ಹಾವೇರಿ | ಮುಖ್ಯೋಪಾಧ್ಯಾಯರ ಬೇಜವಾಬ್ದಾರಿತನ ಆರೋಪ; ಡಿಸಿ ಕಚೇರಿ ಎದುರು ಅಣಕು ಪರೀಕ್ಷೆ ಬರೆದ ವಿದ್ಯಾರ್ಥಿ

Date:

ಶಾಲೆಯ ಮುಖ್ಯೋಪಾಧ್ಯಾಯರ ಬೇಜವ್ದಾರಿತನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಯೊಬ್ಬ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಣಕು ಪರೀಕ್ಷೆ ಬರೆದು ವಿಶಿಷ್ಟವಾಗಿ ಧರಣಿ ನಡೆಸಿದ್ದಾನೆ.

ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2023-24ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ವಂಚಿತ ವಿದ್ಯಾರ್ಥಿ ಅಭಿಷೇಕ್ ವಿಜಯಕುಮಾರ್ ಜರಮಲ್ಲ, ಮುಖ್ಯೋಪಾಧ್ಯಾಯರ ಮೋಸದ ವಂಚನೆಯಿಂದ ಪ್ರವೇಶ ಪತ್ರ ಬಂದಿಲ್ಲವೆಂದು ಆರೋಪಿಸಿದ್ದು, ಪೂರಕ ಪರೀಕ್ಷೆಯಲ್ಲಾದರೂ ಅವಕಾಶಕ್ಕಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಬೆಂಬಲದೊಂದಿಗೆ ಅಣಕು ಪರೀಕ್ಷೆ ಬರೆಯುವ ಮೂಲಕ ತನ್ನ ಪೋಷಕರೊಂದಿಗೆ ಹಾವೇರಿ ನಗರದ ದೇವಗಿರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ್ದಾನೆ.

ಎಸ್ಎಸ್ಎಲ್‌ಸಿ ಪ್ರಾರಂಭದಿಂದಲೂ ಸರಿಯಾಗಿ ಶಾಲೆಗೆ ಹೋಗುತ್ತಿದ್ದೆ. ಅರ್ಧ ವಾರ್ಷಿಕ ಸೇರಿದಂತೆ ಮೂರು ಕಿರು ಪರೀಕ್ಷೆಗಳನ್ನು ಬರೆದಿದ್ದೇನೆ. ಜನವರಿ ತಿಂಗಳಲ್ಲಿ ಸಿಡುಬು ಕಾಣಿಸಿಕೊಂಡು ಹುಷಾರಿಲ್ಲದ ಕಾರಣ ಮುಖ್ಯೋಪಾಧ್ಯಾಯರ ಗಮನಕ್ಕೆ ತಂದು ಶಾಲೆಗೆ ರಜಾ ಹಾಕಿದ್ದೆ. ಮನೆಯಲ್ಲಿ ಚೆನ್ನಾಗಿ ಅಭ್ಯಾಸಮಾಡು ಎಂದು ಧೈರ್ಯ ಹೇಳಿದ ಗುರುಗಳು, ಈಗ ಪ್ರವೇಶ ಪತ್ರ ಬಂದಿಲ್ಲವೆಂದು ಮೋಸ ಮಾಡಿದರು. ದಯವಿಟ್ಟು ಪೂರಕ ಪರೀಕ್ಷೆಯಲ್ಲಾದರೂ ಅವಕಾಶ ಕೊಡಿ ಎಂದು ಅಪಾರ ಜಿಲ್ಲಾಧಿಕಾರಿ ಹಾಗೂ ಡಿಡಿಪಿಐ ಅಧಿಕಾರಿಗಳಿಗೆ ಪರೀಕ್ಷೆ ವಂಚಿತ ವಿದ್ಯಾರ್ಥಿ ಅಭಿಷೇಕ್ ಜರಮಲ್ಲ ಹಾಗೂ ಪೋಷಕರು ಅಂಗಲಾಚಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿದ್ಯಾರ್ಥಿ ತಾಯಿ ಮಲ್ಲಮ್ಮ ಮಾತನಾಡಿ, ಹುಷಾರಿಲ್ಲದ ಕಾರಣ ನನ್ನ ಮಗ ಶಾಲೆಗೆ ಬಂದಿಲ್ಲ. ಆದರೆ, ಬಹಳಷ್ಟು ಅಭ್ಯಾಸ ಮಾಡುತ್ತಾನೆ. ನಾವು ಯಾವಾಗಲೂ ಕೇಳಿದಾಗ ಹಾಲ್ ಟಿಕೆಟ್ ಬರುತ್ತೆ ಅಂತಾ ಸುಳ್ಳು ಹೇಳಿ ಮೋಸ ಮಾಡಿದರು. ಎಸ್.ಡಿ.ಎಮ್.ಸಿ ಅಧ್ಯಕ್ಷ ಹಾಗೂ ಸದಸ್ಯರುಗಳು ಕೂಡಾ ಅನೇಕ ಬಾರಿ ಹೇಳಿದರು ಯಾವುದೇ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ವಂಚನೆ ಮಾಡಬೇಡಿ ಎಂದಿದ್ದರು . ಆದರೂ, ನನ್ನ ಮಗನಿಗೆ ಅನ್ಯಾಯವಾಗಿದೆ ಎಂದು ಕಣ್ಣೀರಿಟ್ಟರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್ ಮಾತನಾಡಿ, ಪರೀಕ್ಷೆಯ ಕೊನೆಯ ಹಂತದಲ್ಲಿ ಪ್ರವೇಶ ಪತ್ರ ಬಂದಿಲ್ಲವೆಂದು ವಿದ್ಯಾರ್ಥಿಗೆ ಮೋಸ ವಂಚನೆ ಮಾಡಿದ ಮುಖ್ಯೋಪಾಧ್ಯಾಯರ ನಡೆ ಖಂಡನೀಯ. ಜೂನ್ ತಿಂಗಳಿಂದ ಡಿಸೆಂಬರ್ ತನಕ ಕೇವಲ ಶೇ.52 ಹಾಜರಾತಿ ಹೊಂದಿದ್ದಾರೆ ಎಂಬ ನೆಪದಿಂದ ಒಂದು ವರ್ಷದ ವಿದ್ಯಾವಂತ ವಿದ್ಯಾರ್ಥಿಯ ಭವಿಷ್ಯ ಹಾಳಾಗಿದೆ‌ ಎಂದರು.

