ಹಾವೇರಿ | ಏಟಿಎಂ ಕಾರ್ಡ್ ಬದಲಿಸಿ ಹಣ ಲೂಟಿ ಮಾಡುತ್ತಿದ್ದ ಆರೋಪಿ ಪೊಲೀಸರಿಂದ ಬಂಧನ

Date:

ಏಟಿಎಂ ಕಾರ್ಡ್ ಬದಲಿಸಿ‌ ಹಣ ಲೂಟಿ ಮಾಡುತ್ತಿದ್ದ ಆರೋಪಿಯನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಲಸಿಂದ ಗ್ರಾಮದ ನಿವಾಸಿ ಕಿರಣಕುಮಾರ ಕಾಳೇಗೌಡ (32) ಎಂದು ಗುರುತಿಸಲಾಗಿದೆ. ಈತನಿಂದ 47 ಸಾವಿರ ರೂ. ನಗದು, 28 ಸಾವಿರ ಮೌಲ್ಯದ ಮೊಬೈಲ್, ವಿವಿಧ ಬ್ಯಾಂಕ್​ಗಳ 60ಕ್ಕೂ ಹೆಚ್ಚು ಎಟಿಎಂ ಕಾರ್ಡ್ ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಆರೋಪಿ ಕಿರಣಕುಮಾರ ಹಣ ಡ್ರಾ ಮಾಡಿಕೊಳ್ಳುವ ನೆಪದಲ್ಲಿ ಎಟಿಎಂ ಹತ್ತಿರವೇ ನಿಲ್ಲುತ್ತಿದ್ದ. ಎಟಿಎಂಗೆ ಬರುವ ಅನಕ್ಷರಸ್ಥರು, ಅಮಾಯಕರು ಸಹಾಯ ಕೇಳಿದಾಗ ಅವರ ಎಟಿಎಂ ತೆಗೆದುಕೊಂಡು ಪಾಸ್​​ವರ್ಡ್ ಪಡೆಯುತ್ತಿದ್ದ. ಬಳಿಕ ಹಣ ಬರಲಿಲ್ಲ, ಸಮಸ್ಯೆ ಇದೆ ಎಂದು ಅವರಿಗೆ ತನ್ನ ಬಳಿಯಿರುವ ಬದಲಿ ಎಟಿಎಂ ಕಾರ್ಡ್​​ ​ಕೊಡುತ್ತಿದ್ದ. ಈ ವೇಳೆ ಪಾಸ್​ವರ್ಡ್​ ತಿಳಿದುಕೊಂಡಿರುತ್ತಿದ್ದ ಆರೋಪಿಯು ಬಳಿಕ ಬೇರೆ ಎಟಿಎಂಗಳಿಗೆ ತೆರಳಿ ಹಣ ಡ್ರಾ ಮಾಡಿಕೊಂಡು ಪರಾರಿಯಾಗುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯು 2024 ಆ.6ರಂದು ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಟಿಎಂ ಕಾರ್ಡ್​​ ಬದಲಾವಣೆ ಮಾಡಿ 75 ಸಾವಿರ ಕಳ್ಳತನ ಮಾಡಿದ್ದ. ಬಂಕಾಪುರ ಪಿಎಸ್ಐ ನಿಂಗರಾಜ್ ನೇತೃತ್ವದಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿದೆ. ಕಿರಣಕುಮಾರ್ ಅಂತರ್​​ಜಿಲ್ಲೆಯಲ್ಲದೆ, ಅಂತಾರಾಜ್ಯ ವಂಚಕನಾಗಿದ್ದಾನೆ ಎಂಬ ಅಂಶ ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಈತನ ವಿರುದ್ಧ ಪ್ರಕರಣಗಳಿವೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...