ಹಾವೇರಿ | ಸಮುದಾಯ ಆರೋಗ್ಯ ಕೇಂದ್ರ: ಕೆಳ ದರ್ಜೆಗೆ ಇಳಿಸುತ್ತಿರುವುದು ಕರವೇ ಸ್ವಾಭಿಮಾನಿ ಬಳಗ ಖಂಡನೆ

Date:

“ಮಾಸೂರ ಗ್ರಾಮದಲ್ಲಿ ಈ ಹಿಂದೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಈಗ ಸರಕಾರ ಕೆಳ ದರ್ಜೆಗೆ ಇಳಿಸುತ್ತಿರುವುದು ಖಂಡನೀಯ” ಎಂದು ಕರವೇ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದಲ್ಲಿ ಇರುವ ಸಮುದಾಯ ಆರೋಗ್ಯ ಕೇಂದ್ರವನ್ನು ಕೆಳ ದರ್ಜೆಗೆ ಇಳಿಸುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ಮುಖಂಡರು ತಾಲೂಕು ಆರೋಗ್ಯ ಅಧಿಕಾರಿಗಳು ಜಾವೀದ್ ಮಕಾಂದಾರ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಸುತ್ತಮುತ್ತಲಿರುವ ಹಳ್ಳಿಗಳಿಂದ ಮಾಸೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳ ಪಾಲಿಗೆ ವರವಾಗಿತ್ತು. ಆದರೆ ದುರದೃಷ್ಟಕರ ಸಂಗತಿ ಏನೆಂದರೆ ಈಗಿನ ಸರ್ಕಾರ ಸಮುದಾಯ ಆರೋಗ್ಯ ಕೇಂದ್ರವನ್ನು ತೆಗೆದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿ ಕೆಳ ದರ್ಜೆಗೆ ಇಳಿಸುತ್ತಿರುವುದನ್ನು” ಯಲ್ಲಪ್ಪ ಮರಾಠೆ ಅವರು ಖಂಡಿಸಿದರು.

“ಹತ್ತಾರು ಊರಿನಿಂದ ಬರುವ ಹೊರ ರೋಗಿಗಳಿಗೆ ವರವಾಗಿರುವ ಈ ಸರ್ಕಾರಿ ಆಸ್ಪತ್ರೆಯನ್ನು ಕೆಳ ದರ್ಜೆಗೆ ಇಳಿಸಿದರೆ ಇಲ್ಲಿ ಬರುವಂತಹ ಬಡ ರೋಗಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಕೂಡಲೇ ಕೆಳ ದರ್ಜೆಗೆ ಇಳಿಸುವುದನ್ನು ನಿಲ್ಲಿಸಿ. ಈಗ ಯಥಾಸ್ಥಿತಿ ಇರುವ ಸಮುದಾಯ ಆರೋಗ್ಯ ಕೇಂದ್ರವನ್ನು ಮುಂದುವರೆಸಿ. ಇಲ್ಲಿಗೆ ಬರುವ ರೋಗಿಗಳಿಗೆ ಅನುಕೂಲಕರ ಮಾಡಿಕೊಡಬೇಕು. ಕರವೇ ಸ್ವಾಭಿಮಾನಿ ಬಳಗ ತಮ್ಮ ಮುಖಾಂತರ ಸರ್ಕಾರಕ್ಕೆ ಒತ್ತಾಯಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಸಿಎಂಗೆ ಅಲೆಮಾರಿ ಸಮುದಾಯದ ಗುಡಿಸಲು ಕಾಣದಂತೆ ಮರೆ ಮಾಡಿದ ಜಿಲ್ಲಾಡಳಿತ

“ಒಂದು ವೇಳೆ ಸರ್ಕಾರ ಕೆಳ ದರ್ಜೆಗೆ ಇಳಿಸಲು ಮುಂದಾದರೆ ಕರವೇ ಸ್ವಾಭೀಮಾನಿ ಬಳಗ ಅಹೋರಾತ್ರಿ ಪ್ರತಿಭಟನೆ ಮಾಡಲು ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ  ನೀಡಿದರು.

ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಳಗ ಜಿಲ್ಲಾ ಉಪಾಧ್ಯಕ್ಷರು ಯೂಸುಫ್ ಸೈಕಲಗಾರ, ಮಹಿಳಾ ಜಿಲ್ಲಾ ಅಧ್ಯಕ್ಷರು ಗೀತಾ ಲಮಾಣಿ, ಖಾಲಂದರ ಎಳೆದಹಳ್ಳಿ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...