ಹಾವೇರಿ | 33 ಲಕ್ಷ ದೋಚಿದ ಪ್ರಕರಣ: ಒಬ್ಬ ಆರೋಪಿ ಬಂಧನ

Date:

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 33 ಲಕ್ಷ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಎಂದು ಗುರುತಿಸಲಾಗಿದೆ.

- Advertisement -

ಸಿವಿಲ್ ಕಾಂಟ್ರ್ಯಾಕ್ಟರ್ ಸಂತೋಷ್ ಕಳೆದ ಮಾ.6 ರಂದು ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂ. ಹಣವನ್ನು ಡ್ರಾ ಮಾಡಿಕೊಂಡು ಬಂದಿದ್ದರು. ತಮ್ಮ ಕಾರಿನ ಹಿಂಭಾಗದ ಸೀಟಿನಲ್ಲಿಟ್ಟುಕೊಂಡು ಸಾಯಂಕಾಲ ಮನೆಗೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರಿನಲ್ಲಿ ಹಣ ಬಿಟ್ಟು ಮನೆಯೊಳಗೆ ಹೋಗಿ, ಊಟ ಮಾಡಿ ವಾಪಸ್ ಸಂಜೆ ಕಾರಿನ ಹತ್ತಿರ ಬಂದು ನೋಡಿದಾಗ ಕಾರಿನ ಗ್ಲಾಸ್ ಒಡೆದು ಹಣ ಕಳ್ಳತನ ಆಗಿರುವುದು ಬೆಳಕಿಗೆ ಬಂದಿತ್ತು.

ಶಹರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಪೊಲೀಸರು ಪರಿಶೀಲನೆ ವೇಳೆ ಕಳ್ಳರ ಕೈಚಳಕದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂತರ ತನಿಖೆ ವೇಳೆ ಎರಡು ಬೈಕ್‌ಗಳಲ್ಲಿ ಬಂದಿದ್ದ ನಾಲ್ಕು ಜನ ಕಳ್ಳರಲ್ಲಿ ಒಬ್ಬ ಕಾರಿನ ಬಳಿ ಸುತ್ತಾಡಿ, ಕಾರಿನ ಗ್ಲಾಸ್ ಒಡೆದು ಕಾರಿನ ಒಳಹೊಕ್ಕು ಹಣವಿದ್ದ ಬ್ಯಾಗ್ ತೆಗೆದುಕೊಂಡಿದ್ದಾನೆ. ನಂತರ ಬೈಕ್‌ನಲ್ಲಿ ಬಂದ ಮತ್ತೊಬ್ಬ ಖದೀಮ ಆತನನ್ನು ಕರೆದುಕೊಂಡು ಪರಾರಿಯಾಗಿದ್ದ. ಕೇವಲ 33 ಸೆಕೆಂಡ್‌ನಲ್ಲಿ ಹಣ ದೋಚಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...