ಹಾವೇರಿ | ಆನಂದಸ್ವಾಮಿ ಗಡ್ಡದೇವರಮಠ ಹಾವೇರಿ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ

Date:

Advertisements

ಹಾವೇರಿ ಲೋಕಸಭಾ ಕ್ಷೇತ್ರದಿಂದ ಆನಂದ ಗಡ್ಡದೇವರಮಠ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಹೆಸರನ್ನು ಘೋಷಣೆ ಮಾಡಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಬೆಳೆದವರು. ರಾಣೆಬೆನ್ನೂರಿನ ಮೊಮ್ಮಗ. ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಗಡ್ಡಯ್ಯ ಎಸ್. ಗಡ್ಡದೇವರಮಠ ಅವರ ಪುತ್ರ ಆನಂದಸ್ವಾಮಿ ಗಡ್ಡದೇವರಮಠ. ತಂದೆ ಜಿ.ಎಸ್. ಗಡ್ಡದೇವರಮಠ ಅವರು ಹಾವೇರಿ, ಗದಗ ಕ್ಷೇತ್ರಗಳ ಜನರ ಜೊತೆ ಸಾಕಷ್ಟು ಒಡನಾಟ ಹೊಂದಿದ್ದಾರೆ.

ಈ ಒಡನಾಟ ಆನಂದಸ್ವಾಮಿ ಗಡ್ಡದೇವರಮಠ ಅವರಿಗೂ ಕೂಡ ಇದೆ. ಇವರು ಬಿಎಸ್ಸಿ ಪದವೀಧರರು. ರಾಜಕೀಯ ಕುಟುಂಬದ ಹಿನ್ನೆಲೆ ಹೊಂದಿರುವ ಆನಂದಸ್ವಾಮಿ ಗಡ್ಡದೇವರಮಠ, ವಿದ್ಯಾರ್ಥಿ ಜೀವನದಲ್ಲಿಯೇ ರಾಜಕೀಯದಲ್ಲಿ ಆಸಕ್ತಿಯನ್ನು ಹೊಂದಿದ್ದರು. ಇವರು ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿದ್ದರು. 2008ರಲ್ಲಿ ರಾಜ್ಯ ಯುವ ಕಾಂಗ್ರೆಸ್ನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಸಂಕ್ರೀಯವಾಗಿ ತೊಡಗಿಸಿಕೊಂಡಿದ್ದರು. 2011ರಲ್ಲಿ ವಿಧಾನ ಪರಿಷತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಆನಂದಸ್ವಾಮಿ ಗಡ್ಡದೇವರಮಠ ಅವರು 2013ರಲ್ಲಿ ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯಬೇಕೆಂದಿದ್ದರು. ಆದರೆ, ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಟೀಕೆಟ್ ಸಿಕ್ಕಿದರಿಂದ ಆನಂದಸ್ವಾಮಿ ಗಡ್ಡದೇವರಮಠ ಅವರು ಬಂಡೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು, 17,670 ಮತಗಳನ್ನು ಗಳಿಸಿದ್ದರು. ಈ ಮೂಲಕ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದರು. ಈ ಮೂಲಕ ಬೆಳಗಾವಿಯಲ್ಲಿ ತಮ್ಮದೇ ಅಭಿಮಾನಿ ಬಳಗ ಹೊಂದಿದ್ದಾರೆ. ನಂತರ 2019 ರಿಂದ 2023ರ ವರೆಗೆ ನಡೆದ ಎಲ್ಲಾ ಚುನಾವಣೆಗಳಲ್ಲಿ ಸಕ್ರೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯೋನ್ಮುಕರಾಗಿದ್ದರು.

Advertisements

ಈ ಸಂದರ್ಭದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಿದೆ. ಹಾವೇರಿ- ಗದಗ ಎರಡು ಕ್ಷೇತ್ರಗಳಲ್ಲಿ ಓಡಾಟ ನಡೆಸಿ ಜನರ ಸಂಪರ್ಕ ಬೆಳಿಸಿಕೊಂಡು ಬಂದಿದ್ದಾರೆ.

ಆನಂದಸ್ವಾಮಿ ಗಡ್ಡದೇವರಮಠ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನ ಕೆಲಸವನ್ನು ಗುರುತಿಸಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮೊದಲ ಪಟ್ಟಿಯಲ್ಲಿ ಗುರುತಿಸಿ ಘೋಷಣೆ ಮಾಡಿದ್ದು ಖುಷಿ ತಂದಿದೆ, ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X