್ಮ ದರ್ಶನದ ಸಾಲು ಭರ್ತಿಯಾಗಿದ್ದು, ಮಧ್ಯರಾತ್ರಿ 12ಕ್ಕೆ ಗರಿಷ್ಠ ಜನಸಂದಣಿ ನಿರೀಕ್ಷಿಸಲಾಗಿದೆ. ದರ್ಶನವು ರಾತ್ರಿ 2ಕ್ಕೆ ಸ್ಥಗಿತಗೊಳ್ಳುತ್ತಿದ್ದು, ಬೆಳಿಗ್ಗೆ 5 ಗಂಟೆಗೆ ಪುನಃ ಆರಂಭವಾಗಲಿದೆ. ಭಾನುವಾರ ಬೆಳಿಗ್ಗೆ ಹೆಚ್ಚು ಜನಸಂದಣಿ ಇರುವುದರಿಂದ, ಭಕ್ತರು ದರ್ಶನಕ್ಕಾಗಿ 3 ಗಂಟೆ ಅಥವಾ ಅದಕ್ಕೂ ಹೆಚ್ಚು ಕಾಲ ಸರತಿ ಸಾಲಿನಲ್ಲಿ ಕಾಯಬೇಕಾಗಬಹುದು” ಎಂದು ಸಚಿವರು ಮುನ್ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ ಹಾಸನಾಂಬ ದೇವಾಲಯ: ಕರ್ತವ್ಯ ಲೋಪ ಆರೋಪದಲ್ಲಿ ನಾಲ್ವರು ಸರ್ಕಾರಿ ನೌಕರರ ಅಮಾನತು

ಭಕ್ತರ ಭಾರೀ ಜನಸಂದಣಿಯನ್ನು ತಪ್ಪಿಸಲು ಸಚಿವರು ಮತ್ತೊಮ್ಮೆ ಮನವಿ: “ಅಕ್ಟೋಬರ್ 18ರಿಂದ 22ರವರೆಗೆ ಅತಿಹೆಚ್ಚು ಜನಸಂದಣಿ ಇರುವುದರಿಂದ, ಭಕ್ತರು ಸಾಧ್ಯವಾದರೆ ಅಕ್ಟೋಬರ್ 18ರ ಒಳಗೆಯೇ ಬಂದು ದರ್ಶನ ಪಡೆಯುವ ಮೂಲಕ ಸಹಕರಿಸಬೇಕು” ಎಂದು ಕೃಷ್ಣಬೈರೇಗೌಡರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...