ಹಾವೇರಿ | ಪೌರ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

Date:

Advertisements

ಬ್ಯಾನರ್ ವಿಚಾರವಾಗಿ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪೀರಪ್ಪ ಶಾಂತವ್ವ ಶಿರಬಾಡಗಿ ದೂರು ನೀಡಿದ್ದು, ದೂರು ನೀಡಿದ್ದು, ಆರೋಪಿಗಳಾದ ಶಾಂತಪ್ಪ ಕೊರವರ, ಅರ್ಜುನ ಕೊರವರ, ಪ್ರಥಮ, ಫಕ್ಕೀರೇಶ ಕೊರವರ, ಮುಕೇಶ್ ಪಟೇಲ್, ಪ್ರಜ್ವಲ್ ಅಡವಿಮಠ ಹಾಗೂ ಗಣೇಶ ಭಜಂತ್ರಿ ಬಂಧಿತ ಆರೋಪಿಗಳು ಬಂಧಿಸಿದ್ದಾರೆ. ಆದರೆ ಪ್ರಕರಣದ ಮೊದಲ ಆರೋಪಿ ಅಕ್ಷತಾಳನ್ನು ಬಂಧಿಸಿಲ್ಲ.

ಆಗಿದ್ದೇನು? ಪತ್ರಿಕಾ ವರದಿ ಪ್ರಕಾರ “ಕೊರವರ ಓಣಿಯ ವೃತ್ತದಲ್ಲಿ ಅಕ್ರಮವಾಗಿ ಆರೋಪಿ ಶಾಂತು ಜನ್ಮದಿನದ ಶುಭಾಷಯ ಕೋರುವ ಬ್ಯಾನರ್ ಹಾಕಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೌರಾಯುಕ್ತ ಗಂಗಾಧರ ಬೆಲ್ಲದ ಅವರು ಬ್ಯಾನರ್ ತೆರವುಗೊಳಿಸಲು ಸಿಬ್ಬಂದಿ ರಂಗಪ್ಪ ಹೆರ್ಕಲ್ ಅವರಿಗೆ ಸೂಚಿಸಿದ್ದರು. ಬ್ಯಾನರ್ ತೆರವುಗೊಳಿಸಲು ರಂಗಪ್ಪ ಅವರು ಸ್ಥಳಕ್ಕೆ ಹೋದಾಗ ಆರೋಪಿ ಕೆ.ಸಿ.ಅಕ್ಷತಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಬಳಿಕ, ರಂಗಪ್ಪ ಸ್ಥಳದಿಂದ ಹೊರಟು ನಗರಸಭೆಗೆ ಬಂದಿದ್ದರು.

Advertisements

ಕ್ರಿಕೆಟ್‌ ಆಟವಾಡುತ್ತಿದ್ದ ಕೆಲ ಆರೋಪಿಗಳು, ಇತರೆ ಆರೋಪಿಗಳ ಜೊತೆ ಸೇರಿ ಬ್ಯಾಟ್‌ಗಳ ಸಮೇತ ನಗರಸಭೆ ಆವರಣಕ್ಕೆ ನುಗ್ಗಿದ್ದರು. ಸ್ಥಳದಲ್ಲಿದ್ದ ಪೌರಕಾರ್ಮಿಕರ ಜೊತೆ ಜಗಳ ತೆಗೆದಿದ್ದರು. ಗುತ್ತಿಗೆ ಪೌರಕಾರ್ಮಿಕರಾದ ಪೀರಪ್ಪ ಹಾಗೂ ಕಾಂತೇಶ್ ಅವರಿಗೆ ಹೊಡೆದು ಜೀವ ಬೆದರಿಕೆ ಹಾಕಿದ್ದರು.

ಪ್ರತಿಭಟನೆ : ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಬಂಧಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಪೌರಕಾರ್ಮಿಕರು ಹಾವೇರಿ ಟೌನ್‌ ಪೊಲೀಸ್ ಠಾಣೆ ಎದುರು ಶನಿವಾರ ಪ್ರತಿಭಟನೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಂಬೇಡ್ಕರ್‌ ಚಿಂತನೆಗೆ ಹೊಸ ವೇದಿಕೆ; ಬುದ್ಧವಿಹಾರದಲ್ಲಿ ಗ್ರಂಥಾಲಯ

ನಗರಸಭೆ ಎದುರು ನಡೆದ ಗಲಾಟೆ ಸಂಬಂಧ ತಮ್ಮ ವಿರುದ್ಧ ದೂರು ನೀಡಿದರೆಂಬ ಕಾರಣಕ್ಕೆ ಪೌರ ಕಾರ್ಮಿಕರ ಮೇಲೆ ಶನಿವಾರ ಪುನಃ ಹಲ್ಲೆ ಮಾಡಲಾಗಿದ್ದು, ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X