ಹಾವೇರಿ | ಬಸ್ ನಿಲ್ದಾಣಗಳಲ್ಲಿ ಕ್ಯೂಆರ್ ಕೋಡ್ ಮೂಲಕ ಸ್ವಚ್ಛತಾ ಅಭಿಯಾನ

Date:

“ವಾಕರಸಾ ಸಂಸ್ಥೆಯ ಸಾರಿಗೆ ಬಸ್ ನಿಲ್ದಾಣಗಳಲ್ಲಿ ಸಾರಿಗೆ ಸಂಸ್ಥೆ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ‘ನಮ್ಮ ಬಸ್ ನಿಲ್ದಾಣ. ಸ್ವಚ್ಚ ಬಸ್ ನಿಲ್ದಾಣ’ ಎಂಬ ಹೆಸರಿನಲ್ಲಿ ‘ಕ್ಯೂಆರ್ ಕೋಡ್’ ಮೂಲಕ ಸ್ವಚ್ಚತಾ ಅಭಿಯಾನ ಆರಂಭಿಸಲಾಗಿದ್ದು, ಸಾರ್ವಜನಿಕರು ಈ “ಕ್ಯೂ ಆರ್” ಕೋಡ್ ಬಳಸಿ ಬಸ್ ನಿಲ್ದಾಣದ ಸ್ವಚ್ಚತೆ ಬಗ್ಗೆ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಸಂಸ್ಥೆಗೆ ನೀಡಬಹುದಾಗಿದೆ” ಎಂದು ಹಾವೇರಿ ವಿಭಾಗದ ಸಾರಿಗೆ ಅಧಿಕಾರಿ ಅಶೋಕ ಆರ್. ಪಾಟೀಲ್ ಹೇಳಿದರು.

- Advertisement -

ಬುಧವಾರ ಹಾವೇರಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ನಿಲ್ದಾಣದಲ್ಲಿನ ಸಂಸ್ಥೆಯ ಸಿಬ್ಬಂದಿಗಳಿಗೆ ನಿಲ್ದಾಣದ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಲು ತಿಳಿಸಿದರು ಹಾಗೂ ಸಾರ್ವಜನಿಕರಿಗೆ ಬಸ್ ನಿಲ್ದಾಣದ ನಿರ್ವಹಣೆಯ ಕುರಿತು “ಕ್ಯೂಆರ್ ಕೋಡ ಸ್ಕ್ಯಾನ್ ಮೂಲಕ ಅಭಿಪ್ರಾಯ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಆನ್ ಲೈನ್ ಮೂಲಕ ಬಸ್ ನಿಲ್ದಾಣದ ಅಭಿಪ್ರಾಯ ಸಲ್ಲಿಸಬಹುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇಡೀ ಸಾರಿಗೆ ಸಂಸ್ಥೆಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆ ಪ್ರಥಮ ಬಾರಿಗೆ ಇಂತಹ ಪ್ರಯೋಗಕ್ಕೆ ಮುಂದಾಗಿದ್ದು, ಈ ಅಭಿಯಾನದಲ್ಲಿ ಬಸ್ ನಿಲ್ದಾಣಗಳ ಸ್ವಚ್ಚತೆ, ಶೌಚಾಲಯ ನಿರ್ವಹಣೆ, ತ್ಯಾಜ್ಯ, ವಿಲೇವಾರಿ, ಶೌಚಾಲಯದ ದರ ಪಟ್ಟಿ ಅಳವಡಿಕೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಸಂಚಾರ ನಿಯಂತ್ರಕರು ಪ್ರಯಾಣಿಕರೊಂದಿಗೆ ಸೌಜನ್ಯದ ನಡವಳಿಕೆ ಇತ್ಯಾದಿ ಅಂಶಗಳ ಕುರಿತು ಮೌಲ್ಯಮಾಪನ ಮಾಡಲು ಸಾರ್ವಜನಕರಿಗೆ ಅವಕಾಶ ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ

ಅಭಿಪ್ರಾಯ ಹಾಗೂ ಸಲಹೆ ಜತೆಗೆ ಆ ಬಸ್ ನಿಲ್ದಾಣಕ್ಕೆ ರ್ಯಾಂಕ್ ಕೂಡಾ ಕೊಡಬಹುದುದು. ನೀವು ಕೊಡುವ
ರ್ಯಾಂಕ್ ಆಧಾರದ ಮೇಲೆಯೇ ಉತ್ತಮ ರೀತಿಯ ಸ್ವಚ್ಚತೆ ಕಾಪಾಡುವ ಬಸ್ ನಿಲ್ದಾಣಗಳನ್ನು ಹಾಗೂ ಅಲ್ಲಿನ ಸಿಬ್ಬಂದಿಗೆ “ನಮ್ಮ ಬಸ್ ನಿಲ್ದಾಣ ಸ್ವಚ್ಚ ನಿಲ್ದಾಣ” ಎಂಬ ಶಿರ್ಷಿಕೆಯಡಿ ಬಹುಮಾನ. ಪ್ರಶಸ್ತಿಗಳನ್ನು ನೀಡಿ ಪ್ರೊತ್ಸಾಹಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...