ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದ ಪ್ರಿಯದರ್ಶಿನಿ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.
ಹಾವೇರಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಪಿ ಡಿ ಬಸನಗೌಡ್ರ ಅವರ ಸಾಮಾಜಿಕ ಸೇವೆ ಗುರುತಿಸಿ ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಐಎಎಸ್ ಅಧಿಕಾರಿ ಎಸ್ ಎಲ್ ಗಂಗಾಧರಪ್ಪ ಉದ್ಘಾಟಿಸಿದರು.
ವಿದ್ಯಾಸಂಸ್ಥೆಯ ಅಧ್ಯಕ್ಷ ಡಿ ಎಂ ಸಾಲಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಒಕ್ಕೂಟಕ್ಕೆ ಹಾವೇರಿ ವಿವಿ ಕುಲಸಚಿವೆ ವಿಜಯಲಕ್ಷ್ಮಿ ತಿರ್ಲಾಪೂರ ನೆರವೇರಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಮಕ್ಕಳ ದಸರಾ ಕಲಾಥಾನ್‌ಗೆ ಸಚಿವ ಹೆಚ್ ಸಿ ಮಹದೇವಪ್ಪ ಚಾಲನೆ
ವಸಂತ ದ್ಯಾವಕ್ಕಳವರ, ವೀರನಗೌಡ ಪ್ಯಾಟಿಗೌಡ್ರ, ಯು ಎಂ ಸಾಲಿ, ಶಂಭಣ್ಣ ಗೂಳಪ್ಪನವರ, ಅಶೋಕ ಹೆಡಿಯಾಲ, ಹನುಮಂತಪ್ಪ ಹರಗನಹಳ್ಳಿ, ಹೆಚ್ ಹೆಚ್ ಬ್ಯಾಡಗೌಡ್ರ, ಪ್ರಾಚಾರ್ಯ ರಾಘವೇಂದ್ರ ಎ ಜಿ, ಸಾಂಸ್ಕೃತಿಕ ವಿಭಾಗದ ಬಿ ಸಿ ತಿಮ್ಮೇನಹಳ್ಳಿ, ವಿ ಎಸ್ ರೂಳಿ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.