ಹಾವೇರಿ | 62 ನೂತನ ಹಾಸ್ಟೆಲ್ ಮಂಜೂರು: ಎಸ್ಎಫ್ಐ ಸಂಘಟನೆಯ ಹೋರಾಟಕ್ಕೆ ಸಂದ ಜಯ

Date:

“ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ತಪ್ಪಿಸಲು ರಾಜ್ಯ ಸರ್ಕಾರ ನೂತನವಾಗಿ 62 ಹಾಸ್ಟೆಲ್ ಮಂಜೂರು ಮಾಡಿರವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿಯು ಸ್ವಾಗತಿಸುತ್ತದೆ. ಇದು ನಮ್ಮ ಸಂಘಟನೆಯ ಹೋರಾಟಕ್ಕೆ ದೊರೆತ ಜಯ” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

“ಹಿಂದುಳಿದ ಸಮುದಾಯಕ್ಕೆ ಸೇರಿದ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣಕ್ಕಾಗಿ ವಿವಿಧ ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಬರುವರು. ಬರವ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ಅರಿತುಕೊಂಡ ನಮ್ಮ ಸಂಘಟನೆಯು ನಿರಂತರವಾಗಿ ಹಾಸ್ಟೆಲ್ಗಾಗಿ ಸಾವಿರಾರು ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲಾಗಳಲ್ಲಿ ಪ್ರತಿಭಟನೆ ನಡೆಸಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಹಾಸ್ಟೆಲ್ ಬಲವರ್ಧನೆಗಾಗಿ ರಾಜ್ಯವ್ಯಾಪ್ತಿ ಶೈಕ್ಷಣಿಕ ಜಾಥಾ ಮಾಡಿ, ಹಾವೇರಿಯಲ್ಲಿ ನಡೆದ ಎಸ್ಎಫ್ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಮಾವೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನೂತನ ಹಾಸ್ಟೆಲ್ ಮಂಜೂರು ಮಾಡುಂತೆ ಆಗ್ರಹಿಸಿ ಹೋರಾಟದ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಂಘಟನೆ ಹೋರಾಟದ ಫಲವಾಗಿ ಈ ಹಿನ್ನೆಲೆಯಲ್ಲಿ ಬಿಸಿಎಮ್ ಇಲಾಖೆಯ 62 ನೂತನ ಹಾಸ್ಟೆಲ್ ಮಂಜೂರು ಮಾಡಿದ್ದನ್ನು ಸ್ವಾಗತಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಇದೇ ರೀತಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್ ಗಳು ವಸತಿ ಶಾಲೆಗಳನ್ನು ಮಂಜೂರು ಮಾಡಬೇಕು. ಹಾಸ್ಟೆಲ್ ಮಂಜೂರು ಮಾಡಲು ಕಾರಣರಾದ ರಾಜ್ಯದ ಮುಖ್ಯಮಂತ್ರಿಗಳಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಿಗೆ, ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತದೆ” ಎಂದು ಎಸ್ಎಫ್ಐ ಹಾಸ್ಟೆಲ್ ಉಪ ಸಮಿತಿಯ ರಾಜ್ಯ ಸಂಚಾಲಕ ಅರುಣ್ ನಾಗವತ್, ಸದಸ್ಯರಾದ ಚೈತ್ರಾ ಕೊರವರ ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...