ಸೌಲಭ್ಯಗಳನ್ನು ಹೆಚ್ಚಿಸುವುದು, ಕೆಲಸದ ಹೊರೆ ಕಡಿಮೆ ಮಾಡುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ 2ನೇ ಹಂತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿರುವ ಗ್ರಾಮ ಲೆಕ್ಕಾಧಿಕಾರಿಗಳು ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಶಾಸಕ ಶ್ರೀನಿವಾಸ ಮಾನೆ ಮನವಿ ಸಲ್ಲಿಸಿ, ಬೇಡಿಕೆಗಳ ಕುರಿತು ಗಮನ ಸೆಳೆದರು.
ಮನವಿಗೆ ಸ್ಪಂದಿಸಿದ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಹಾನಗಲ್ ತಾಲೂಕಿನಲ್ಲಿ ಈಗಾಗಲೇ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ. ರಾಜ್ಯದ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳಿಗೂ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ. ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಖಂಡಿತವಾಗಿಯೂ ಈಡೇರಿಸಲಿದೆ. ಇನ್ನುಳಿದ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದ್ದು, ಪ್ರತಿಭಟನೆ ವಾಪಸ್ ಪಡೆದು ಕೆಲಸಕ್ಕೆ ಹಾಜರಾಗುವಂತೆ ಹೇಳಿದರು.
ಈ ಸುದ್ದಿ ಓದಿದ್ದೀರಾ? ಮಂಗಳೂರು | ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಕೃಷಿ ಯೋಗ್ಯವಾದ ಭೂಮಿ ಖಾಸಗಿ ವ್ಯಕ್ತಿಗಳ ಕೈಗೆ ?
ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ತಾಲೂಕಾಧ್ಯಕ್ಷ ಎಂ.ಎಸ್. ಜಮಾದಾರ, ಉಪಾಧ್ಯಕ್ಷರಾದ ನಾಗರಾಜ ರೆಡ್ಡಿ, ಶಿಲ್ಪಾ ಮಡಿವಾಳರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರ, ತಾಲೂಕಾ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಬಸವರಾಜ ಕುಂಚೂರ, ಮಂಜುಳಾ ತಳವಾರ, ಶಿವಾನಂದ ಕೊಟಗಿ, ಎಚ್ಚರೇಶ ಹಿರೇಸಕ್ಕರಗೌಡ್ರ, ಜಯಭೀಮ್ ಕಾಂಬಳೆ ಇದ್ದರು.
