“ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ” ಎಂದು ಹಾವೇರಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಯು ಸಾಮಾಜಿಕ ಕ್ಷೇತ್ರದಲ್ಲಿ ಮುಖ್ಯವಾಗಿ ಪರಿಶಿಷ್ಟ ವರ್ಗದ ಜನರಿಗೆ ಸೇವೆ ಸಲ್ಲಿಸಿರಬೇಕು. ಪರಿಶಿಷ್ಟ ಪಂಗಡದವರು ಎದುರಿಸುತ್ತಿರುವ ಅಸ್ಪೃಶ್ಯತೆ ಹಾಗೂ ಆದರ್ಶಗಳನ್ನು ಸಾಕಾರಗೊಳಿಸುವಂತಹ ಯಾವುದೇ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿರಬೇಕು ಹಾಗೂ 35 ವರ್ಷಗಳಾಗಿರಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು.
ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಇವುಗಳ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಾಮರಸ್ಯ ವಾತಾವರಣ ಮೂಡಿಸುವ ಅಥವಾ ಅಂತಹ ದೌರ್ಜನ್ಯ ನಿಯಂತ್ರಿಸಲು ಸಹಕಾರಿಯಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶ್ರಮಿಸುವ ವ್ಯಕ್ತಿಯಾಗಿರಬೇಕು.
ಈ ಸುದ್ದಿ ಓದಿದ್ದೀರಾ? ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು. ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 10-09-2025ರೊಳಗಾಗಿ ಖುದ್ದಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ. ಸಿ ಬ್ಲಾಕ್ ರೂಂ.ನಂ.38. ದೇವಗಿರಿ. (ದೂ.08375-249022) ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.