ಸರ್ಕಾರದ ಆದೇಶದ ಪ್ರಕಾರ, ವಿದ್ಯಾರ್ಥಿ ಹಾಜರಾತಿ ಕಡಿಮೆ ಇದೆ ಎಂದು ಪಾಲಕರಿಗೆ ತಿಳಿಹೇಳಿ ನೋಟಿಸ್ ನೀಡಬಹುದಿತ್ತು. ಮುಖ್ಯೋಪಾಧ್ಯಾಯರ ಸಂಪೂರ್ಣ ಕರ್ತವ್ಯ ನಿರ್ಲಕ್ಷ್ಯದಿಂದಾಗಿ ಪ್ರವೇಶ ಪತ್ರ ಬಂದಿಲ್ಲದಿರುವುದು ಸ್ಪಷ್ಟವಾಗಿದೆ. ಜನವರಿ ತಿಂಗಳಿಂದ ಸಾವಿರಾರು ಮಕ್ಕಳಿಗೆ ಧೈರ್ಯ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಿದ ಶಿಕ್ಷಣಾಧಿಕಾರಿ, ಕನಿಷ್ಠ ಪಕ್ಷ ಪರೀಕ್ಷೆ ವಂಚಿತ ವಿದ್ಯಾರ್ಥಿಗಳ ಬಗ್ಗೆ ಗಮನ ನೀಡದಿರುವುದು ಸರಿಯಲ್ಲ ಎಂದರು.

“ಪೂರಕ ಪರೀಕ್ಷೆಯಲ್ಲಾದರೂ ಅವಕಾಶ ಕಲ್ಪಿಸಿಕೊಡಬೇಕು ಹಾಗೂ ವಿದ್ಯಾರ್ಥಿ ಭವಿಷ್ಯದ ಜೊತೆಗೆ ಚೆಲ್ಲಾಟವಾಡಿ ಪರೀಕ್ಷೆ ಎರಡು ದಿನಗಳ ಬಾಕಿ ಇದ್ದಾಗ ಪ್ರವೇಶ ಪತ್ರ ಬಂದಿಲ್ಲವೆಂದು ಮೋಸವೆಸಗಿದ ಮುಖ್ಯೋಪಾಧ್ಯಾಯ ರುದ್ರಪ್ಪ ಬಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಕೂಡಲೇ ಅವರನ್ನು ಅಮಾನತು ಮಾಡಬೇಕು ಹಾಗೂ ನೀಡಿದ ಭರವಸೆ ಹುಸಿಯಾದರೆ ತೀವ್ರವಾದ ಹೋರಾಟ ಮಾಡಲಾಗುವುದು” ಎಂದು ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ತಿಳಿಸಿದರು.

ಮನವಿ ಪತ್ರ ಸ್ವೀಕರಿಸಿದ ಅಪಾರ ಜಿಲ್ಲಾಧಿಕಾರಿ ವೀರಮಲ್ಲಪ್ಪ ಹಾಗೂ ಡಿಡಿಪಿಐ ಸುರೇಶ್ ಹುಗ್ಗಿ, ಮುಖ್ಯೋಪಾಧ್ಯಾಯರ ನಿರ್ಲಕ್ಷ್ಯ ಇದ್ದರೆ ಅವರ ಮೇಲೆ ಶಿಸ್ತು ಕ್ರಮ ಜರುಗಿಸುತ್ತೇವೆ ಹಾಗೂ ಪೂರಕ ಪರೀಕ್ಷೆಯಲ್ಲಿ ಖಂಡಿತವಾಗಿ ಅವಕಾಶ ಕಲ್ಪಿಸುವ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ, ಜೂನ್ 4ರಂದು ಬೆಂಗಳೂರು ಪೊಲೀಸ್...

ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್ ರಜಾದಿನಗಳ...

ಬೆಂಗಳೂರು | ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್‌ ಕೆಜಿಗೆ ₹220

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು...

ಬೇಸಿಗೆ ವಿಶೇಷ | ಬೆಂಗಳೂರು-ಕಲಬುರಗಿ ಎಕ್ಸ್ ಪ್ರೆಸ್ ರೈಲು ರದ್ದು

ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿನ ಕಾರ್ಯಾಚರಣೆ ನಿರ್ಬಂಧಗಳ ಕಾರಣದಿಂದಾಗಿ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ...