ಪ್ರಿನ್ಸಿಪಾಲ್ ನಿಂದನೆ ಆರೋಪ ಹಿನ್ನಲೆ ತಾಲೂಕಿನ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ನಡೆದಿದೆ.
ಆದಿತ್ಯ ರಘುವೀರ ಚವ್ಹಾಣ (16) ಆತ್ಯಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳವಾರ (ನ.28) ರಾತ್ರಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ, ವಿದ್ಯಾರ್ಥಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆದಿತ್ಯ ಮೃತಪಟ್ಟಿದ್ದಾನೆ.
ಡೊಳ್ಳೇಶ್ವರ ಗ್ರಾಮದ ಅಜ್ಜಿಯ ಮನೆಯಲ್ಲಿ ವಾಸವಿದ್ದ ಈ ವಿದ್ಯಾರ್ಥಿಯ ಮೂಲ ಹಾವೇರಿ ಎಂದು ತಿಳಿದುಬಂದಿದೆ. ಕಾಲೇಜಿನ ಪ್ರಾಚಾರ್ಯರು ನಿಂದಿಸಿ ಅವಮಾನಿಸಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಎಂದು ವಿದ್ಯಾರ್ಥಿಯ ತಂದೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.