ಹಾವೇರಿ | ಸಮೀಕ್ಷೆ ವೇಳೆ ಮಾದಾರ, ಮಾದಿಗ ಎಂದು ನಮೂದಿಸಲು ಸಮುದಾಯಕ್ಕೆ ಮನವಿ

Date:

ಪರಿಶಿಷ್ಟ ಜಾತಿಗಳ ಎಲ್ಲಾ ಕುಟುಂಬಗಳ ನಿಖರ ಮಾಹಿತಿಗಾಗಿ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಲು ಮುಂದಾಗುತ್ತಿದ್ದು, ಅಧಿಕಾರಿಗಳು ಸಮೀಕ್ಷೆಗೆ ಬಂದಾಗ ಮಾದಿಗ ಅಥವಾ ಮಾದರ ಎಂದು ನಮೂದಿಸಬೇಕು ಎಂದು ಮಾದಿಗರ ಸಮಾಜದ ಮುಖಂಡ ಉಡಚಪ್ಪ ಮಾಳಗಿ ಹೇಳಿದರು.

- Advertisement -

ಜಿಲ್ಲಾ ಪ್ರವಾಸಿ ಮಂದಿರದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯ ಕುರಿತು ಕರೆಯಲಾದ ಜಿಲ್ಲಾ ಮಟ್ಟದ ಮಾದಿಗ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಒಳಮೀಸಲಾತಿ ಸಮೀಕ್ಷೆ ಏ.6 ರಿಂದ ಪ್ರಾರಂಭವಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಸಮೀಕ್ಷೆಯ ಅಧಿಕಾರಿಗಳು ಆಗಮಿಸಿದಾಗ ಪರಿಶಿಷ್ಟ ಜಾತಿಗಳ ಸಮೀಕ್ಷೆಗೆ ಸಹಕಾರ ನೀಡುವ ಕೆಲಸವಾಗಬೇಕು. ಪರಿಶಿಷ್ಟ ಜಾತಿಯ ಆದಿ ಜಾಂಬವ, ಆದಿ ಡ್ರಾವಿಡ, ಎಸ್‌ಸಿ, ಆದಿ ಕರ್ನಾಟಕ ಹಾಗೂ ಹರಿಜನ ಪದಗಳನ್ನು ಬರೆಸಿರುವ ಮಾದಿಗ ಹಾಗೂ ಮಾದರ ಸಮುದಾಯದವರು ಜಾತಿ ಕಾಲಂನಲ್ಲಿ ಮಾದಿಗ ಅಥವಾ ಮಾದರ ಎಂದು ಬರೆಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಬೇರೆ ಪದಗಳನ್ನು ಬಳಸಿ ನಮಗೆ ಸಿಗಬಹುದಾಗ ಸೌಲಭ್ಯಗಳನ್ನು ಪಡೆಯುವ ಪ್ರಸಂಗಗಳು ಕಂಡು ಬರುತ್ತಿದೆ. ನಮ್ಮ ಸಮುದಾಯ ಸರ್ಕಾರಗಳ ಸೌಲಭ್ಯ ಪಡೆದು ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಬೇಕಾಗಿದೆ. ಸಮೀಕ್ಷೆ ಸಮಯದಲ್ಲಿ ಜಾಗೃತಿವಹಿಸುವುದು ಅಗತ್ಯವಾಗಿದ್ದು, ಏನಾದರೂ ತಮಗೆ ಹೆಚ್ಚಿನ ಮಾಹಿತಿ ಬೇಕಾದರೆ ಮಾದಿಗ ಸಮುದಾಯದ ಮುಖಂಡರುಗಳನ್ನು ಸಂಪರ್ಕಿಸಿ” ಎಂದು ತಿಳಿಸಿದರು.

ಇದನ್ನೂ ಓದಿ: ಹಾವೇರಿ | ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕೊಳೆತ ಆಹಾರ ಪೂರೈಕೆ: ಎಸ್ಎಫ್ಐ ಆರೋಪ

ಸಭೆಯಲ್ಲಿ ಸಮುದಾಯದ ಮುಖಂಡ ಬಸವರಾಜ ಹೆಡಿಗೊಂಡ, ಎಸ್ ಜಿ ಹೊನ್ನಪ್ಪನವರ, ಏಳಕೊಟೆಪ್ಪ ಎಸ್ ಪಾಟೀಲ, ಅಶೋಕ ಮರೆಯಣ್ಣನವರ, ಸಂಜಯಗಾಂಧಿ ಸಂಜೀವಣ್ಣನವರ, ಮಾರುತಿ ಸೊಟ್ಟಪ್ಪನವರ, ಸುರೇಶ ಅಳ್ಳಳ್ಳಿ, ಭೀಮಣ್ಣ ಯಲ್ಲಾಪುರ, ಶಿವಣ್ಣ ನಾಗಮ್ಮನವರ, ಮಂಜು ವಡ್ಡರ, ಯಲ್ಲಪ್ಪ ಅಂದಲಗಿ, ನಾಗರಾಜ ಮಾಳಮ್ಮನವರ, ಹನಮಂತ ಹಲಗೇರಿ, ಮಂಜು ದಿಡಗೂರ, ಗುಡ್ಡಪ್ಪ ಬಣಕಾರ, ಸುನೀಲ ಕಡೂರ, ನೀಲಪ್ಪ ದೇವರಮನಿ, ನಿಂಗಪ್ಪ ಹರಿಜನ, ಫಕ್ಕಿರೇಶ ಪುರದ, ಮಾರುತಿ ಬಣಕಾರ, ಗುತ್ತೆಪ್ಪ ಆಲದಕಟ್ಟಿ, ನವೀನ ಸಿದ್ದಣ್ಣನವರ, ಜಗದೀಶ ಹರಿಜನ, ನಾಗರಾಜ ಬಣಕಾರ ಸೇರಿದಂತೆ ಮಾದಿಗರ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...