ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎಸ್‌ಎಫ್‌ಐ ರಾಣೆಬೆನ್ನೂರು ತಾಲೂಕು ಘಟಕದ ಉಪಾಧ್ಯಕ್ಷ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಮೇಡೇರಿ ಕ್ರಾಸ್ ಬಳಿ ಸಂಭವಿಸಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಸಿದ್ದೇಶ್ವರ ನಗರದ ನಿವಾಸಿ ಹಾಗೂ ಭಾರತೀಯ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ತಾಲೂಕು ಉಪಾಧ್ಯಕ್ಷ ನಿಹಾಲಖಾನ್ ಸಾಧಿಕಖಾನ್ ಗಂಗಾವತಿ(19) ಮೃತ ಯುವಕ.
ಹೊಸಹುಲಿಹಳ್ಳಿಯ ಹನುಮಂತ ಶ್ರೀಕಾಂತ ಹಾವನೂರ ಹಾಗೂ ಮೇಡೇರಿ ಗ್ರಾಮದ ಚಂದ್ರಪ್ಪ ವ್ಯಾಪಾರಿ ಎಂಬುವವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಗದಗ | ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ದ ಭೀಮಾ ಕೋರೆಗಾಂವ್: ಕವಿ ವೀರಪ್ಪ ತಾಳದವರ
ನಿಹಾಲಖಾನ್ ತನ್ನ ಸ್ನೇಹಿತನನ್ನು ಕರೆದುಕೊಂಡು ಮೇಡೇರಿಯಿಂದ ರಾಣೆಬೆನ್ನೂರ ಕಡೆಗೆ ಬರುತ್ತಿದ್ದ ಸಮಯದಲ್ಲಿ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
