ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕುಸುಮಾ (56) ಮತ್ತು ಕುಮಾರ (34) ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಹಂಸಭಾವಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕೋಮು ಕಾರ್ಯಕರ್ತರಿಗೆ ಬಂದೂಕು ತರಬೇತಿ: ಶ್ರೀರಾಮಸೇನೆಯ 27 ಮಂದಿ ವಿರುದ್ಧ ಎಫ್‌ಐಆರ್
ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.