ಹಾವೇರಿ | ಬೇಂದ್ರೆಯವರ ಮನೆಯ ಮಾತು ಮರಾಠಿಯಾದರೂ, ಮನದ ಮಾತು ಕನ್ನಡ: ಮಲ್ಲಪ್ಪ ಕರೆಣ್ಣನವರ

Date:

ಬೇಂದ್ರೆ ಅವರ ಮನೆಯ ಮಾತು ಮರಾಠಿಯಾದರೂ ಮನದ ಮಾತು ಕನ್ನಡವಾಗಿತ್ತು. ಇಂಗ್ಲೀಷ್, ಸಂಸ್ಕೃತ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದರು. ರಾಮಾಯಣ, ಮಹಾಭಾರತ, ಬಸವಾದಿ ಶರಣರ ಚಿಂತನೆ, ದಾಸ ಸಾಹಿತ್ಯ, ತತ್ವಶಾಸ್ತ್ರ, ಖಗೋಳ ಉಪನಿಷತ್ತು ಎಲ್ಲ ಬಲ್ಲವರಾಗಿದ್ದರು. ಬದುಕಿನ ಭವಣೆಗಳನ್ನು ಸಮಚಿತ್ತದಿಂದ ಸ್ವೀಕರಿಸಿ ಬಂದ ಕಷ್ಟಗಳನ್ನು ಮೆಟ್ಟಿ ನಿಂತು ಪಾಡನ್ನೇ ಹಾಡನ್ನಾಗಿಸಿ ನಾಡಿಗೆ ಗಟ್ಟಿ ಸಾಹಿತ್ಯವನ್ನು ಕೊಟ್ಟರು ಎಂದು ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಸಾಹಿತಿ ಮಲ್ಲಪ್ಪ ಕರೆಣ್ಣನವರ ಹೇಳಿದರು.

- Advertisement -

ತಾಲೂಕಿನ ಬಿಸಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾವೇರಿ ಜಿಲ್ಲಾ ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ಏರ್ಪಡಿಸಿದ್ದ ವರಕವಿ ದ.ರಾ.ಬೇಂದ್ರೆ ಅವರ ಬದುಕು ಬರಹ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬೆಂಡರೆಯವರು ಬದುಕಿನುದ್ದಕ್ಕೂ ನಿರುದ್ಯೋಗ ಬಡತನಗಳೊಡನೆ ಹೋರಾಟ ನಡೆಸಿದ ಕವಿ. ಬೇಂದ್ರೆ ಜೀವನದಲ್ಲಿ ಎಂದೂ ದೃತಿಗೆಡಲಿಲ್ಲ. ಪ್ರಕೃತಿ, ಸಮಾಜ, ಸಾವು, ನೋವು, ಪ್ರೀತಿ ಅವರ ಕಾವ್ಯದ ಪ್ರಮುಖ ವಸ್ತುಗಳಾಗಿವೆ. ನಮ್ಮ ನೆಲದ ಸತ್ವಹೀರಿ ಸಾಹಿತ್ಯ ಕಟ್ಟಿ ನಾಡಿಗೆ ಗರಿಮೆ ತಂದುಕೊಟ್ಟಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ರಾಣೆಬೆನ್ನೂರಿನ ಮಾತೋಶ್ರೀ ಮಹದೇವಕ್ಕ ಮಂಗಳವಾದ್ಯ ಮತ್ತು ಸಂಗೀತ ತರಬೇತಿ ಸಂಸ್ಥೆಯ ಅಧ್ಯಕ್ಷ ಬಸವರಾಜ್ ಸಾವಕ್ಕನವರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬೇಂದ್ರೆಯವರು ಕನ್ನಡ ನಾಡು-ನುಡಿ ಜನಪದ ಸಂಸ್ಕೃತಿ ಸಾಮಾಜಿಕ ಶೋಷಣೆ ಪ್ರಕೃತಿ ಪರಿಸರ ಸಾಮಾಜಿಕ ಸಂಘರ್ಷ ಧಾರವಾಡದ ನೆಲ ಇವುಗಳ ಕುರಿತಾಗಿ ಸಾಹಿತ್ಯ ರಚಿಸಿದ್ದಾರೆ. ಜನಸಾಮಾನ್ಯರ ಆಡು ಬಾಷೆಯಲ್ಲಿ ದೇಶಿಯ ಸಾಹಿತ್ಯ ರಚಿಸಿದ ನಮ್ಮ ನೆಲದ ಹೆಮ್ಮೆಯ ಕವಿ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಿಸಲಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜೀವರಾಜ ಛತ್ರದ ಮಾತನಾಡಿ, ಬೇಂದ್ರೆಯವರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟ ಕೃತಿಯು ನಾಕುತಂತಿ, ಅದರಲ್ಲಿ ನಾನು, ನೀನು, ಆನು, ತಾನು ಎಂಬ ಚತುರ್ಮುಖ ದರ್ಶನಗಳು ನಾಕುತಂತಿ ಕವಿತೆಯ ಆಶಯವಾಗಿದೆ. ತಮ್ಮ ಬದುಕಿನ ದುಃಖಗಳನ್ನೊಳಗೊಂಡು ಮನಸ್ಸು ಪ್ರಫುಲ್ಲವಾದಾಗೆಲ್ಲ ಲೋಕದ ಎಲ್ಲಾ ಸಂಗತಿಗಳನ್ನು ಕಾವ್ಯದಲ್ಲಿ ಹಿಡಿದಿಡಬೇಕೆಂಬ ದೀಕ್ಷೇ ತೊಟ್ಟವರು ಬೇಂದ್ರೆ. ಮೂವತ್ತೇಳು ಕವನ ಸಂಕಲನಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿ ಕಾವ್ಯವನ್ನೇ ಉಸಿರಾಡಿದ ಅಪರೂಪದ ಕವಿ ಎಂದರು.

ಚಕೋರ ಸಾಹಿತ್ಯ ವಿಚಾರ ವೇದಿಕೆ ಜಿಲ್ಲಾ ಸಂಚಾಲಕ ಮಾರುತಿ ತಳವಾರ  ಪ್ರಾಸ್ತಾವಿಕವಾಗಿ ಮಾತನಾಡಿದರು. ಸೌಭಾಗ್ಯ ಕೊಣತಿ, ಹನುಮಂತ ಬೋವಿ ಶ್ರೀಧರ ಹಣಿಗಿ,ಶಂಕರ ಲಮಾಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ನಾಗರಾಜ ಎಲಿಗಾರ ನಿರೂಪಿಸಿದರು. ಸಂಗೀತ ಶಿಕ್ಷಕ ಪ್ರಕಾಶ ಕೊರಮರ ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು ಶಿಕ್ಷಕ ಮಾಲತೇಶ ಕೋರಚರ ಸ್ವಾಗತಿಸಿದರು. ಪ್ರಕಾಶ ಕೆ ವಂದಿಸಿದರು.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...