ಹಾವೇರಿ | ಗುತ್ತಿಗೆ ಆಧಾರದಲ್ಲಿ ಪ್ರಾಂಶುಪಾಲರ ನೇಮಕ; ಖಾಯಂ ನೇಮಕಾತಿಗೆ ಡಿವೈಎಫ್ಐ ಆಗ್ರಹ

Date:

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ 310 ಪ್ರಾಂಶುಪಾಲರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಪ್ರಾಂಶುಪಾಲರ ನೇಮಕ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದಾರೆ.

- Advertisement -

ಹಾವೇರಿ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, “ಪ್ರಾಂಶುಪಾಲರ ನೇರ‌ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆಯ ಮೂಲಕ, ಸರ್ಕಾರ ಐದು ವರ್ಷಗಳ ಅವಧಿಗೆ ಮಾತ್ರ ಗುತ್ತಿಗೆಯಾಧಾರದಲ್ಲಿ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದ 434 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 400 ಪ್ರಾಂಶುಪಾಲ ಹುದ್ದೆಗಳ ಪೈಕಿ 310 ಸ್ಥಾನಗಳಿಗೆ ಗುತ್ತಿಗೆ ಪದ್ಧತಿಯಡಿ ನೇಮಕ ಮಾಡಲು ಹೊರಟಿದೆ. ಗುತ್ತಿಗೆ ಪದ್ಧತಿ ಬದಲಿಸಿ ಖಾಲಿಯಿರುವ 400 ಪ್ರಾಂಶುಪಾಲರ ಹುದ್ದೆಗಳಿಗೆ ಖಾಯಂ ಆಗಿ ನೇಮಕಾತಿ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕೇವಲ ಐದು ವರ್ಷಗಳ ಅವಧಿಗೆ ಆಯ್ಕೆ ಮಾಡಿಕೊಳ್ಳುವ ಸರ್ಕಾರ, ಈ ಅವಧಿ ನಂತರ ಅವರನ್ನು ಸೇವೆಯಿಂದ ಬಿಡುಗಡೆಗೊಳಿಸಿದರೆ ಅತಂತ್ರರಾಗುವ ಅವರು ಏನು ಕೆಲಸ ಮಾಡಬೇಕು? ಇದರಲ್ಲಿ ಸರ್ಕಾರಕ್ಕೆ ಹೊಣೆಗಾರಿಕೆ ಇಲ್ಲವೇ? ಶಿಕ್ಷಣ ಕ್ಷೇತ್ರದಲ್ಲಿ ಈ ರೀತಿ ಬಳಸಿ ಬಿಸಾಡುವ ಜೀತಪದ್ಧತಿ ಸ್ವರೂಪದ ಕೆಲಸವನ್ನು ರಾಜ್ಯ ಸರ್ಕಾರ ಕೂಡಲೇ ರದ್ದುಪಡಿಸಬೇಕು”‌ ಎಂದು ಒತ್ತಾಯಿಸಿದರು.

“ಎಂಜನಿಯರಿಂಗ್ ಸೇರಿದಂತೆ ಇತರೆ ಪದವಿ ಕಾಲೇಜುಗಳಲ್ಲಿ ಹದಿನೈದು ವರ್ಷಗಳ ಬೋಧನಾನುಭವ ಹೊಂದಿರುವವರಿಗೆ ನೇಮಕಾತಿಯಲ್ಲಿ ಅವಕಾಶವಿದೆ. ಎಂಜನಿಯರಿಂಗ್ ಕಾಲೇಜು ಮತ್ತು ಇತರ ಕಾಲೇಜುಗಳಲ್ಲಿ ಕೆಲಸ ಮಾಡಿದವರು ಆಯ್ಕೆಯಾದರೆ ಪದವಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಹೇಗೆ ಸಾಧ್ಯ? ತಾತ್ಕಾಲಿಕವಾಗಿ ಶಿಕ್ಷಣ ಕ್ಷೇತ್ರದಲ್ಲಿ ಆಯ್ಕೆ ಮಾಡುವುದರಿಂದ, ಆಯ್ಕೆಯಾದವರಿಗೆ ಸೇವಾ ಭದ್ರತೆ ಖಾತರಿಯೂ ಇಲ್ಲ. ಅಲ್ಲದೆ ವಿದ್ಯಾರ್ಥಿಗಳ ಪಾಠ, ಪ್ರವಚನಕ್ಕೆ ತೊಂದರೆಯಾಗುತ್ತದೆ” ಎಂದು ಹೇಳಿದರು.

ತನಿಖೆಗೆ ಆಗ್ರಹ: “ಸರ್ಕಾರ ನಿಗದಿಗೊಳಿಸಿರುವ ಹದಿನೈದು ವರ್ಷಗಳ ಸೇವಾನುಭವವಿಲ್ಲದವರೂ, ಹಲವು ದುರ್ಮಾರ್ಗದ ಪ್ರಭಾವ ಬಳಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಹದಿನೈದು ವರ್ಷಗಳ ಸೇವಾ ದೃಢೀಕರಣ ಪಡೆದಿರುವ ವದಂತಿಗಳಿವೆ. ಸರ್ಕಾರದ ಉನ್ನತ ಅಧಿಕಾರಿಗಳ ಕುಟುಂಬಸ್ಥರೇ ಇಂತಹ ದುಷ್ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಂಬುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಿ ತಪಿತಸ್ಥರನ್ನು ಕಠಿಣ ಶಿಕ್ಷೆಗೊಳಪಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಜೆಜೆಎಂ ಕಾಮಗಾರಿಯಲ್ಲಿ ಅವ್ಯವಹಾರ; ತನಿಖೆಗೆ ದಸಂಸ ಆಗ್ರಹ

“ಒಟ್ಟಾರೆಯಾಗಿ ಉನ್ನತ ಶಿಕ್ಷಣ, ಪಿಎಚ್‌ಡಿ ಪಡೆದು ಕೆಲಸ ಮಾಡಲು ಸಾಮರ್ಥ್ಯವಿರುವ ಲಕ್ಷಾಂತರ ಜನತೆಗೆ ಅವಕಾಶ ನೀಡಬೇಕು. ಸರ್ಕಾರ ಪರೀಕ್ಷಾ ಪ್ರಾಧಿಕಾರದ ಮೂಲಕ ಐದು ವರ್ಷದ ಅವಧಿಗೆ ಗುತ್ತಿಗೆಯಾಧಾರದಲ್ಲಿ ಪ್ರಾಂಶುಪಾಲರ ನೇಮಕ ಮಾಡಲು ಹೊರಟಿರುವುದನ್ನು ಕೂಡಲೇ ರದ್ದುಪಡಿಸಿ, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಖಾಯಂ ನೇಮಕ ಮಾಡಿಕೊಳ್ಳಲು ಮುಂದಾಗಬೇಕು.‌ ಇಲ್ಲವಾದರೆ ಡಿವೈಎಫ್ಐ ತೀವ್ರವಾದ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ” ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...