ಹಾವೇರಿ ಜಿಲ್ಲೆಯ ಯತ್ನಳ್ಳಿ ಗ್ರಾಮಸ್ಥರು ಇಂದು ಬೆಳಗ್ಗೆ (ನ.14) ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ರಸ್ತೆ ಬದಿಯ ಕಾಲುವೆಯೊಳಗೆ 10 ಬ್ಯಾಲೆಟ್ ಬಾಕ್ಸ್‌ಗಳು ಪತ್ತೆಯಾಗಿವೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರವಷ್ಟೇ ಮುಗಿದಿದೆ. ಇದರ ಮರುದಿನವೇ ಕಾಲುವೆಯಲ್ಲಿ ಬ್ಯಾಲೆಟ್ ಬಾಕ್ಸ್‌ಗಳು ಸಿಕ್ಕಿವೆ. ಇದರಿಂದ ಗ್ರಾಮಸ್ಥರು ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, “ಈ ಬ್ಯಾಲೆಟ್ ಬಾಕ್ಸ್‌ಗಳು ಹಳೆಯದ್ದಾಗಿವೆ. ಶಿಗ್ಗಾಂವಿ ಚುನಾವಣೆಗೂ ಈ ಬಾಕ್ಸ್‌ಗಳಿಗೂ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದೆ.
“ಕಾಲುವೆಯಲ್ಲಿ ಕಬ್ಬಿಣದ ಬಾಕ್ಸ್‌ಗಳು ಬಿದ್ದಿರುವ ಮಾಹಿತಿ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲಿಸಲು ತಹಶೀಲ್ದಾರ್ ಅವರಿಗೆ ಸೂಚಿಸಿದ್ದೇನೆ. ಈ ಬಾಕ್ಸ್‌ಗಳು ಹಳೆಯದಾಗಿದ್ದು, ಶಿಗ್ಗಾಂವಿ ಚುನಾವಣೆಗೂ ಇವುಗಳಿಗೂ ಯಾವುದೇ ಸಂಬಂಧವಿಲ್ಲ. ಜನರಿಗೆ ಈ ಬಗ್ಗೆ ಅನುಮಾನ ಬೇಡ” ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.