ಹಾವೇರಿ | ಕರವೇ ಸ್ವಾಭಿಮಾನಿ ಬಳಗದಿಂದ 70ನೇ ಕನ್ನಡ ರಾಜ್ಯೋತ್ಸವ ಆಚರಣೆ

Date:

70ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸರಳ, ಸಂಭ್ರಮದಿಂದ ಹಾವೇರಿ ಪಟ್ಟಣದ ಗುರು ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ಆಚರಿಸಿತು.

- Advertisement -

ಕರವೇ ಸ್ವಾಭಿಮಾನಿ ಬಳಗ ಜಿಲ್ಲಾ ಅಧ್ಯಕ್ಷರು ಯಲ್ಲಪ್ಪ ಮರಾಠೆ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಯಾಲಕ್ಕಿ ಕಂಪಿನ ನಾಡು ಹೆಗ್ಗಳಿಕೆಗೆ ಪಾತ್ರವಾದ ಹಾವೇರಿಯಲ್ಲಿ ಇಂದು ಕನ್ನಡ ದ್ವಜ ಹಾರಾಡುತ್ತಿದೆ. ಕನ್ನಡ ಕಲರವ ಕನ್ನಡ ರಾಜ್ಯೋತ್ಸವಕ್ಕೆ ಹಬ್ಬದ ವಾತಾವರಣ, ಕನ್ನಡ ನಾಡು, ನುಡಿ, ನೆಲ, ಜಲ ಭಾಷೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ತನ್ನದೇ ಆದ ಶೈಲಿಯಲ್ಲಿ ಹೋರಾಟಗಳನ್ನು  ಮಾಡುತ್ತಾ ಬಂದಿದೆ” ಎಂದು ಹೇಳಿದರು.

“ನೊಂದವರ ಧ್ವನಿಯಾಗಿ ಸಂಘಟನೆ ಜಿಲ್ಲೆಯಲ್ಲಿ ತನ್ನದೇ ಆದ ಚಾಪು ಮೂಡಿಸಿದೆ” ಎಂದು ಹೇಳಿದರು.

ನವಂಬರ್ 28ಕ್ಕೆ ಕೆಚ್ಚೆದೆ ಕನ್ನಡಿಗರು ಕಾರ್ಯಕ್ರಮ

 ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ವತಿಯಿಂದ ಇದೇ ತಿಂಗಳು ನವಂಬರ್ 28ಕ್ಕೆ ಹಾವೇರಿ ಪಟ್ಟಣದ ಗುರುಭವದಲ್ಲಿ  ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕೆಚ್ಚದೆ ಕನ್ನಡಿಗರು’ ಕಾರ್ಯಕ್ರಮವು ಸಂಜೆ ಮೂರಕ್ಕೆ ನಡೆಯಲಿದೆ.

ಈ ಕಾರ್ಯಕ್ರಮದ ವಿಶೇಷತೆವಾಗಿ ಸಾಹಿತಿಗಳಿಗೆ, ಕಲಾವಿದರಿಗೆ, ಮಾಜಿ ಸೈನಿಕರಿಗೆ, ಸಾಧಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಗುವುದು. 

“ನಂತರ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಉತ್ತರ ಕರ್ನಾಟಕ ಕಾರ್ಯಾಧ್ಯಕ್ಷರು ಯೂಸುಫ್ ಸೈಕಲಗಾರ, ಜಿಲ್ಲಾ ಮಹಿಳಾ ಅಧ್ಯಕ್ಷರು ಗೀತಾಬಾಯಿ ಲಮಾಣಿ, ತಾಲೂಕ ಅಧ್ಯಕ್ಷರು ರಾಜಾಭಕ್ಷ ಮಾನೇಗಾರ, ಜಿಲ್ಲಾ ಉಪಾಧ್ಯಕ್ಷರು ಪ್ರದೀಪ್ ಗೌಡರ್, ರೇಷ್ಮಾ ಬಿರಬ್ಬಿ, ಸಂಘಟನೆ ಪದಯಾಧಿಕಾರಿಗಳು ಸೇರಿದಂತೆ ಕನ್ನಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...