ಹಾವೇರಿ | ದೆಹಲಿ ಕಾರು ಸ್ಫೋಟ ಘಟನೆ ಖಂಡಿಸಿ, ಮಡಿದವರಿಗೆ ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ

Date:

ದೆಹಲಿ ಕೆಂಪು ಕೋಟೆಯ ಬಳಿ ನಡೆದ ಕಾರು ಸ್ಫೋಟ ಘಟನೆಯನ್ನು ಖಂಡಿಸಿ, ಘಟನೆಯಲ್ಲಿ ಮಡಿದವರಿಗೆ ಮೇಣದ ಬತ್ತಿ ಬೆಳಗಿ ಮಂಗಳವಾರ ಸಂಜೆ ಹಾವೇರಿಯ ಗಾಂಧಿ ವೃತ್ತದಲ್ಲಿ ಎಸ್ಎಫ್ಐ, ಡಿವೈಎಫ್ಐ, ಸಾಹಿತಿ ಕಲಾವಿದರ ಬಳಗ, ಸಮಾನಮನಸ್ಕರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

- Advertisement -

ಹಿರಿಯ ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ “ಕೆಂಪುಕೋಟೆ ಬಳಿ ರಕ್ತಹರಿಸಿದ ದುಷ್ಕರ್ಮಿಗಳ ಕುಕೃತ್ಯವನ್ನ ತೀವ್ರವಾಗಿ ಖಂಡಿಸುತ್ತೇವೆ. ಅಮಯಾಕರ ಜೀವ ಬಲಿ ಪಡೆದ ಪಾಪಿಗಳ ಕೃತ್ಯಕ್ಕೆ ತಕ್ಕಶಾಸ್ತಿ ಮಾಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಘಟನೆಯಲ್ಲಿ ಗಾಯಗೊಂಡಿರುವ ಜೀವಗಳು ಆದಷ್ಟು ಬೇಗ ಚೇತರಿಸಿಕೊಳ್ಳುವಂತೆ ಆಗಲಿ. ಈ ರೀತಿಯ ಕೃತ್ಯಗಳು ಮರುಕಳಿಸದಂತೆ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪದೇ ಪದೇ ಈ ರೀತಿಯ ಘಟನೆಗಳಲ್ಲಿ ಅಮಾಯಕರು ಜೀವಕಳೆದುಕೊಳ್ಳುತ್ತಿದ್ದಾರೆ” ಎಂದರು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಅಮಾನವೀಯ ಘಟನೆಯನ್ನು ಮಾನವೀಯತೆಯ ಪರವಾಗಿರುವ ಎಲ್ಲಾ ಸಮಾನ ಮನಸ್ಕ ಸಂಘಟನೆಗಳ ಪರವಾಗಿ ತೀವ್ರವಾಗಿ ಖಂಡಿಸುತ್ತೇವೆ. ಅಮಾಯಕ ಜನರ ಜೀವ ಬಲಿ ಪಡೆದ ಕೆಟ್ಟ ಮನಸ್ಥಿತಿವರು ಈ ಜಾತ್ಯಾತೀತ, ಸೌಹಾರ್ದತೆ ನೆಲದ ಮನಸ್ಸುಗಳನ್ನು ಹೊಡೆಯುವುದು ಸಹಿಸುವುದಿಲ್ಲ. ಕೂಡಲೇ ಕೇಂದ್ರ ಸರ್ಕಾರ ನಿಷ್ಪಕ್ಷಪಾತ ತನಿಖೆ ಆದೇಶಿಸಬೇಕು ಎಂದು ಆಗ್ರಹಿಸಿದರು. ಈ ಕೃತ್ಯೆ ಎಸಗಿದವರ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂದರೆ ಮುಂದೆ ಈ ರೀತಿಯ ಕೃತ್ಯವನ್ನು ಯಾರು ಮಾಡಬಾರದು ಆ ರೀತಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಅಲ್ಪಾ ಸಂಖ್ಯಾತರ ಆಯೋಗದ ಸದಸ್ಯರು ಪರಿಮಳ ಜೈನ್, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಸಾಹಿತಿ ಕಲಾವಿದರ ಬಳಗದ ಈರಣ್ಣ ಬೆಳವಡಿ, ಶಂಕರ್ ಮಡಿವಾಳ, ವಿರೂಪಾಕ್ಷ ಹಾವನೂರು, ಶಿವಯೋಗಿ, ಚಂದ್ರಶೇಖರ್ ಮಾಳಗಿ, ಅಂಬಿಕಾ ಹಂಚಾಟೆ, ನೇತ್ರಾವತಿ ಅಂಗಡಿ,ಶಶಿಕಲಾ ಅಕ್ಕಿ, ರೇಣುಕ ಗುಡಿಮನಿ, ರಾಜೇಶ್ವರಿ ಬಿಷ್ಮ್ನಗೌಡ, ಮಹೇಶ್ ಗುರುಲಿಂಗದೆವರಮಠ,  ಎಸ್ಎಫ್ಐ ಮುಖಂಡರಾದ ಅರುಣ್ ನಾಗವತ್, ಚೈತ್ರಾ ಕೊರವರ , ರವಿ ಬಂಕಾಪುರ, ಪಕಿರೇಷ ಮ್ಯಾಗಳಮನಿ, ಸಂಜೀವ್  ಕೆ, ಬಾಲಸಂಘಂನ ಧನುಷ್ ದೊಡ್ಡಮನಿ, ಪ್ರಜ್ವಲ್ ಕೊಪ್ಪದ, ಮೈನುದ್ದೀನ್ ಇಲಿಬುಡ್ಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...