ಹಾವೇರಿ | ಧರ್ಮಸ್ಥಳದಲ್ಲಿ ಸ್ವತಂತ್ರ ಪತ್ರಕರ್ತರ ಮೇಲಿನ ಹಲ್ಲೆ ಖಂಡನೀಯ: ಬಸವರಾಜ ಪೂಜಾರ

Date:

“ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣದ ಎಸ್.ಐ.ಟಿ ತನಿಖೆಯ ವರದಿಯನ್ನು ನಡೆಸುತ್ತಿದ ಸ್ವತಂತ್ರ ಪತ್ರಕರ್ತರ ಮೇಲೆ ಗೂಂಡಾ ವರ್ತನೆ ದಾಳಿಯನ್ನು  ಖಂಡನೀಯ” ಎಂದು ಡಿ ವೈ ಎಫ್ ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಹಾವೇರಿ ಪಟ್ಟಣದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ ವತಿಯಿಂದ ಧರ್ಮಸದಲ್ಲಿ ಸ್ವತಂತ್ರ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

“ಧರ್ಮಸ್ಥಳದಲ್ಲಿ ಸ್ವತಂತ್ರ ಪತ್ರಕರ್ತರ ಮೇಲೆ ನಡೆದ ಗೂಂಡಾಗಳ ದಾಳಿಯನ್ನು ಜೀವಪರ ಮನಸುಳ್ಳವರೆಲ್ಲರೂ ತೀವ್ರವಾಗಿ ಖಂಡಿಸುತ್ತೇವೆ. ದಶಕಗಳಿಂದ ನಡೆದ‌ ಅತ್ಯಾಚಾರ, ದೌರ್ಜನ್ಯ , ಕೊಲೆ, ಸುಲಿಗೆಗಳಿಂದ ಜನರು ತತ್ತರಿಸಿ ಹೋಗಿದ್ದಾರೆ. ಸಾಕ್ಷಿದಾರರೊಬ್ಬರ ಹೇಳಿಕೆಯ ಮೇಲೆ  ಉತ್ಕನನ ನಡೆಯುತ್ತಿದೆ. ಸತ್ಯ ಹೊರಬರುವ ಭಯದಿಂದ ಮಾದ್ಯಮದವರ ಮೇಲೆ ಹಲ್ಲೆ   ದೌರ್ಜನ್ಯದಂತಹ ಕೃತ್ಯಗಳಿಗೆ ಮುಂದಾಗಿರುವುದರಲ್ಲಿ ಅನುಮಾನವೇ ಇಲ್ಲ. ಈ ಹಲ್ಲೆಯಲ್ಲಿ ನಾಲ್ವರು ಸ್ವತಂತ್ರ ಪತ್ರಕರ್ತರಿಗೆ ತೀವ್ರ ಗಾಯಗಳಾಗಿವೆ. ಒಬ್ಬ ಪತ್ರಕರ್ತ ಮಾರಣಾಂತಿಕ ದಾಳಿಗೆ ಒಳಗಾಗಿದ್ದಾನೆ. ಇದೊಂದು ಎಲ್ಲರೂ ಖಂಡಿಸಬೇಕಾದ ಘಟನೆಯಾಗಿದೆ” ಎಂದು ಹೇಳಿದರು.

ಮುಂದುವರೆದು “ಅಭಿವ್ಯಕ್ತಿ ಸ್ವಾತಂತ್ರ್ಯ ಮಾತ್ರವಲ್ಲ ಜೀವಹಾನಿಗೆ ಪ್ರಯತ್ನವೆಂದೇ ಹೇಳಬೇಕಾಗಿದೆ. ಇಂತಹ ಸಂದರ್ಭದಲ್ಲಿ ನ್ಯಾಯದ ಪರ, ಅಭಿವ್ಯಕ್ತಿ ಸ್ವಾತಂತ್ರ್ಯದ ಪರ, ಬದುಕುವ ಹಕ್ಕಿನ ಪರ ಮತ್ತು ಅತ್ಯಾಚಾರ, ದೌರ್ಜನ್ಯಕ್ಕೆ ಕೊಲೆಗೆ ಒಳಗಾದವರ ಪರ ನಿಲ್ಲಬೇಕಾದದ್ದು ಮನುಷ್ಯರಾದವರ ಕರ್ತವ್ಯವವಾಗಿದೆ. ರಾಜ್ಯ ಸರಕಾರ ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ‌ಪರಿಗಣಿಸಿ ತಕ್ಷಣವೇ ಕ್ರಮಕ್ಕೆ ಮುಂದಾಗಬೇಕು. ಮಾಧ್ಯಮದ ಮೇಲೆ ಮಾಡಿದ‌ ಹಲ್ಲೆ ಅತ್ಯಂತ ಖಂಡನೀಯವಾಗಿದ್ದು. ಘಟನೆಗೆ ಕಾರಣರಾದವರು ಮತ್ತು ಪ್ರಚೋದನೆ ಮಾಡಿದವರನ್ನುತಕ್ಷಣವೇ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಬೇಕು” ಎಂದು ಒತ್ತಾಯಿಸಿದರು.

