“ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ” ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ತುಂಗಭದ್ರಾ ನದಿಯಲ್ಲಿ ಬೇಸಿಗೆಯ 3-4 ತಿಂಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತದೆ. ಅದಕ್ಕೆ ವರದಾ-ಬೇಡ್ತಿ ನದಿಯ ಜೋಡಣೆ ಅಗತ್ಯವಿದೆ. ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ಕೊಟ್ಟಿದ್ದು, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಮುಂದಕ್ಕೆ ತೆಗೆದುಕೊಂಡು ಹೋಗಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ
“ನನ್ನ ಈ ಆಗ್ರಹವನ್ನು ರಾಜ್ಯ ಸರ್ಕಾರ ಸಹ ಒಪ್ಪಿದೆ. ಯೋಜನೆ ಜಾರಿಯಾದರೆ ಸುಮಾರು 18 ಟಿಎಂಸಿ ನೀರು ಬರುತ್ತದೆ. ಅದರಿಂದ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಯೋಜನೆ ಜಾರಿಗೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು” ಎಂದರು.