ಹಾವೇರಿ | ಸಿಎಂ ಘೋಷಿಸಿದಂತೆ ಕನಿಷ್ಠ ಹತ್ತು ಸಾವಿರ ಗೌರವಧನ ಹೆಚ್ಚಿಸಲು ಆಶಾ ಕಾರ್ಯಕರ್ತರು ಪ್ರತಿಭಟನೆ

Date:

“ಸಿಎಂ ಅವರು ಘೋಷಿಸಿದಂತೆ ಕನಿಷ್ಟ ರೂ.10,000 ಗಳ ಗೌರವಧನ ಮತ್ತು ಬಜೆಟ್‌ನಲ್ಲಿ  ರೂ.1000 ಹೆಚ್ಚಳವನ್ನು ಆದೇಶಗಳನ್ನು ಕೂಡಲೇ ಹೊರಡಿಸಬೇಕು” ಆಶಾ ಕಾರ್ಯಕರ್ತರು ಆಗ್ರಹಿಸಿಸರು.

- Advertisement -

ಹಾವೇರಿ ಪಟ್ಟಣದಲ್ಲಿ ಜಿಲ್ಲಾಡಳಿತ ಕಛೇರಿ ಮುಂಭಾಗದಲ್ಲಿ ಇಂದು ಎಐಯುಟಿಯುಸಿ ಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸುರಿವ ಮಳೆಯಲ್ಲಿಯೇ ಬೃಹತ್ ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಕಳೆದ ಜನವರಿಯಲ್ಲಿ ನಡೆದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟದದಲ್ಲಿ ಸಿಎಂ ಅವರು ಆಶಾ ಸಂಘದ ನಾಯಕರು, ಮಾನ್ ಆರೋಗ್ಯ ಸಚಿವರು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಎಪ್ರಿಲ್ 1ರಿಂದ ಜಾರಿಯಾಗುವಂತೆ ಕನಿಷ್ಟ ರೂ.10,000 ಗಳ ಗೌರವಧನವನ್ನು ನೀಡಲಾಗುವುದು. ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಭತ್ಯೆ ಕೊಡಲಾಗುವುದು ಎಂದು ಹೇಳದ್ದ ಸಿಎಂ ಅವರು ಮಾತು ಉಳಿಸಿಕೊಂಡಿಲ್ಲ” ಎಂದು ಆಗ್ರಹಿಸಿದರು.

“ಈ ವರ್ಷದ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾಗಳಿಗೂ ರೂ.1000 ಹೆಚ್ಚಳ ಮಾಡಲಾಗುವುದು, ಎಂದು ಭರವಸೆ ನೀಡಲಾಗಿತ್ತು. ಈಡೇರಿಸಿಲ್ಲ. ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ರೂ.2000ರಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು” ಎಂದರು.

“ಆಶಾ ಕಾರ್ಯಕರ್ತೆಯರಿಗೆ ಪ್ರತೀ ತಿಂಗಳು ಸರಿಯಾಗಿ ವೇತನ ಆಗುತ್ತಿಲ್ಲ. ಈಗಲೂ 2-3 ತಿಂಗಳ ಪ್ರೋತ್ಸಾಹಧನ ಬಾಕಿ ಇದೆ. ಸುಮಾರು 2000 ಸುಗಮಕಾರರನ್ನು ಕಳೆದ 10 ವರ್ಷಗಳಿಂದ ಕೆಲಸಕ್ಕೆ ಪಡೆದುಕೊಂಡು ದಿಢೀರನೆ ತೆಗೆದು ಹಾಕಿರುವರು. 60 ವರ್ಷ ವಯಸ್ಸಿನ ಆಶಾಗಳನ್ನೂ ಏಕಾಏಕಿ ತೆಗೆದು ನಿವೃತ್ತಿ ಮಾಡಿರುತ್ತಾರೆ. 17 ವರ್ಷದಿಂದ ಸೇವೆ ಮಾಡಿದ ಈ ಆಶಾಗಳಿಗೆ ಯಾವುದೇ ಪರಿಹಾರ ನೀಡದೆ ಬೀದಿಗೆ ತಳ್ಳಿರುವರು. ಇದೀಗ ಎಲ್ಲ ಆಶಾ ಕಾರ್ಯಕರ್ತೆಯರಿಗೆ ಅವರ ಕೆಲಸದ ಮೌಲ್ಯಮಾಪನ ಮಾಡುವುದಾಗಿ ಆದೇಶ ಹೊರಡಿಸಿ ಕೆಲಸದಿಂದಲೇ ತೆಗೆದು ಹಾಕುವ ಬಗ್ಗೆ ಆದೇಶ ಮಾಡಿದ್ದಾರೆ. ಇದನ್ನು ಖಂಡಿಸುತ್ತೇವೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು

“60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳದ ಮಾದರಿಯಲ್ಲಿ ₹ 5 ಲಕ್ಷ ಇಡಿಗಂಟು ನೀಡುವುದಾಗಿಯೂ ಭರವಸೆ ನೀಡಿದ್ದರು. ಬಗ್ಗೆ ನಿರ್ಣಯಿಸುವುದಾಗಿ ಹೇಳಿದ್ದರು. ಈ ಬಗ್ಗೆಯೂ ಯಾವುದೇ ಆದೇಶ ಹೊರಬಿದ್ದಿಲ್ಲ. ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ವೇತನ ಆಗುತ್ತಿಲ್ಲ. 2ರಿಂದ 3 ತಿಂಗಳ ಪ್ರೋತ್ಸಾಹಧನವೂ ಬಾಕಿಯಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅನ್ನಭಾಗ್ಯಕ್ಕೆ 12 ವರ್ಷದ ಸಂಭ್ರಮ; ಜಾರಿ ಮಾಡುವ ಹಮಾಲಿ ಕಾರ್ಮಿಕರಿಗೆ ಅನ್ಯಾಯ

“ಈ ಹಿನ್ನಲೆಯಲ್ಲಿ ನೊಂದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ದೊರಕಿಸಲು ಸಿಎಂ ಅವರೇ ಘೋಷಿಸಿದಂತೆ ಹತ್ತು ಸಾವಿರ ನಿಗದಿಯಾದ ಬಗ್ಗೆ ಸ್ಪಷ್ಟ ಆದೇಶ ನೀಡುವಂತೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಆಶಾಗಳ ಪ್ರತಿರೋಧವನ್ನು ಎದುರಿಸ ಬೇಕಾಗುತ್ತದೆ ಎಂದು ರಾಜ್ಯ ಉಪಾಧ್ಯಕ್ಷ ಗಂಗಾಧರ ಬಡಿಗೇರ, ಜಿಲ್ಲಾಧ್ಯಕ್ಷರಾದ ಜಯಶೀಲಾ ಎಸ್.ಬಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಹಾವೇರಿ ಜಿಲ್ಲೆಯ ಎಲ್ಲ ತಾಲ್ಲೂಕು ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...