ಬಿಎಸ್ಎಸ್ ಮಹಿಳಾ ರಾಜ್ಯಾಧ್ಯಕ್ಷೆ ಮಂಜುಳಾ ಎಸ್ ಅಕ್ಕಿ ಮಾತನಾಡಿ, ಧರ್ಮಸ್ಥಳದ ಪತ್ರಕರ್ತರ ಮೇಲೆ ನಡೆದ ಹಲ್ಲೆ ಖಂಡನೀಯ. ಅದೇ ಊರಿನ ಮಹಿಳೆಯರಿಗೆ ನ್ಯಾಯ ಕೊಡಿಸುವ ಉದ್ದೇಶದಿಂದ ಪತ್ರಕರ್ತರ ವರದಿ ಮಾಡುತ್ತಿದವರ ಮೇಲೆ ಹಲ್ಲೆ ಮಾಡುವುದು ಎಷ್ಟು ಸರಿ ಕೂಡಲೇ ಸರ್ಕಾರಗಳು ಮಧ್ಯೆ ಪ್ರವೇಶ ಮಾಡಬೇಕು” ಎಂದು ಒತ್ತಾಯಿಸಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಧರ್ಮಸ್ಥಳದ ಪದ್ಮಲತಾ‌ ವೇದವಲ್ಲಿ ಸೌಜನ್ಯ ಸೇರಿದಂತೆ ಇತರ ಎಲ್ಲ‌ ನ್ಯಾಯಕ್ಕಾಗಿ‌ ಕಾದಿರುವ ಸಾವುಗಳ ಸಮಗ್ರ ತನಿಖೆಯನ್ನು ಮಾಡಬೇಕು. ದಮನಿತರಿಗಾಗಿ ಮೀಸಲಿಟ್ಟ ಭೂಮಿ ಬಗ್ಗೆ, ಭೂಮಿಗಾಗಿ ಅಮಾಯಕರ ಹತ್ಯೆ, ಅನೇಕರಿಗೆ ಹಿಂಸೆ ಮತ್ತು ಬಹಳಷ್ಟು ಜನರಿಗೆ ಬೆದರಿಸು ಓಡಿಸಿದ ಎಲ್ಲಾ ಪ್ರಕರಣಗಳನ್ನು ಎಸ್.ಐ.ಟಿ ತನಿಖೆ ನಡೆಸಬೇಕು. ಎಸ್.ಐ.ಟಿಯ ಕೆಲಸಗಳಿಗೆ ಅಡ್ಡಿಯಾಗದಂತೆ ಮತ್ತು ಸತ್ಯ ವನ್ನು ಹೊರಗೆ ತೆಗೆಯಲು ಬೇಕಾದ ಎಲ್ಲ ರಕ್ಷಣಾ ವ್ಯವಸ್ಥೆ ಗಳನ್ನು ಮಾಡಬೇಕೆಂದು  ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇವೆ‌” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಪದ್ಮಲತಾ, ವೇದವಲ್ಲಿ, ಸೌಜನ್ಯ ಪ್ರಕರಣಗಳನ್ನು SIT ತನಿಖೆಗೊಳಪಡಿಸಲು ಎ‌ಸ್ಎಫ್ಐ ಒತ್ತಾಯ

ಪ್ರತಿಭಟನೆಯಲ್ಲಿ ಕೆ.ಎಸ್.ಡಿ.ಎಫ್ ಮುಖಂಡರಾದ ತಿಪ್ಪೇಸ್ವಾಮಿ ಹೊಸಮನಿ, ಬಿಎಸ್ಎಸ್ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಎಸ್ಎಫ್ಐ ಮುಖಂಡರಾದ ಹಜರತ್ ಬಿ ಮಾತನಾಡಿದರು. ಮುಖಂಡರಾದ ಸುನೀಲ್ ಕುಮಾರ್ ಎಲ್, ಅರುಣ ಕುಮಾರ ನಾಗವತ್, ಫಕ್ಕರೇಶ್ ಮ್ಯಗಳಮನಿ, ಸುದೀಪ್ ಲಮಾಣಿ, ನವೀನ್ ರಾಥೋಡ್, ಚೇತನ್ ಲಮಾಣಿ ,ಮುತ್ತಪ್ಪ ಲಮಾಣಿ, ವಿಜಯ್ ಎನ್,  ಸಂಜೀವ ಕೆ, ವಿನಾಯಕ್, ಶಿವು  ,ರಾಹುಲ ಲಮಾಣಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...