ಹಾವೇರಿ | ಯುವಜನರ ಉದ್ಯೋಗ ಭರವಸೆ, ಭದ್ರತೆಯ  ಸ್ಪಷ್ಠ ಕಣ್ಣೋಟವಿಲ್ಲದ ಬಜೆಟ್: ಬಸವರಾಜ ಪೂಜಾರ

Date:

“ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ 9ನೇ ಬಜೆಟ್ ಮಂಡಿಸಿದ್ದಾರೆ. ದೇಶದಲ್ಲಿ ಆಳವಾಗಿರುವ ನಿರುದ್ಯೋಗ ಸೇರಿದಂತೆ ಯುವಜನತೆ ಎದುರಿಸುತ್ತಿರುವ ಸಂಕಷ್ಟಗಳನ್ನು ಮರೆಮಾಚುವ ಅಂಕಿ ಸಂಖ್ಯೆ ಮೇಲಾಟದ ಬಜೆಟ್ ಆಗಿದೆ. ಇದರಿಂದ ಉದ್ಯೋಗಕ್ಕಾಗಿ ಹಂಬಲಿಸುತ್ತಿರುವ ಭಾರತದ ಕೋಟ್ಯಂತರ ಯುವಜನರಿಗೆ ಯಾವುದೇ ಉದ್ಯೋಗದ ನೈಜ ಭರವಸೆ ಹಾಗೂ ಭದ್ರತೆ ಮೂಡಿಸುವಲ್ಲಿ ವಿಫಲವಾಗಿದೆ” ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಅಭಿಪ್ರಾಯಪಟ್ಟಿದ್ದಾರೆ.

- Advertisement -

ಹಾವೇರಿ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು “ಔಪಚಾರಿಕ ವಲಯಗಳಲ್ಲಿನ ಉದ್ಯೋಗದ ಅನಿಶ್ಚಿತೆಯು ಲಕ್ಷಾಂತರ ಜನರನ್ನು ಅಸುರಕ್ಷಿತ ಗಿಗ್ ಕೆಲಸಕ್ಕೆ ತಳ್ಳಿದೆ.  ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಕಾನೂನು ಮಾನ್ಯತೆ ನೀಡಿರುವುದನ್ನು ಹೊರತುಪಡಿಸಿ ಬಜೆಟ್ ಅನುದಾನದಲ್ಲಿ ಯಾವುದೇ ಹಂಚಿಕೆಯನ್ನು ಒದಗಿಸುವುದಿಲ್ಲ. ಅಸ್ತಿತ್ವದಲ್ಲಿರುವ ಬದ್ಧತೆಗಳನ್ನು ಗೌರವಿಸಲು ವಿಫಲವಾಗಿದೆ. ಇದೇ ರೀತಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕೋಟ್ಯಾಂತರ ಕಾರ್ಮಿಕರ ಕುರಿತು ಯಾವುದೇ ನಿರ್ದಿಷ್ಟ ಕಲ್ಯಾಣ ಕಾರ್ಯಕ್ರಮ ಹೊಂದಿಲ್ಲದ ಕಾರ್ಮಿಕ ವಿರೋಧಿ ಬಜೆಟ್ ಆಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

“ಈಗಾಗಲೇ ಅಸಮಾನತೆಯ ಸನ್ನಿವೇಶದಲ್ಲಿ ಆರ್ಥಿಕ ಬಿಕ್ಕಟ್ಟಿನ ನಡುವೆ ಬದುಕಲು ಹೆಣಗಾಡುತ್ತಿರುವ ದೇಶದ ಕಾರ್ಮಿಕರಿಗೆ ಯಾವುದೇ ಭದ್ರತೆ ಒದಗಿಸುವಲ್ಲಿ ವಿಫಲವಾಗಿರುವ ಜನವಿರೋಧಿ ಬಜೆಟ್ ಆಗಿದೆ. ಜನ ಸಾಮನ್ಯರ ಹಿತವನ್ನು ರಕ್ಷಿಸಲು ಕನಿಷ್ಠ ಕಾಳಜಿ ಹಾಗೂ ಮುತುವರ್ಜಿಯ ಅಂಶಗಳನ್ನು ಹೊಂದಿರದ ಈ ಬಜೆಟ್‌ನಲ್ಲಿ ಖಾಸಗಿ ಕಾರ್ಪೊರೇಟ್‌ ವರ್ಗಗಳಿಗೆ ಹೆಚ್ಚು ಪ್ರೋತ್ಸಾಹ ಹಂಚಿಕೆಗಳನ್ನು ಮತ್ತಷ್ಟು ವಿಸ್ತರಿಸುವ ಮತ್ತು ಹೆಚ್ಚಿಸುವ ಮೂಲಕ ಬಂಡವಾಳಶಾಹಿ-ಕಾರ್ಪೋರೇಟ್ ಸ್ನೇಹಿ ಬಜೆಟ್ ಆಗಿದೆಯಲ್ಲದೇ ಸಾಮಾನ್ಯ ಜನರ ಹಿತಾಸಕ್ತಿಗೆ ದ್ರೋಹ ಬಗೆದಿದೆ” ಎಂದು ಹೇಳಿದರು.

ಈ ಯುವ ವಿರೋಧಿ, ಕಾರ್ಮಿಕ ವಿರೋಧಿ, ಕಾರ್ಪೊರೇಟ್ ಪರವಾದ ಬಜೆಟ್ ಅನ್ನು ಡಿವೈಎಫ್ಐ  ತಿರಸ್ಕರಿಸುತ್ತದೆ. ಮತ್ತು ಈ ನೀತಿಗಳ ವಿರುದ್ಧ ಒಗ್ಗಟ್ಟಿನ ಪ್ರತಿರೋಧವನ್ನು ತೀವ್ರಗೊಳಿಸಲು ದೇಶದ ಯುವಜನರಿಗೆ ಕರೆ ನೀಡುತ್ತದೆ” ಎಂದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...

ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸದ ಅಧಿಕಾರಿಗಳ ವಿರುದ್ಧ ಅ.2ರಂದು ರೈತರಿಂದ ಮುತ್ತಿಗೆ

ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯ...

ಮುಂಡಗೋಡ | ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸಚಿವರಿಗೆ ಮನವಿ

ಮುಂಡಗೋಡ: ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ...