ಹಾವೇರಿ | ಪ್ರೀತಿ ವಂಚಿತ ಮಕ್ಕಳೊಂದಿಗೆ ಸರಳ ದೀಪಾವಳಿ

Date:

ಮನೆಯಿಂದ ದೂರವಾದ, ಪ್ರೀತಿ ವಂಚಿತ ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡುವ ಮೂಲಕ ಅರ್ಥಪೂರ್ಣ, ಸರಳ ದೀಪಾವಳಿಯನ್ನು ಆಚರಿಸಲಾಯಿತು.

- Advertisement -

ಹಾವೇರಿ ಪಟ್ಟಣದ ಉದಯ ನಗರ ಅಂಚಿನ ಹೊರ ವಲಯದಲ್ಲಿರುವ ಶ್ರೀಶಕ್ತಿ ತೆರತೆದ ತಂಗುದಾಣದಲ್ಲಿ ನಿರ್ಗತಿಕರ ಮಕ್ಕಳೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ತಂದೆ ತಾಯಿ, ಮನೆ ಮಂದಿಯ ಪ್ರೀತಿಯಿಂದ ವಂಚಿತವಾಗಿರುವ ಮಕ್ಕಳ ಜೊತೆಗೆ ನಮ್ಮ ದೀಪಾವಳಿಯನ್ನು ಆಚರಿಸುವುದು ನಿಜ ಅರ್ಥದ ದೀಪಾವಳಿ ಆಗಿದೆ” ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ನುಡಿದರು.

“೧೯ ಮಕ್ಕಳಿಗೆ ಹೊಸ ಬಟ್ಟೆಗಳನ್ನು ವಿತರಿಸಿದ ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಅವರು “ಅವಜ್ಞೆಗೆ ಈಡಾದ, ಮುಗ್ಧ ಮಕ್ಕಳೊಂದಿಗೆ ದೀಪಾವಳಿಯಂತಹ ಸಂತೋಷದ ಕ್ಷಣ ಕಳೆಯುವುದೇ ಸೌಭಾಗ್ಯ” ಎಂದರು.

ಸಾಮಾಜಿಕ ಕಾರ್ಯಕರ್ತೆ ಹಸೀನಾ ಹೆಡಿಯಾಲ ಮಾತನಾಡಿ,”ಮಕ್ಕಳು ಮಕ್ಕಳೇ, ಅವರಿಗೆ ದುಡ್ಡಿಗಿಂತ ಪ್ರೀತಿಯೇ ಮುಖ್ಯವಾಗಿರುತ್ತದೆ. ಸಮಾಜವನ್ನು ಪ್ರೀತಿಸುವವರು ಇಂತಹ ಪ್ರೀತಿಯನ್ನು ವಿಶೇಷವಾಗಿ ನಿರ್ಗತಿಕ ಮಕ್ಕಳಿಗೆ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯೋತ್ಸವ ಪ್ರಶಸ್ತಿ ಸಮಿತಿಗೆ ಬಯಲಾಟ ಅಕಾಡೆಮಿ ಅಧ್ಯಕ್ಷರನ್ನೂ ನೇಮಕ ಮಾಡಲು ಆಗ್ರಹ

ಸಮಾರಂಭದಲ್ಲಿ ಸಾಂಸ್ಥಿಕ ರಕ್ಷಣಾಧಿಕಾರಿ ಶ್ರೀಮತಿ ಮಂಗಳಾ ಅಳಗುಂಡಗಿ, ತೆರೆದ ತಂಗುದಾಣದ ನಿರ್ವಾಹಕ ಪುಟ್ಟಪ್ಪ ಹರವಿ, ಮನೋಜ ಹಿರೇಮಠ, ಪ್ರಬಾ ಸಾಲಿಮಠ, ಉಮಾ ಹಂಚಿನಮನಿ, ದೀಪಾ ಹೊಳೆಯಪ್ಪನವರ, ಸಾಂತ್ವನ ಮಹಿಳಾ ಸಹಾಯಕ ಸಿಬ್ಬಂದಿಗಳಾದ ಪಾರ್ವತಿ ಎಲ್. ಲಕ್ಷ್ಮೀ ಸಿಂಗಣ್ಣನವರ ಹಾಗೂ ಜಿಲ್ಲಾ ಪೊಲೀಸ ಘಟಕದ ಹವಾಲ್ದಾರ ಎಚ್.ಡಿ. ಪವಾರ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...