ಹಾವೇರಿ | ಅನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ತಿರುವು: ಮಹಿಳೆ ಅಪಹರಿಸಿ ಏಳು ಮಂದಿಯಿಂದ ಅತ್ಯಾಚಾರ

Date:

ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಡೆದಿದ್ದ ಅನೈತಿಕ ಪೊಲೀಸ್‌ಗಿರಿ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ವಿವಾಹಿತ ಮಹಿಳೆಯನ್ನು ಅಪಹರಿಸಿ ಏಳು ಮಂದಿಯಿಂದ ಅತ್ಯಾಚಾರ ನಡೆಸಲಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.

- Advertisement -

ಅನ್ಯಕೋಮಿನ ಪುರುಷನೊಂದಿಗೆ ಸಿಕ್ಕಿ ಬಿದ್ದಿದ್ದಕ್ಕೆ ಮುಸ್ಲಿಂ ಮಹಿಳೆಯನ್ನು ಥಳಿಸಿ, ಖಾಸಗಿ ಅಂಗಾಂಗವನ್ನು ಘಾಸಿಗೊಳಿಸಿ ಸಾಮೂಹಿಕ ಅತ್ಯಾಚಾರಗೈಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು ಉಳಿದ ಆರೋಪಿಗಳಿಗೆ ಬಲೆ ಬೀಸಲಾಗಿದೆ. ಮತ್ತೊಂದೆಡೆ ಅನೈತಿಕ ಪೊಲೀಸ್ ಗಿರಿ ಪ್ರಕರಣದ ಆರೋಪಿಗಳ ಮತ್ತೊಂದು ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜ.8ರ ಸೋಮವಾರ ಅನ್ಯಕೋಮಿನ ಇಬ್ಬರು ವಿವಾಹಿತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು ಎಂದು ಆರೋಪಿಸಿ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ ಗೆ ನುಗ್ಗಿ ದಾಂಧಲೆ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ ಹಲ್ಲೆ ಮಾಡುವಾಗ ವಿಡಿಯೋ ಮಾಡಿಕೊಂಡಿದ್ದರು. ಈಗ ಈ ಘಟನೆಯ ಎರಡು ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಘಟನೆಗೆ ಸಂಬಂಧಿಸಿದಂತೆ ಎರಡನೇ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳು ಮುಸ್ಲಿಂ ಮಹಿಳೆಯನ್ನು ಕಾರಿನಲ್ಲಿ ಎಳೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಏಳು ಯುವಕರಿಂದ ಗ್ಯಾಂಗ್ ರೇಪ್
ಹೋಟೆಲ್​ನಲ್ಲಿ ಹಲ್ಲೆ ಮಾಡಿದ ಬಳಿಕ ಅರಣ್ಯ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು 7 ಮುಸ್ಲಿಂ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಂತ್ರಸ್ತ ಮಹಿಳೆ, “ಒಬ್ಬರಾದ ಮೇಲೆ ಒಬ್ಬರು ನನ್ನನ್ನು ಅತ್ಯಾಚಾರ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್ಲೆ ಕೂಡ ಮಾಡಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

halle

ಮತ್ತೊಂದೆಡೆ “ತನ್ನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ಎಷ್ಟು ಮಂದಿ ಇದ್ದರು ಎಂದು ನನಗೆ ಮಾಹಿತಿ ಇಲ್ಲ. ಕಳೆದ ಸೋಮವಾರ ಈ ಘಟನೆ ನಡೆದಿದೆ. ನನ್ನ ಪತ್ನಿ ಆಕೆಯ ತಂಗಿಯ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾರೆ. ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರಗೈದು, ಹಿಂಸೆ ನೀಡಿದ್ದಾರೆ. ಅವರು ಎಲ್ಲವನ್ನೂ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ” ಎಂದು ಮಹಿಳೆಯ ಪತಿ ಕೂಡ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಹೊಳಲ್ಕೆರೆ ಪುರಸಭೆ ಸದಸ್ಯರ ಬೆಂಬಲಿಗರ ನಡುವೆ ಮಾರಾಮಾರಿ

ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ. ವೈರಲಾಗಿರುವ ವಿಡಿಯೋ ಅನೈತಿಕ ಪೊಲೀಸ್‌ಗಿರಿಗೊಳಗಾದ ಮಹಿಳೆಯದ್ದೊ ಅಥವಾ ಬೇರೆಯವರದ್ದೋ ಎಂದು ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...